DK Shivakumar: ಡಿಕೆ ಶಿವಕುಮಾರ್ ಔತಣಕೂಟದಲ್ಲಿ ಇಬ್ಬರು ಬಿಜೆಪಿ ಶಾಸಕರು

ಕಾಂಗ್ರೆಸ್‌ ಕಟ್ಟಾಳು ಎಂದೇ ಹೆಸರು ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಸುವ ಸನಿಹದಲ್ಲಿದ್ದಾರೆ. ಜುಲೈ 2ರಂದು ಅವರು ಕೆಪಿಸಿಸಿ ಅಧ್ಯಕ್ಷರಾಗಿ ವಹಿಸಿಕೊಂಡು 5 ವರ್ಷ ತುಂಬಲಿದ್ದು, ಈ ಹಿನ್ನಲೆಯಲ್ಲಿ ಗುರುವಾರ ಕಾಂಗ್ರೆಸ್‌ನ ಶಾಸಕರಿಗೆ ಔತಣಕೂಟ ಏರ್ಪಡಿಸಿದ್ದರು. ಆದರೆ ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕರಿಗೆ ಆಯೋಜಿಸಿದ್ದ ಔತಣಕೂಟದಲ್ಲಿ ಬಿಜೆಪಿ ಶಾಸಕರು ಕಾಣಿಸಿಕೊಂಡಿದ್ದು ಅಚ್ಚರಿಗೆ ಕಾರಣವಾಗಿದೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರು, ಶಾಸಕರು, ಸಚಿವರು ಭಾಗವಹಿಸಿ ಶುಭಾಶಯ ಕೋರಿದರು. ಡಿಕೆ ಶಿವಕುಮಾರ್ ಅವರ ಔತಣಕೂಟದಲ್ಲಿ ಬಿಜೆಪಿ ಶಾಸಕರಾದ ಎಸ್‌ ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಕಾಣಿಸಿಕೊಂಡಿರುವುದು ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

Two bjp mlas attend dk shivakumars dinner party

ಬೆಂಗಳೂರಿನ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಎಸ್‌ಟಿ ಸೋಮಶೇಖರ್ ಮತ್ತು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಔತಣಕೂಟದಲ್ಲಿ ಭಾಗವಹಿಸಿದ್ದು ಬಿಜೆಪಿ ನಾಯಕರ ಕೋಪಕ್ಕೆ ಕಾರಣವಾಗಿದೆ. ಈ ಇಬ್ಬರು ಶಾಸಕರು ಮೊದಲು ಕಾಂಗ್ರೆಸ್‌ನಲ್ಲಿದ್ದರು, ಬಳಿಕ ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್‌ಗೆ ಕೈಕೊಟ್ಟು ಬಿಜೆಪಿ ಸೇರ್ಪಡೆಯಾಗಿದ್ದರು. ಇಬ್ಬರು ಬಿಜೆಪಿ ಶಾಸಕರಾಗಿದ್ದರೂ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ, ಹಲವು ಬಾರಿ ಕಾಂಗ್ರೆಸ್ ನಾಯಕರ ಜೊತೆ ಕಾಣಿಸಿಕೊಂಡು ಸುದ್ದಿ ಮಾಡಿದ್ದಾರೆ.

ಈ ಇಬ್ಬರೂ ಶಾಸಕರು ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್‌ಗೆ ಮರಳಲಿದ್ದಾರೆ ಎನ್ನುವ ಮಾತುಗಳು ಹಲವು ದಿನಗಳಿಂದ ಕೇಳಿಬರುತ್ತಿವೆ. ಆದರೆ ಕಾರಣಾಂತರದಿಂದ ಇನ್ನೂ ಬಿಜೆಪಿಯಲ್ಲೇ ಇದ್ದಾರೆ. ಎಸ್‌ಟಿ ಸೋಮಶೇಖರ್ ಕೆಲವು ಬಿಜೆಪಿ ನಾಯಕರ ನಡೆಗೆ ಬೇಸರಗೊಂಡಿದ್ದಾರೆ, ಪಕ್ಷದಲ್ಲಿ ಒಗ್ಗಟ್ಟು ಇಲ್ಲದೇ ಇರುವುದು, ತಮ್ಮ ಸಮಸ್ಯೆಯನ್ನು ಹಿರಿಯ ನಾಯಕರ ಗಮನಕ್ಕೆ ತಂದರೂ ಯಾರೂ ಸೂಕ್ತವಾಗಿ ಸ್ಪಂದಿಸದೇ ಇರುವುದಕ್ಕೆ ಅವರು ಪಕ್ಷದಿಂದಲೇ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗಿದೆ.

ಬಜೆಟ್ ಅಧಿವೇಶನದಲ್ಲಿ ಕಾಂಗ್ರೆಸ್‌ನ ಗ್ರೇಟರ್ ಬೆಂಗಳೂರು ಕಾಯ್ದೆಯನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತಿದ್ದರೆ ಸೋಮಶೇಖರ್ ಮಾತ್ರ ಸದನದಲ್ಲಿ ಬಿಜೆಪಿ ನಾಯಕರ ಮುಂದೆಯೇ ಗ್ರೇಟರ್ ಬೆಂಗಳೂರು ಕಾಯ್ದೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಬ್ಬರು ನಾಯಕರು ಇದೀಗ ಡಿಕೆ ಶಿವಕುಮಾರ್ ಜೊತೆ ಔತಣಕೂಟದಲ್ಲಿ ಪಾಲ್ಗೊಂಡಿರುವುದು ಬಿಜೆಪಿ ಹಿರಿಯ ನಾಯಕರಿಗೆ ಸಿಟ್ಟು ತರಿಸಿದ್ದು ಯಾವ ರೀತಿ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+