KEA UGAyush: ಸ್ಟ್ರೇ ವೆಕೆನ್ಸಿ ಸುತ್ತಿಗೆ ಅರ್ಜಿ ಸಲ್ಲಿಕೆಯ ವೇಳಾಪಟ್ಟಿ ಪ್ರಕಟ, ಡಿಸೆಂಬರ್ 05 ಕೊನೆ ದಿನ
ಬೆಂಗಳೂರು, ಡಿಸೆಂಬರ್ 03: UGNEET 2025 ಆಯುಷ್ ಕೋರ್ಸ್ ಗಳ ಸ್ಟ್ರೇ ವೇಕೆನ್ಸಿ 3ನೇ ಸುತ್ತಿನ ಸೀಟು ಹಂಚಿಕೆಗೆ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ಡಿಸೆಂಬರ್ 5 ಶುಕ್ರವಾರ ಕೊನೆಯ ದಿನವಾಗಿದೆ ಎಂದು ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ತಿಳಿಸಿದ್ದಾರೆ.
ಯುಜಿ ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಎನ್ ಸಿ ಐ ಎಸ್ ಎಂ, ಡಿಸೆಂಬರ್ 10ರವರೆಗೆ ಅವಕಾಶ ನೀಡಲಾಗಿದೆ. ಈ ಕಾರಣದಿಂದ ಯುಜಿ ಆಯುಷ್ ಕೋರ್ಸ್‌ಗಳ 3ನೇ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಮಾಡಲಾಗುತ್ತಿದೆ. ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ಅವಕಾಶ ನೀಡಲಾಗಿದೆ. ನೀಟ್ ರೋಲ್ ನಂಬರ್ ಲಿಂಕ್ ಮಾಡಿಕೊಳ್ಳಲು (ವೈ ಕ್ಲಾಸ್ ಮಾತ್ರ) ಡಿಸೆಂಬರ್ 3 ರಿಂದ 5ರವವರೆಗೆ ಅವಕಾಶ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಹೊಸದಾಗಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಇಂದು ಡಿಸೆಂಬರ್ 3ರ ಸಂಜೆ 6ರಿಂದ ಡಿಸೆಂಬರ್ 5ರ ಶುಕ್ರವಾರ ಮಧ್ಯಾಹ್ನ 1ಗಂಟೆವರೆಗೆ ಅವಕಾಶ ನೀಡಲಾಗಿದೆ. ಡಿಸೆಂಬರ್ 5ರ ಸಂಜೆ 6 ಗಂಟೆ ನಂತರ ತಾತ್ಕಾಲಿಕ ಫಲಿತಾಂಶ ಬಿಡುಗಡೆ ಮಾಡಲಾಗುವುದು. ನಂತರ ಮರುದಿನ ಡಿಸೆಂಬರ್ 6ರಂದು ಮಧ್ಯಾಹ್ನ 2 ಗಂಟೆ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದರು.
ಶುಲ್ಕ ಪಾವತಿ ಡಿಸೆಂಬರ್ 9 ಕೊನೆ ದಿನ
ಇನ್ನೂ ಯುಜಿ ಆಯುಷ್ ಕೋರ್ಸ್‌ಗಳಿಗೆ ಸೀಟು ಹಂಚಿಕೆ ಆದವರು ಡಿಸೆಂಬರ್ 6 ರಿಂದ 9ರವರೆಗೆ ಶುಲ್ಕ ಪಾವತಿಸಬೇಕು. ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಸಂಬಂಧಪಟ್ಟ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು ಎಂದು ಅವರು ತಿಳಿಸಿದ್ದಾರೆ.
ಅಭ್ಯರ್ಥಿಗಳು ಗಮನಿಸಬೇಕಾದ ವಿಷಯವೇನೆಂದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಕೃತ ವೆಬ್‌ಸೈಟ್‌ನಲ್ಲಿ https://cetonline.karnataka.gov.in/kea/kahvs ಪ್ರಕಟಿಸಲಾದ ನವೆಂಬರ್ 25ರ ಪ್ರಕಟಣೆ ಓದಿಕೊಳ್ಳಬೇಕು. ಅದರಲ್ಲಿನ ಸೂಚನೆ ಮತ್ತು ಮಾರ್ಗಸೂಚಿಗಳು ಎಲ್ಲ ಸುತ್ತಿನ ಸೀಟು ಹಂಚಿಕೆಗಳಿಗೆ ಅನ್ವಯವಾಗುತ್ತವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಾಲೇಜು ಪ್ರವೇಶಕ್ಕೆ ಕೆಇಎ ಸೂಚನೆ
ಇನ್ನೂ UGAyush ಎರಡನೇ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಬಿಡುಗಡೆ ಬೆನ್ನಲ್ಲೆ ಶುಲ್ಕ ಪಾವತಿಗೆ ಡಿಸೆಂಬರ್ 3ರತನಕ ಅವಕಾಶ ನೀಡಲಾಗಿತ್ತು. ಮೂಲ ದಾಖಲೆಗಳ ಸಮೇತ ಡಿಸೆಂಬರ್ 4ರೊಳಗೆ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕೆಂದು ಈಗಾಗಲೇ ಪ್ರಾಧಿಕಾರ ಸೂಚಿಸಿದೆ.
ಅದೇ ರೀತಿ PGNEET 2025 ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದವರು ಶುಲ್ಕ ಪಾವತಿಸಿ, ಕಾಲೇಜಿಗೆ ವರದಿ ಮಾಡಿಕೊಳ್ಳಲು ಡಿಸೆಂಬರ್ 3ರವರೆಗೆ ದಿನಾಂಕ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಾಧಿಕಾರ ಮಾಹಿತಿ ನೀಡಿದೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications