ಅಂಶುಮತಿ ಶಾಸ್ತ್ರಿ ಅವಹೇಳನ, ಇಬ್ಬರ ಬಂಧನ

ಬೆಂಗಳೂರು, ನ.3 : ಗಾಯಕಿ ಪ್ರೇಮಲತಾ ದಿವಾಕರ್ ಶಾಸ್ತ್ರಿ ಪುತ್ರಿ ಅಂಶುಮತಿ ಶಾಸ್ತ್ರಿ ಅವರನ್ನು ಸಾಮಾಜಿಕ ತಾಣದಲ್ಲಿ ಅವಹೇಳನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದ ಇಬ್ಬರು ಆರೋಪಿಗಳಿಗೆ 3ನೇ ಎಸಿಎಂಎಂ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ.

ಹಿಂದಿನ ಸುದ್ದಿ : ಹೊಸನಗರದ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ವಿರುದ್ಧ ದೂರು ನೀಡಿದ್ದ ಗಾಯಕಿ ಪ್ರೇಮಲತಾ ದಿವಾಕರ್ ಶಾಸ್ತ್ರಿ ಪುತ್ರಿ ಅಂಶುಮತಿ ಶಾಸ್ತ್ರಿ ಅವರನ್ನು ಸಾಮಾಜಿಕ ತಾಣದಲ್ಲಿ ಅವಹೇಳನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ.

ಸಾಮಾಜಿಕ ಜಾಲ ತಾಣದಲ್ಲಿ ನನ್ನ ಫೋಟೋಗಳನ್ನು ಹಾಕಿ ಮಾನಹಾನಿ ಮಾಡುತ್ತಿದ್ದಾರೆ ಎಂದು ಅಂಶುಮತಿ ಶಾಸ್ತ್ರಿ ಅವರು ಅ.18ರಂದು ಬನಶಂಕರಿ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಸುಳ್ಯ ತಾಲೂಕಿನ ಬೆಳ್ಳಾರೆಯ ಸನತ್ ಪಾಲೆಪ್ಪಾಡಿ ಮತ್ತು ತೀರ್ಥಹಳ್ಳಿ ಮೂಲದ ಸಂತೋಷ್ ಅವರನ್ನು ಬಂಧಿಸಿದ್ದಾರೆ. [ಆರೋಪಗಳನ್ನು ಎದುರಿಸಲು ಸಿದ್ಧ : ರಾಘವೇಶ್ವರ ಶ್ರೀ]

facebook

ಬಂಧಿತರ ವಿರುದ್ಧ ಐಟಿ ಕಾಯ್ದೆ ಉಲ್ಲಂಘನೆ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಳ್ಳಲಾಗಿದೆ. ಇಬ್ಬರನ್ನೂ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಇಬ್ಬರನ್ನೂ 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ನೀಡಿದೆ. [ಸಂದರ್ಶನದಲ್ಲಿ ಪ್ರೇಮಲತಾ ದಿವಾಕರ್ ಹೇಳಿದ್ದೇನು?]

ಕೆಟ್ಟ ಕಮೆಂಟ್ : ಅಂಶುಮತಿ ಶಾಸ್ತ್ರಿ ಅವರು ಕಾಲೇಜು ದಿನಗಳಲ್ಲಿ ಪಾರ್ಟಿ ನಡೆಸಿದ್ದ ನಾಲ್ಕೈದು ವರ್ಷಗಳ ಹಿಂದಿನ ಫೋಟೋ ಹಾಕಿದ್ದ ಬಂಧಿತರು ಅವುಗಳಿಗೆ ಕೆಟ್ಟ ಕಮೆಂಟ್ ಹಾಕಿದ್ದರು. ಕಮೆಂಟ್‌ನಲ್ಲಿ 'ನನ್ನ ಗುರುಗಳ ಮೇಲೆ ದೂರು ಕೊಟ್ಟ ಗಿರಾಕಿ' ಎಂದು ಬರೆದಿದ್ದಾರೆ ಎಂದು ಅಂಶುಮತಿ ಅವರು ದೂರಿನಲ್ಲಿ ತಿಳಿಸಿದ್ದರು.

ಫೇಸ್‌ಬುಕ್‌ನಲ್ಲಿ ಹಾಕಿದ ಫೋಟೋ ಮತ್ತು ಕಾಮೆಂಟ್‌ಗಳನ್ನು ಸಂಗ್ರಹಿಸಿದ ಪೊಲೀಸರು ಇಬ್ಬರನ್ನು ಭಾನುವಾರ ಬಂಧಿಸಿದ್ದಾರೆ. ಈ ಫೋಟೋಗಳನ್ನು ಹಲವರು ಶೇರ್ ಮಾಡಿದ್ದರು. ಆದರೆ, ಇಬ್ಬರ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ಹಲವರು ಇದನ್ನು ಡಿಲೀಟ್ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+