ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವೈದ್ಯರಿಗೆ ಬ್ಲ್ಯಾಕ್‌ಮೇಲ್ ಪ್ರಕರಣ: ಸಿಬ್ಬಂದಿಯನ್ನು ವಜಾಗೊಳಿಸಿದ ಪಬ್ಲಿಕ್ ಟಿವಿ

|
Google Oneindia Kannada News

ಬೆಂಗಳೂರು, ಮಾರ್ಚ್ 20: ವೈದ್ಯರಿಗೆ ಬ್ಲಾಕ್‌ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿಯು ಸಿಬ್ಬಂದಿಯೊಬ್ಬನನ್ನು ವಜಾಗೊಳಿಸಿದೆ.

ವೈದ್ಯ ರಮಣ್ ರಾವ್ ಅವರ ಬಳಿ 5 ಲಕ್ಷ ಪಡೆದುಕೊಂಡು ಪುನಃ 50 ಲಕ್ಷಕ್ಕೆ ಬೇಡಿಕೆ ಇಟ್ಟು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪದಡಿ ಪೊಲೀಸರು ಪಬ್ಲಿಕ್ ಟಿವಿಯ ಹೇಮಂತ್ ಕಶ್ಯಪ್‌ನನ್ನು ಬಂಧಿಸಿದ್ದರು.

ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್.ರಂಗನಾಥ್ ಅವರಿಗೆ ಮಾತೃವಿಯೋಗಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್.ರಂಗನಾಥ್ ಅವರಿಗೆ ಮಾತೃವಿಯೋಗ

ಇದೀಗ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್‌ ಆರ್ ರಂಗನಾಥ್ ಸ್ಪಷ್ಟಪಡಿಸಿದ್ದಾರೆ.

TV reporter blackmails doctor finally suspended

ವೈದ್ಯರ ಖಾಸಗಿ ವಿಡಿಯೋ ತನ್ನ ಬಳಿ ಇರುವುದಾಗಿ ಹೇಳಿದ್ದ ಹೇಮಂತ್ ಹಣ ಕೊಡದಿದ್ದರೆ ಅದನ್ನು ವಾಹಿನಿಯಲ್ಲಿ ಪ್ರಸಾರ ಮಾಡುವುದಾಗಿ ಬೆದರಿಸಿದ್ದ. ಆ ಸಂಬಂಧ ರಮಣ್ ರಾವ್ ದೂರು ನೀಡಿದ್ದರು. ಹಣ ತೆಗೆದುಕೊಂಡು ಹೋಗಲು ಬಂದಿದ್ದ ವೇಳೆಯಲ್ಲಿ ಆರೋಪಿಯನ್ನು ಬಂಧಿಸಿದುರುವುದಾಗಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

TV reporter blackmails doctor finally suspended

ಪಬ್ಲಿಕ್ ಟಿವಿ ಸಿಬ್ಬಂದಿಯ ಬ್ಲ್ಯಾಕ್ ಮೇಲ್ ಪ್ರಕರಣವು ನಮ್ಮ ಗಮನಕ್ಕೆ ಬಂದಿದ್ದು, ಈ ಪ್ರಕರಣದಲ್ಲಿ ಭಾಗಿಯಾದ ಸಿಬ್ಬಂದಿಯನ್ನು ವಜಾ ಮಾಡಿ ಸೂಕ್ತ ಕ್ರಮಕೈಗೊಳ್ಳಲಾಗಿದೆ. ಅಲ್ಲದೇ ಕಾನೂನು ಪ್ರಕಾರ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ಮನವಿಯನ್ನೂ ಮಾಡಿದ್ದೇವೆ ಎಂದು ಎಚ್‌ಆರ್ ರಂಗನಾಥ್ ತಿಳಿಸಿದ್ದಾರೆ.

English summary
Kannada News channel Public tv Cheif HR Ranganath clarified that who blackmails Doctor suspended.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X