ಬೆಂಗಳೂರಿಗೆ ಬರಲಿದೆ ಬೈಕ್‌ ಆ್ಯಂಬುಲೆನ್ಸ್‌

U.T.Khader
ಬೆಂಗಳೂರು, ನ.3 : ಮಹಾನಗರ ಬೆಂಗಳೂರಿನ ಸಂಚಾರ ದಟ್ಟಣೆಯಲ್ಲಿ ಆಂಬ್ಯುಲೆನ್ಸ್ ಸಿಕ್ಕಿಹಾಕಿಕೊಂಡು ರೋಗಿಗಳು ಪರದಾಡುವದನ್ನು ತಪ್ಪಿಸಲು ಸರ್ಕಾರ ಮಂದಾಗಿದೆ. ರೋಗಿಗಳಿಗೆ ಸಕಾಲದಲ್ಲಿ ತುರ್ತು ಸೇವೆ ಒದಗಿಸಲು ದ್ವಿಚಕ್ರ ವಾಹನ ಮಾದರಿಯ ಆಂಬ್ಯುಲೆನ್ಸ್ ಸೇವೆ ಆರಂಭಿಸಲು ಚಿಂತಿಮೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಆರೋಗ್ಯ ಸಚಿವ ಯು.ಟಿ.ಖಾದರ್, ಬೆಂಗಳೂರಿನಂತಹ ನಗರಗಳಲ್ಲಿ ರೋಗಿಗಳಿಗೆ ಸಕಾಲದಲ್ಲಿ ತುರ್ತು ಚಿಕಿತ್ಸೆ ಕಲ್ಪಿಸಲು ಕಷ್ಟಕರವಾಗಿದೆ. ಆದ್ದರಿಂದ ದ್ವಿಚಕ್ರ ವಾಹನ ಮಾದರಿಯ ಆಂಬ್ಯುಲೆನ್ಸ್ ಸೇವೆ ಆರಂಭಿಸಲು ನಿರ್ಧರಿಸಲಾಗಿದ್ದು, ಸದ್ಯದಲ್ಲೇ ಈ ಸೇವೆಗೆ ಚಾಲನೆ ನೀಡಲಾಗುವುದು ಎಂದರು.

ಬೈಕ್‌ ಆ್ಯಂಬುಲೆನ್ಸ್‌ಗಳನ್ನು ಸೇವೆಯಲ್ಲಿ ತೊಡಗಿಸುವ ಯೋಚನೆ ಆರೋಗ್ಯ ಇಲಾಖೆಗಿದೆ. ಈ ವಿನೂತನ ಯೋಜನೆ ಆರಂಭಿಕ ಹಂತದಲ್ಲಿದ್ದು, ಇದರ ರೂಪುರೇಷೆ ಸಿದ್ಧಪಡಿಸಬೇಕಿದೆ. ಅದಷ್ಟು ಬೇಗ ರೂಪುರೇಷೆ ರೂಪಿಸಿ ಪ್ರಾಯೋಗಿಕವಾಗಿ ಜಾರಿ ಮಾಡಲಾಗುವುದು ಎಂದು ಖಾದರ್‌ ಮಾಹಿತಿ ನೀಡಿದರು.

94 ಹೊಸ ಆಂಬ್ಯುಲೆನ್ಸ್ : ಕರ್ನಾಟಕದಲ್ಲಿ ಆರೋಗ್ಯ ಕವಚ ಸೇವೆಯಡಿ 517 ಆಂಬ್ಯುಲೆನ್ಸ್‌ಗಳು ಕಾರ್ಯ ನಿರ್ವಹಿಸುತ್ತಿವೆ. ಇದರಲ್ಲಿ 150 ಆಂಬ್ಯುಲೆನ್ಸ್‌ಗಳನ್ನು ಬದಲಾಯಿಸಿ, 94 ವಾಹನಗಳನ್ನು ಹೊಸದಾಗಿ ಸೇರ್ಪಡೆ ಮಾಡಲಾಗುವುದು ಎಂದು ಯು.ಟಿ.ಖಾದರ್ ಹೇಳಿದರು.

ಆಶಾ ಕಾರ್ಯಕರ್ತೆಯರಿಗೆ ಮೊಬೈಲ್ : ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಮಾರು 35,000 ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ಶೀಘ್ರದಲ್ಲೇ ಮೊಬೈಲ್ ನೀಡಲಿದೆ. ಆ ಮೂಲಕ ಈ ಯೋಜನೆ ಜಾರಿಗೊಳಿಸಿದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಲಿದೆ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಂ.ಮದನ್‌ಗೋಪಾಲ್ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+