HD Devegowda Health : ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಹೆಚ್‌ಡಿ ದೇವೇಗೌಡ ಅವರಿಂದ ಟ್ವೀಟ್!
ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಒಂದೆರಡು ದಿನದಲ್ಲಿ ಮನೆಗೆ ಬರುತ್ತೇನೆ ಎಂದು ಹೆಚ್‌ಡಿ ದೇವೇಗೌಡ ಟ್ವೀಟ್ ಮಾಡಿದ್ದಾರೆ.
ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಅವರು ಅನಾರೋಗ್ಯ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಆತಂಕವನ್ನು ಮೂಡಿಸಿದೆ. ಇದಕ್ಕೆ ಸ್ವತ: ಹೆಚ್‌ಡಿ ದೇವೇಗೌಡರೇ ಟ್ವೀಟ್ ಮೂಲಕ ಅಭಯ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು,' ನಾನು ನಿತ್ಯ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದೇನೆ. ಯಾವುದೇ ಗಾಬರಿ ಅಥವಾ ಆತಂಕದ ಅಗತ್ಯವಿಲ್ಲ. ಒಂದೆರಡು ದಿನದಲ್ಲಿ ಮನೆಗೆ ಬರುತ್ತೇನೆ' ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇಂದು ಬೆಳಿಗ್ಗೆ 10:30ರ ವೇಳೆಗೆ ಹೆಚ್‌ಡಿ ದೇವೇಗೌಡರು ಕಾಲು ಊತ ಜಾಸ್ತಿ ಆಗಿದ್ದ ಕಾರಣ ಜನರಲ್ ಚೆಕಪ್‌ಗೆ ಆಸ್ಪತ್ರೆಗೆ ಆಗಮಿಸಿದ್ದರು. ಹೆಚ್‌ಡಿಡಿ ಆರೋಗ್ಯ ಪರಿಶೀಲನೆ ಮಾಡಿದ ವೈದ್ಯರು ಒಂದು ವಾರ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ವೈದ್ಯರ ಸೂಚನೆ ಮೇರೆಗೆ ದೇವೇಗೌಡರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಇಂದು ಬೆಳಗ್ಗೆ ಚಿಕ್ಕಮಗಳೂರಿನಲ್ಲಿ ಮಾತನಾಡಿದ್ದ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರು, ದೇವೇಗೌಡರು ಆರೋಗ್ಯ ತಪಾಸಣೆಗೆ ಹೋಗಿದ್ದಾರೆ. ಅವರು ಬಂದ ಬಳಿಕ ಹಾಸನ ಟಿಕೆಟ್ ಬಗ್ಗೆ ಅಂತಿಮ ತೀರ್ಮಾನ ಮಾಡಲಾಗುತ್ತದೆ. ಯಾವುದೇ ಗೊಂದಲ ಅವಘಡಕ್ಕೆ ಅವಕಾಶವಿಲ್ಲ. ಅವರ ಸಲಹೆ ಪಡೆದು, ಕಾರ್ಯಕರ್ತರ ಭಾವನೆಗಳಿಗೆ ತಕ್ಕಂತೆ ಅವರೆ ತೀರ್ಮಾನ ಮಾಡುತ್ತಾರೆ ಎಂದು ಹೇಳಿದ್ದರು.
I have come to the hospital for a routine check up. There is no need for any panic or anxiety. I will be back home in a couple of days.
— H D Devegowda (@H_D_Devegowda) February 28, 2023
ಅಲ್ಲದೆ, ನನಗೆ ದೇವೇಗೌಡ ಅವರ ಆರೋಗ್ವೇ ಮುಖ್ಯ. ಈ ವಿಚಾರವಾಗಿ ಅವರಿಗೆ ಹೊರೆ ನೀಡುವುದು ಇಷ್ಟವಿಲ್ಲ. ದೇವೇಗೌಡರ ಆರೋಗ್ಯ ಸ್ಥಿತಿ ಹೇಗಿದೆ ಅಂತ ನನಗೆ ಮಾತ್ರ ಗೊತ್ತು. ಬೇರೆ ಯಾರಿಗೂ ಗೊತ್ತಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದರು.












Click it and Unblock the Notifications