ಉಮೇಶ್ ಜಾಧವ್ ರಾಜೀನಾಮೆ ಅಂಗೀಕರಿಸಿದ ಸ್ಪೀಕರ್ ರಮೇಶ್ ಕುಮಾರ್

ಬೆಂಗಳೂರು, ಏಪ್ರಿಲ್ 01: ಚಿಂಚೋಳಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದ ಉಮೇಶ್ ಜಾಧವ್ ಅವರ ರಾಜೀನಾಮೆಯಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರು ಇಂದು ಅಂಗೀಕರಿಸಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಮಾರ್ಚ್ 4 ರಂದು ಉಮೇಶ್ ಜಾಧವ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಅದಕ್ಕೂ ಮುನ್ನಾ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಉಮೇಶ್ ಜಾಧವ್ ವಿರುದ್ಧ ದೂರು ನೀಡಿದ್ದ ಕಾರಣ, ರಾಜೀನಾಮೆ ಅಂಗೀಕಾರ ಗೊಂದಲದ ಗೂಡಾಗಿತ್ತು.

ಉಮೇಶ್ ಜಾಧವ್ ಅವರ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆ ಜಾರಿ ಮಾಡಬೇಕು ಎಂಬುದು ಕಾಂಗ್ರೆಸ್ ನ ಒತ್ತಾಯವಾಗಿತ್ತು, ಅದರಂತೆ ಸ್ಪೀಕರ್ ರಮೇಶ್ ಕುಮಾರ್ ಅವರು ಜಾಧವ್ ಅವರಿಗೆ ನೊಟೀಸ್ ನೀಡಿ ವಿಚಾರಣೆ ನಡೆಸಿದರು. ಕೊನೆಗೆ ಇಂದು ಜಾಧವ್ ಅವರ ರಾಜೀನಾಮೆ ಅಂಗೀಕರಿಸಲಾಗಿದೆ.

Umesh Jadhavs resignation accepted by speaker Ramesh Kumar

ಉಮೇಶ್ ಜಾಧವ್ ಅವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಅವರು ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಹಿರಿಯ ಸಂಸದ ಮಲ್ಲಿಕಾರ್ಜುನ ಖರ್ಗೆ ಎದುರು ಸ್ಪರ್ಧಿಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+