ಬೆಂಗಳೂರು: ಅಗ್ನಿ ಅವಘಡದಲ್ಲಿ ಇಬ್ಬರು ಸಜೀವ ದಹನ
ಬೆಂಗಳೂರಿನ ಹಳೇಗುಡ್ಡದಹಳ್ಳಿಯ ಕುರ್ಚಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ವ್ಯಕ್ತಿಗಳ ಸಜೀವ ದಹನವಾದ ಘಟನೆ ನಡೆದಿದೆ.
ಬೆಂಗಳೂರು, ಮಾರ್ಚ್ 31: ಬೆಂಗಳೂರಿನ ಹಳೇಗುಡ್ಡದಹಳ್ಳಿಯ ಕುರ್ಚಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ವ್ಯಕ್ತಿಗಳ ಸಜೀವ ದಹನವಾದ ಘಟನೆ ನಡೆದಿದೆ.

ಇಬ್ರಾಹಿಂ ಖಲೀಲ್ ಎಂಬುವವರಿಗೆ ಸಂಬಂಧಿಸಿದ ಈ ಕಟ್ಟಡದ ಎರಡನೇ ಮಹಡಿಯಲ್ಲಿ ಮದರಸಾ ನಡೆಯುತ್ತಿದ್ದ ಸ್ಥಳದಲ್ಲಿ ಇಬ್ಬರು ಬೆಂಕಿಯ ಕೆನ್ನಾಲಗೆಯಲ್ಲಿ ಬೆಂದುಹೋಗಿದ್ದು, ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಬೆಂಕಿ ಆರಿಸುತ್ತಿದ್ದಾರೆ.
ಮೃತರನ್ನು ಬಿಹಾರ ಮೂಲದವರೆಂದು ಗುರುತಿಸಲಾಗಿದ್ದು, ಜೆ.ಜೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.












Click it and Unblock the Notifications