ದೋಸ್ತಿ ದೋಖಾ! ಸ್ನೇಹಿತೆಗೆ ತಿಳಿಯದಂತೆ ಆಕೆ ಹೆಸರಿನಲ್ಲಿ 30 ಲಕ್ಷ ಸಾಲ ಪಡೆದು ವಂಚಿಸಿದ ಸ್ನೇಹಿತ!

ಬೆಂಗಳೂರು ಜುಲೈ 26: ಸ್ನೇಹಿತನೊಬ್ಬ ಸ್ನೇಹಿತೆಗೆ ತಿಳಿಯದಂತೆ ಆಕೆ ಹೆಸರಿನಲ್ಲಿ 30 ಲಕ್ಷ ಸಾಲ ಪಡೆದು ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸ್ನೇಹಿತೆ ತನ್ನ ಸ್ನೆಹಿತನ ವಿರುದ್ಧ ದೂರು ದಾಖಲಿಸಿದ್ದಾಳೆ.

ಹೌದು... ಸ್ನೇಹಿತೆಯ ಗಮನಕ್ಕೆ ಬಾರದಂತೆ ಆಕೆ ಹೆಸರಿನಲ್ಲಿ 30 ಲಕ್ಷ ಸಾಲ ಪಡೆದು ವಂಚಿಸಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Unbeknownst to the friend the friend cheated by taking a loan of 30 lakhs in her name in bengaluru

ಮಾರತಹಳ್ಳಿ ಅಶ್ವತ್ಥನಗರದ ಮೆಲಿಸ್ಸಾ ಪೌರಬ್ಬಾಸ್ ಎಂಬುವವರು ನೀಡಿದ ದೂರಿನ ಮೇರೆಗೆ ಗುರಪ್ಪನ ಪಾಳ್ಯದ ಮೊಹಮ್ಮದ್ ವಸೀಮ್ ಶೇಖ್ (28) ಎಂಬಾತನ ವಿರುದ್ಧ ನಂಬಿಕೆ ದ್ರೋಹ ಮತ್ತು ವಂಚನೆ ಆರೋಪದಡಿ ಎಫ್‌ಐಆರ್‌ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಆಗಿದ್ದೇನು?

2019ರಂದು ನಗರದ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಕ್ಕೆ ಸೇರಿದ್ದ ಮೆಲಿಸ್ಸಾಗೆ ಇದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೊಹಮ್ಮದ್ ವಸೀಪ್ ಶೇಖ್ ಪರಿಚಯವಾಗಿತ್ತು. ಇಬ್ಬರು ಸ್ನೇಹಿತರಾಗಿದ್ದರು. 2021ರಲ್ಲಿ ಮೆಲಿಸ್ಸಾ ಆ ಕಂಪನಿಯಲ್ಲಿ ಉದ್ಯೋಗ ತೊರೆದು ಬೇರೊಂದು ಕಂಪನಿಗೆ ಸೇರಿದ್ದರು.

ಸ್ನೇಹಿತ ವಂಚಿಸಿದ್ದು ಹೇಗೆ?

2022ರಲ್ಲಿ ಮೊಹಮ್ಮದ್ ವಸೀಮ್ ಶೇಖ್, ಮೆಲಿಸ್ಸಾ ಅವರನ್ನು ಭೇಟಿಯಾಗಿ 'ನನ್ನ ಎರಡೂ ಮೂತ್ರಪಿಂಡಗಳು ಹಾಳಾಗಿವೆ. ಕಸಿ ಮಾಡಿಸಿಕೊಳ್ಳಲು ಹಣದ ಅಗತ್ಯವಿದೆ. ನನಗೆ ನಿನ್ನ ಬಿಟ್ಟರೆ ಬೇರೆ ಪರಿಚಯಸ್ಥರು ಇಲ್ಲ. ಕಸಿ ಮಾಡಿಸಲು 10 ಲಕ್ಷ ಅಗತ್ಯವಿದ್ದು, ನಿನ್ನ ಬ್ಯಾಂಕ್ ಖಾತೆಯಿಂದ 10 ಲಕ್ಷ ಸಾಲ ಕೊಡಿಸು' ಎಂದು ಕೇಳಿದ್ದಾನೆ. ಇದಕ್ಕೆ ಮೆಲಿಸ್ಸಾ ಒಪ್ಪಿಗೆ ಸೂಚಿಸಿದ್ದಾರೆ.

ಮೂರು ಬ್ಯಾಂಕ್‌ಗಳಲ್ಲಿ ತಲಾ 10 ಲಕ್ಷ ಸಾಲ!

ಮೊಹಮ್ಮದ್ ವಸೀಮ್ ಶೇಖ್, ಮೆಲಿಸ್ಸಾ ಗಮನಕ್ಕೆ ಬಾರದಂತೆ ಆಕೆಯ ಹೆಸರಿನಲ್ಲಿ ಮೂರು ಬೇರೆ ಬ್ಯಾಂಕ್‌ಗಳಲ್ಲಿ ತಲಾ 10 ಲಕ್ಷದಂತೆ ಒಟ್ಟು ಮೂರು ಲಕ್ಷ ಸಾಲ ತೆಗೆದುಕೊಂಡಿದ್ದಾನೆ. ಈ ವಿಚಾರ ಗೊತ್ತಾಗಿ ಮೆಲಿಸ್ಸಾ ಪ್ರಶ್ನೆ ಮಾಡಿದಾಗ ಏಳು ಲಕ್ಷ ವಾಪಾಸ್ ನೀಡಿದ್ದಾನೆ. ಉಳಿದ ಹಣ ವಾಪಾಸ್ ಕೇಳಲು ಕರೆ ಮಾಡಿದಾಗ ಮೊಹಮ್ಮದ್ ವಸೀಮ್ ಶೇಖ್ ಮೊಬೈಲ್ ಸ್ವಚ್ಡ್ ಆಫ್ ಮಾಡಿಕೊಂಡಿದ್ದಾನೆ.

ಹೀಗಾಗಿ ತಮಗೆ ನಂಬಿಕೆ ದ್ರೋಹ, ಮೋಸ ಮಾಡಿರುವ ಮೊಹಮ್ಮದ್ ವಸೀಮ್ ಶೇಖ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮೆಲಿಸ್ಸಾ ಎಚ್ಎಎಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+