ಬೆಂಗಳೂರು ವಿವಿ ವ್ಯಾಪ್ತಿಯ ಎಲ್ಲಾ ಪದವಿ ಕಾಲೇಜುಗಳು ಜು.2ಕ್ಕೆ ಆರಂಭ
ಬೆಂಗಳೂರು, ಜೂನ್ 28: ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಹಾಗೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಪದವಿ ಕಾಲೇಜುಗಳಲ್ಲಿ ಜು.2ರ ಸೋಮವಾರದಿಂದ ತರಗತಿಗಳು ಆರಂಭವಾಗಲಿದೆ.
ಅನೇಕ ಕಾರಣಗಳಿಂದಾಗಿ ಎರಡು ಬಾರಿ ಈ ಮೂರು ವಿಶ್ವವಿದ್ಯಾಲಯಗಳ ವ್ಯಾಪ್ತಿಯ ಪದವಿ ಕಾಲೇಜುಗಳ ಪ್ರಾರಂಭದ ದಿನಾಂಕವನ್ನು ಮುಂದೂಡಲಾಗಿತ್ತು. ಇದೀಗ ಜು.2ರಿಂದ ತರಗತಿಗಳನ್ನು ಆರಂಭಿಸಲಾಗುವುದು ಎಂದು ವಿಶ್ವವಿದ್ಯಾಲಯಗಳು ಅಧಿಸೂಚನೆ ಹೊರಡಿಸಿದೆ.
ಬೆಂಗಳೂರು ಕೇಂದ್ರ ವಿದ್ಯಾಳಯವು ಈ ಸಂಬಂಧ ಸ್ಪಷ್ಟ ನಿರ್ಧಾರಕ್ಕೆ ಬಂದಿರಲಿಲ್ಲ ಇದರಿಂದ ವಿದ್ಯಾರ್ಥಿಗಳು ಅಧ್ಯಾಪಕರಲ್ಲಿ ಗೊಂದಲ ಉಂಟಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಜಾಫೆಟ್, ತಮ್ಮ ವಿಶ್ವವಿದ್ಯಾಲಯಕ್ಕೆ ಸೇರಿದ ಪದವಿ ಕಾಲೇಜುಗಳ ತರಗತಿಗಳನ್ನು ಜು.2ರಿಂದ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯ ತ್ರಿಭಜನೆಗೊಂಡ ನಂತರ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಹಾಗೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯಗಳಲ್ಲಿ 2018-19ನೇ ಸಾಲಿನಿಲಿಂದ ಬಿ.ಎ, ಬಿಎಸ್ಇ, ಬಿ.ಕಾಂ, ಬಿಬಿಎಂ, ಬಿಸಿಎ, ಬಿಎಚ್ಎಂ ಕೋರ್ಸ್ಗಳ ಪ್ರಥಮ ಸೆಮಿಸ್ಟರ್ನ ತರಗತಿಗಳು ಆರಂಭವಾಗಲಿದೆ.
ಆದರೆ ಮೂರು ವಿಶ್ವವಿದ್ಯಾಲಯಗಳ ವ್ಯಾಪ್ತಿಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 3,4,5 ಹಾಗೂ 6ನೇ ಸೆಮಿಸ್ಟರ್ ನ ವಿದ್ಯಾರ್ಥಿಗಳು ಸಂಪೂರ್ಣವಾಗಿ ಬೆಂಗಳೂರು ವಿಶ್ವವಿದ್ಯಾಲಯದ ನಿಯಂತ್ರಣಕ್ಕೆ ಒಳಪಡಲಿವೆ.
ಹಾಗಾಗಿ ಇನ್ನು ಎರಡು ವರ್ಷಗಳ ಕಾಲ ಬೆಂಗಳೂರು ವಿಶ್ವವಿದ್ಯಾಲಯ ತೆಗೆದುಕೊಳ್ಳುವ ಎಲ್ಲಾ ನಿರ್ಧಾರಗಳನ್ನು ಮೂರು ವಿಶ್ವವಿದ್ಯಾಲಯಗಳಲ್ಲಿರುವ ವಿದ್ಯಾರ್ಥಿಗಳು ಪಾಲಿಸಬೇಕು.
ಆದರೆ ಇದೀಗ ಜು.2ರಿಂದಲೇ ತರಗತಿಗಳನ್ನು ಪ್ರಾರಂಭಿಸಲು ಮುಂದಾಗಿರುವುದರಿಂದ ಎಲ್ಲಾ ಗೊಂದಲಕ್ಕೂ ತೆರೆಬಿದ್ದಂತಾಗಿದೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications