Breaking; ಬಿಜೆಪಿ ಶಾಸಕ ಉದಯ್ ಗರುಡಾಚಾರ್‌ಗೆ ಜೈಲು ಶಿಕ್ಷೆ, ಜಾಮೀನು

ಬೆಂಗಳೂರು, ಅಕ್ಟೋಬರ್ 12; ಬೆಂಗಳೂರು ನಗರದ ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್‌ಗೆ 2 ತಿಂಗಳ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ. ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ ತಕ್ಷಣ ಜಾಮೀನು ಮಂಜೂರು ಮಾಡಿದೆ.

ಗುರುವಾರ 42ನೇ ಎಸಿಎಂಎಂ ಕೋರ್ಟ್‌ ಈ ಕುರಿತು ಆದೇಶ ನೀಡಿದೆ. ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಪ್ರಕರಣದಲ್ಲಿ ದಂಡ ಮತ್ತು ಜೈಲು ಶಿಕ್ಷೆ ವಿಧಿಸಲಾಗಿದೆ.

Two months Jail For Chickept BJP MLA Uday Garudachar

ಪ್ರಕರಣದ ಸುಧೀರ್ಘ ವಿಚಾರಣೆ ನಡೆಸಿದ ಕೋರ್ಟ್ ಇಂದು ಅಂತಿಮ ತೀರ್ಪು ಪ್ರಕಟಿಸಿದೆ. ಆರೋಪ ಸಾಬೀತಾದ ಹಿನ್ನಲೆಯಲ್ಲಿ ಶಾಸಕರಿಗೆ 2 ತಿಂಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿದೆ.

ನ್ಯಾಯಾಲಯ ಜೈಲು ಶಿಕ್ಷೆ ವಿಧಿಸುತ್ತಿದ್ದಂತೆ ಉದಯ್ ಗರುಡಾಚಾರ್‌ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಧೀಶ ಜಿ. ಪ್ರೀತ್‌ ಜಾಮೀನು ಮಂಜೂರು ಮಾಡಿದರು.

ಮೂರು ವರ್ಷಕ್ಕಿಂತ ಕಡಿಮೆ ಅವಧಿಯ ಶಿಕ್ಷೆಯ ಕಾರಣ ನ್ಯಾಯಾಲಯ ತಕ್ಷಣ ಜಾಮೀನು ನೀಡಿದೆ. 25 ಸಾವಿರ ರೂ. ಬಾಂಡ್, ಶ್ಯೂರಿಟಿ ಒದಗಿಸಲು ಸೂಚನೆ ನೀಡಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿತು.

ಎಂ. ಪ್ರಕಾಶ್ ಶೆಟ್ಟಿ ಎಂಬುವವರು ಶಾಸಕರ ವಿರುದ್ಧ ಅಶೋಕ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. 2018ರ ಚುನಾವಣೆಗೆ ಸ್ಪರ್ಧಿಸುವಾಗ ಪ್ರಮಾಣ ಪತ್ರದಲ್ಲಿ ಉದಯ್ ಗರುಡಾಚಾರ್ ತಮ್ಮ ವಿರುದ್ಧದ ಕ್ರಿಮಿನಲ್ ಕೇಸ್‌ಗಳ ಮಾಹಿತಿ ನೀಡಿಲ್ಲ ಎಂದು ಆರೋಪಿಸಿದ್ದರು.

ದೂರಿನಲ್ಲಿರುವ ಆರೋಪ ಸಾಬೀತಾದ ಹಿನ್ನಲೆಯಲ್ಲಿ ನ್ಯಾಯಾಲಯ 2 ತಿಂಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+