ಕಾಲೇಜು ಹುಡುಗಿಯರ ಫೋಟೋಗಳು ಇವರ ಕೈಗೆ ಸಿಕ್ರೆ ಅಷ್ಟೇ ಕಥೆ!
ಬೆಂಗಳೂರು, ಜುಲೈ.30: ಸಿಲಿಕಾನ್ ಸಿಟಿಯಲ್ಲಿ ಹುಡುಗಿಯರ ಫೋಟೋಗಳನ್ನು ಅಶ್ಲೀಲ ವೆಬ್ ಸೈಟ್ ಗಳಲ್ಲಿ ಅಪ್ ಲೋಡ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಅಧಿಕಾರಿಗಳು ಬಂಧಿಸಿದ್ದಾರೆ.
ಕಾಲೇಜು ವಿದ್ಯಾರ್ಥಿನಿಯರ 30ಕ್ಕೂ ಹೆಚ್ಚು ಫೋಟೋಗಳನ್ನು ಅಶ್ಲೀಲ ವೆಬ್ ತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಅಜಯ್ ರಾಜಗೋಪಾಲ್ ಮತ್ತು ವಿಶಕಾತ್ ಬಂಧಿತ ಆರೋಪಿಗಳಾಗಿದ್ದಾರೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯ 66 ಮತ್ತು 67ರ ಅಡಿಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಡಿಸಿಪಿ ಕುಲ್ದೀಪ್ ಜೈನ್ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಕಾಲೇಜು ಹುಡುಗಿಯರ ಫೋಟೋಗಳನ್ನು ಕದಿಯುತ್ತಿದ್ದ ಆರೋಪಿಗಳು ಅದನ್ನು ಅಶ್ಲೀಲ ವೆಬ್ ಸೈಟ್ ಗಳಲ್ಲಿ ಪೋಸ್ಟ್ ಮಾಡುತ್ತಿದ್ದರು ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. ಈ ಸಂಬಂಧ ಆರೋಪಿಗಳ ವಿರುದ್ಧ ಎಂಟು ಎಫ್ಐಆರ್ ದಾಖಲಿಸಿಕೊಂಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಇಬ್ಬರು ಆರೋಪಿಗಳ ನಡುವೆ ಅಶ್ಲೀಲ ಸಂಭಾಷಣೆ:
ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಯಾಗಿದ್ದ ವಿಶಕಾತ್ ಹಾಗೂ ಅವಿವಾಹಿತನಾಗಿದ್ದ ರಾಜಗೋಪಾಲ್ ನಡುವೆ ಸಂದೇಶ ವಿನಿಮಯ ನಡೆಯುತ್ತಿತ್ತು. ಕೆಲವೊಂದು ಬಾರಿ ಅಶ್ಲೀಲ ಸಂಭಾಷಣೆಯೂ ನಡೆದಿತ್ತು ಆದರೆ ಮುಖಾಮುಖಿ ಭೇಟಿ ಆಗಿರಲಿಲ್ಲ. ನಂತರದಲ್ಲಿ ವಿಶಕಾತ್ ತಮ್ಮ ಕಾಲೇಜಿನ ವಿದ್ಯಾರ್ಥಿನಿಯರ ಫೋಟೋಗಳನ್ನು ರಾಜಗೋಪಾಲ್ ಗೆ ಕಳುಹಿಸುತ್ತಿದ್ದನು. ಆ ಫೋಟೋಗಳನ್ನೇ ರಾಜಗೋಪಾಲ್ ಪೋರ್ನ್ ವೆಬ್ ಸೈಟ್ ಗಳಲ್ಲಿ ಅಪ್ ಲೋಡ್ ಮಾಡುತ್ತಿದ್ದನು ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ. ಇಬ್ಬರು ಆರೋಪಿಗಳನ್ನು ಕೋರ್ಟ್ ಗೆ ಹಾಜರುಪಡಿಸಿದ್ದು, ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications