ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ವಿವಿ ವ್ಯಾಪ್ತಿಯ ಎಲ್ಲಾ ಪದವಿ ಕಾಲೇಜುಗಳು ಜು.2ಕ್ಕೆ ಆರಂಭ

By Nayana
|
Google Oneindia Kannada News

ಬೆಂಗಳೂರು, ಜೂನ್‌ 28: ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಹಾಗೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಪದವಿ ಕಾಲೇಜುಗಳಲ್ಲಿ ಜು.2ರ ಸೋಮವಾರದಿಂದ ತರಗತಿಗಳು ಆರಂಭವಾಗಲಿದೆ.

ಅನೇಕ ಕಾರಣಗಳಿಂದಾಗಿ ಎರಡು ಬಾರಿ ಈ ಮೂರು ವಿಶ್ವವಿದ್ಯಾಲಯಗಳ ವ್ಯಾಪ್ತಿಯ ಪದವಿ ಕಾಲೇಜುಗಳ ಪ್ರಾರಂಭದ ದಿನಾಂಕವನ್ನು ಮುಂದೂಡಲಾಗಿತ್ತು. ಇದೀಗ ಜು.2ರಿಂದ ತರಗತಿಗಳನ್ನು ಆರಂಭಿಸಲಾಗುವುದು ಎಂದು ವಿಶ್ವವಿದ್ಯಾಲಯಗಳು ಅಧಿಸೂಚನೆ ಹೊರಡಿಸಿದೆ.

ಪಿಯು ವಿದ್ಯಾರ್ಥಿಗಳು ಮುಚ್ಚಳಿಕೆ ಬರೆದು ಕೊಡುವುದು ಇನ್ನು ಕಡ್ಡಾಯ ಪಿಯು ವಿದ್ಯಾರ್ಥಿಗಳು ಮುಚ್ಚಳಿಕೆ ಬರೆದು ಕೊಡುವುದು ಇನ್ನು ಕಡ್ಡಾಯ

ಬೆಂಗಳೂರು ಕೇಂದ್ರ ವಿದ್ಯಾಳಯವು ಈ ಸಂಬಂಧ ಸ್ಪಷ್ಟ ನಿರ್ಧಾರಕ್ಕೆ ಬಂದಿರಲಿಲ್ಲ ಇದರಿಂದ ವಿದ್ಯಾರ್ಥಿಗಳು ಅಧ್ಯಾಪಕರಲ್ಲಿ ಗೊಂದಲ ಉಂಟಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಜಾಫೆಟ್‌, ತಮ್ಮ ವಿಶ್ವವಿದ್ಯಾಲಯಕ್ಕೆ ಸೇರಿದ ಪದವಿ ಕಾಲೇಜುಗಳ ತರಗತಿಗಳನ್ನು ಜು.2ರಿಂದ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

UG classes under Bengaluru university from July 2

ಬೆಂಗಳೂರು ವಿಶ್ವವಿದ್ಯಾಲಯ ತ್ರಿಭಜನೆಗೊಂಡ ನಂತರ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಹಾಗೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯಗಳಲ್ಲಿ 2018-19ನೇ ಸಾಲಿನಿಲಿಂದ ಬಿ.ಎ, ಬಿಎಸ್‌ಇ, ಬಿ.ಕಾಂ, ಬಿಬಿಎಂ, ಬಿಸಿಎ, ಬಿಎಚ್‌ಎಂ ಕೋರ್ಸ್‌ಗಳ ಪ್ರಥಮ ಸೆಮಿಸ್ಟರ್‌ನ ತರಗತಿಗಳು ಆರಂಭವಾಗಲಿದೆ.

ಆದರೆ ಮೂರು ವಿಶ್ವವಿದ್ಯಾಲಯಗಳ ವ್ಯಾಪ್ತಿಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 3,4,5 ಹಾಗೂ 6ನೇ ಸೆಮಿಸ್ಟರ್‌ ನ ವಿದ್ಯಾರ್ಥಿಗಳು ಸಂಪೂರ್ಣವಾಗಿ ಬೆಂಗಳೂರು ವಿಶ್ವವಿದ್ಯಾಲಯದ ನಿಯಂತ್ರಣಕ್ಕೆ ಒಳಪಡಲಿವೆ.

ಹಾಗಾಗಿ ಇನ್ನು ಎರಡು ವರ್ಷಗಳ ಕಾಲ ಬೆಂಗಳೂರು ವಿಶ್ವವಿದ್ಯಾಲಯ ತೆಗೆದುಕೊಳ್ಳುವ ಎಲ್ಲಾ ನಿರ್ಧಾರಗಳನ್ನು ಮೂರು ವಿಶ್ವವಿದ್ಯಾಲಯಗಳಲ್ಲಿರುವ ವಿದ್ಯಾರ್ಥಿಗಳು ಪಾಲಿಸಬೇಕು.
ಆದರೆ ಇದೀಗ ಜು.2ರಿಂದಲೇ ತರಗತಿಗಳನ್ನು ಪ್ರಾರಂಭಿಸಲು ಮುಂದಾಗಿರುವುದರಿಂದ ಎಲ್ಲಾ ಗೊಂದಲಕ್ಕೂ ತೆರೆಬಿದ್ದಂತಾಗಿದೆ.

English summary
Confusion is over about under graduation courses classes under undivided Bengaluru university and exams will be resumed from July 2. Earlier two times exams were postponed for technical reasons.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X