ಬೆಂಗಳೂರು; ಪೊಲೀಸರಿಗಾಗಿ 2 ಕೋವಿಡ್ ಆಸ್ಪತ್ರೆ ಮೀಸಲು
ಬೆಂಗಳೂರು, ಜೂನ್ 24 : ಬೆಂಗಳೂರು ನಗರದಲ್ಲಿ ಪೊಲೀಸ್ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ಹಬ್ಬುತ್ತಿದೆ. ಪೊಲೀಸ್ ಸಿಬ್ಬಂದಿಗೆ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಎರಡು ಆಸ್ಪತ್ರೆಗಳನ್ನು ಮೀಸಲಾಗಿಟ್ಟಿದೆ.
Recommended Video
ಬುಧವಾರ ಆರೋಗ್ಯ ಇಲಾಖೆ ಈ ಕುರಿತು ಆದೇಶ ಹೊರಡಿಸಿದೆ. ಕನಕಪುರ ರಸ್ತೆಯ ರವಿಶಂಕರ್ ಗುರೂಜಿ ಆಶ್ರಮದಲ್ಲಿ ಒಂದು ಮಹಡಿ ಮತ್ತು ಇಂದಿರಾನಗರದ ಇಎಸ್‌ಐ ಆಸ್ಪತ್ರೆಯನ್ನು ಕೋವಿಡ್ 19 ಸೋಂಕಿತ ಪೊಲೀಸ್ ಸಿಬ್ಬಂದಿಗಾಗಿ ಮೀಸಲಿಡಲಾಗಿದೆ.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಸೋಂಕು ಹರಡದಂತೆ ತಡೆಯಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದರು. ಪೊಲೀಸರ ಆರೋಗ್ಯ ಕಾಪಾಡಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದರು.

ಬೆಂಗಳೂರು ನಗರದಲ್ಲಿ ಪೊಲೀಸರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಯನ್ನು ಮೀಸಲಾಗಿ ಇಡಬೇಕು ಎಂದು ಹೇಳಿದ್ದರು. ಈ ಆದೇಶದ ಅನ್ವಯ ಎರಡು ಆಸ್ಪತ್ರೆಗಳನ್ನು ಆರೋಗ್ಯ ಇಲಾಖೆ ಗುರುತಿಸಿದೆ. ಈ ಆಸ್ಪತ್ರೆಗಳಲ್ಲಿ ಪೊಲೀಸರಿಗೆ ಚಿಕಿತ್ಸೆ ನೀಡಲಾಗುತ್ತದೆ.
ಬೆಂಗಳೂರು ನಗರದಲ್ಲಿ 7 ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಇಬ್ಬರು ಐಪಿಎಸ್ ಅಧಿಕಾರಿಗಳು ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ಇದುವರೆಗೂ 92 ಪೊಲೀಸರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ.
ಸುಮಾರು 870 ಪೊಲೀಸ್ ಸಿಬ್ಬಂದಿ ಕ್ವಾರಂಟೈನ್‌ನಲ್ಲಿದ್ದಾರೆ. ಗೃಹ ಇಲಾಖೆ ಪೊಲೀಸ್ ಸಿಬ್ಭಂದಿಗಳಲ್ಲಿ ಆತ್ಮವಿಶ್ವಾಸ ತುಂಬಿಸುವ ಕೆಲಸವನ್ನು ಮಾಡುತ್ತಿದೆ.












Click it and Unblock the Notifications