ಬೆಂಗಳೂರಿನ ಹಲಸೂರು ಕೆರೆ ಅಭಿವೃದ್ಧಿಗೆ ಯೋಜನೆ ಸಿದ್ಧ
ಬೆಂಗಳೂರು, ಮಾ.12 : 'ನಮ್ಮ ಬೆಂಗಳೂರು ನನ್ನ ಕೊಡುಗೆ' ಯೋಜನೆಯಡಿ ಹಲಸೂರು ಕೆರೆಯನ್ನು ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಬಿಬಿಎಂಪಿ ಮೇಯರ್ ಎನ್.ಶಾಂತಕುಮಾರಿ ಹೇಳಿದ್ದಾರೆ. ಕೆರೆ ಅವರಣದಲ್ಲಿ ಶುಚಿತ್ವ ಕಾಪಾಡುವಂತೆ ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದ್ದಾರೆ.
ಬಿಬಿಎಂಪಿ ಮೇಯರ್ ಶಾಂತಕುಮಾರಿ ಅವರು ಬುಧವಾರ ಹಲಸೂರು ಕೆರೆಗೆ ಭೇಟಿ ನೀಡಿದ್ದರು. ಈ ಕೆರೆಯನ್ನು ಅಭಿವೃದ್ಧಿಗೊಳಿಸುವ ಹೊಣೆಯನ್ನು ಪ್ರೆಸ್ಟೀಜ್ ಸಂಸ್ಥೆಗೆ ನೀಡಲಾಗಿದೆ. ನಮ್ಮ ಬೆಂಗಳೂರು ನನ್ನ ಕೊಡುಗೆ ಯೋಜನೆಯಡಿ ಕೆರೆ ಅಭಿವೃದ್ಧಿಯಾಗಲಿದೆ ಎಂದು ಹೇಳಿದರು.'

ಹಲಸೂರು ಕೆರೆಯ ಒಂದು ಭಾಗದಲ್ಲಿ ಶುದ್ಧೀಕರಣ ಘಟಕವಿದೆ. ಆದರೆ, ಶಿವಾಜಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಕೊಳಚೆ ನೀರು ಕೆರೆಗೆ ಬಂದು ಸೇರುತ್ತಿದೆ. ಆದ್ದರಿಂದ ಕೆರೆಯ ಪರಿಸರ ಹಾಳಾಗಿದೆ ಎಂದು ಮೇಯರ್ ತಿಳಿಸಿದರು. [ಯಡಿಯೂರು ಕೆರೆ ಮೇಲೊಂದು ಪಕ್ಷಿ ನೋಟ]
ಕೆರೆಯನ್ನು ಅಭಿವೃದ್ಧಿಪಡಿಸಿ, ಕೆರೆಯಲ್ಲಿ ನೈರ್ಮಲ್ಯ ಕಾಪಾಡುವುದು, ನೀರನ್ನು ಸ್ವಚ್ಛಗೊಳಿಸುವ ಹೊಣೆಯನ್ನು ಪ್ರೆಸ್ಟೀಜ್ ಸಂಸ್ಥೆಗೆ ನೀಡಲಾಗಿದೆ. ಕೆರೆಯನ್ನು ಅಭಿವೃದ್ಧಿಪಡಿಸಿ ವಾಯುವಿಹಾರಿಗಳು ಬಳಸುವಂತೆ ಮಾಡುವ ಗುತ್ತಿಗೆಯನ್ನು ನೀಡಲಾಗಿದೆ ಎಂದರು.

ಅಧಿಕಾರಿಗಳಿಗೆ ತರಾಟೆ : ಕೆರೆಯ ಆವರಣದಲ್ಲಿ ಪ್ಲಾಸ್ಟಿಕ್ ಚೀಲ, ಬಾಟಲ್, ಕಸ-ಕಡ್ಡಿ ತೇಲುತ್ತಿರುವುದನ್ನು ನೋಡಿದ ಮೇಯರ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಇವುಗಳನ್ನು ತಕ್ಷಣ ಸ್ವಚ್ಛಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

-
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ











Click it and Unblock the Notifications