ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಮಾರ್ಚ್ 1ಕ್ಕೆ ಬಿಜೆಪಿ ಸೇರ್ತಾರಾ?

|
Google Oneindia Kannada News

ಬೆಂಗಳೂರು, ಫೆಬ್ರವರಿ 19: ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಬಿಜೆಪಿಗೆ ಬರುವ ಕುರಿತು ಸಾಕಷ್ಟು ಗುಸು ಗುಸು ಕೇಳಿಬಂದಿತ್ತು, ಆದರೆ ಈ ಊಹೆ ನಿಜವಾಗುತ್ತೆ ಎನ್ನುವ ಮಾತುಗಳೂ ಕೂಡ ಕೇಳಿಬಂದಿದೆ.

ಉಮೇಶ್ ಜಾಧವ್ ಕಾಂಗ್ರೆಸ್ ತೊರೆಯಲು 3 ಕಾರಣಗಳು ಉಮೇಶ್ ಜಾಧವ್ ಕಾಂಗ್ರೆಸ್ ತೊರೆಯಲು 3 ಕಾರಣಗಳು

ಮಾರ್ಚ್ 1 ರಂದು ಕಲಬುರಗಿಯಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಾವೇಶದಲ್ಲಿ ಶಾಸಕ ಡಾ. ಉಮೇಶ್ ಜಾಧವ್ ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎನ್ನುವ ನಿರೀಕ್ಷೆ ಇದೆ.

ಚಿಂಚೋಳಿ ಕಾಂಗ್ರೆಸ್‌ ಶಾಸಕ ಡಾ.ಉಮೇಶ್ ಜಾಧವ್‌ ಬಿಜೆಪಿಗೆ? ಚಿಂಚೋಳಿ ಕಾಂಗ್ರೆಸ್‌ ಶಾಸಕ ಡಾ.ಉಮೇಶ್ ಜಾಧವ್‌ ಬಿಜೆಪಿಗೆ?

ಈ ಬಗ್ಗೆ ಇದುವರೆಗೆ ಅಧಿಕೃತ ಮಾಹಿತಿ ಹೊರಬೀಳದಿದ್ದರೂ, ಇಂಥದೊಂದು ಸುದ್ದಿ ಬಿಜೆಪಿ ಪಾಳಯದಲ್ಲಿ ಹರಿದಾಡುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಈವರೆಗೆ ಯಾರೂ ಸಂಪರ್ಕ ಮಾಡಿಲ್ಲ, ಆ ದಿನದವರೆಗೆ ಕಾದು ನೋಡೋಣ ಎಂದು ಮಾರ್ಮಿಕವಾಗಿ ಹೇಳಿರುವುದು ಇದೀಗ ಇನ್ನಷ್ಟು ಕುತೂಹಲಗಳಿಗೆ ಕಾರಣವಾಗಿದೆ.

Umesh jadhav will join BJP on march 1?

ಚಿಂಚೋಳಿ ಕ್ಷೇತ್ರದ ಶಾಸಕ ಜಾಧವ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎನ್ನುವ ಮಾಹಿತಿ ಕೂಡ ಲಭ್ಯವಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಅವರು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧೆ ಮಾಡುವ ಸಾಧ್ಯತೆ ಇದೆ.

English summary
There is a speculation that congress MLA Umesh jadhav is joining BJP om March 1.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X