ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನೀರಿನ ಟ್ಯಾಂಕ್ ಕುಸಿತ, ಮೃತಪಟ್ಟವರಿಗೆ 5 ಲಕ್ಷ ಪರಿಹಾರ

|
Google Oneindia Kannada News

ಬೆಂಗಳೂರು, ಜೂನ್ 17 : ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ.

ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್‌ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.

ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿತ, 3 ಸಾವುನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿತ, 3 ಸಾವು

ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. 'ಜಲಮಂಡಳಿ ವತಿಯಿಂದ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಭರಿಸಲಾಗುತ್ತದೆ' ಎಂದು ಸಚಿವರು ಹೇಳಿದರು.

ತ್ಯಾಗರಾಜನಗರ ಅಪಾರ್ಟ್‌ಮೆಂಟ್ ಕುಸಿತ, ಎಫ್‌ಐಆರ್ ದಾಖಲುತ್ಯಾಗರಾಜನಗರ ಅಪಾರ್ಟ್‌ಮೆಂಟ್ ಕುಸಿತ, ಎಫ್‌ಐಆರ್ ದಾಖಲು

ಉತ್ತರ ಭಾರತ ಮತ್ತು ಉತ್ತರ ಕರ್ನಾಟಕ ಮೂಲದ ಕಾರ್ಮಿಕರು ನೀರಿನ ಟ್ಯಾಂಕ್ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದರು. ಸುಮಾರು ಒಂದೂವರೆ ವರ್ಷದಿಂದ ನೀರು ಶುದ್ಧೀಕರಣ ಮಾಡುವ ಟ್ಯಾಂಕ್ ಕಾರ್ಯ ನಡೆಯುತ್ತಿತ್ತು.

ಕಸವನಹಳ್ಳಿ ಕಟ್ಟಡ ದುರಂತ : 15 ಕಾರ್ಮಿಕರ ರಕ್ಷಣೆಕಸವನಹಳ್ಳಿ ಕಟ್ಟಡ ದುರಂತ : 15 ಕಾರ್ಮಿಕರ ರಕ್ಷಣೆ

ಎನ್ವರೋನ್ ಎಂಬ ಕಂಪನಿ

ಎನ್ವರೋನ್ ಎಂಬ ಕಂಪನಿ

ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್‌ನಲ್ಲಿ ನೀರು ಶುದ್ದೀಕರಣ ಮಾಡುವ ಮೂರು ಟ್ಯಾಂಕ್‌ಗಳನ್ನು ನಿರ್ಮಾಣ ಮಾಡುವ ಗುತ್ತಿಗೆಯನ್ನು ಎನ್ವರೋನ್ ಎಂಬ ಕಂಪನಿ ಪಡೆದಿತ್ತು. ನೀರಿನ ಟ್ಯಾಂಕ್ ಕುಸಿದ ಬಳಿಕ ಪೊಲೀಸರು ಗುತ್ತಿಗೆ ಪಡೆದಿದ್ದ ಕಂಪನಿಯ ವಿರುದ್ಧ ದೂರು ದಾಖಲು ಮಾಡಿಕೊಂಡಿದ್ದಾರೆ.

ಪೈಪ್ ಕುಸಿದು ಬಿದ್ದು ದುರಂತ

ಪೈಪ್ ಕುಸಿದು ಬಿದ್ದು ದುರಂತ

ನೀರಿನ ಟ್ಯಾಂಕ್‌ ನಿರ್ಮಾಣಕ್ಕೆ ಹಾಕಲಾಗಿದ್ದ ಪೈಪ್ ಕುಸಿದು ಬಿದ್ದ ಕಾರಣ ಸೆಂಟ್ರಿಂಗ್ ಕುಸಿದು ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದಾರೆ. ಘಟನೆಗೆ ಗುತ್ತಿಗೆದಾರರೇ ಹೊಣೆ ಎಂದು ಅವರಿಂದಲೇ ಆದ ನಷ್ಟವನ್ನು ಪಡೆಯುಲಾಗುತ್ತದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.

7 ಇಂಜಿನಿಯರ್‌ಗಳು ವಶಕ್ಕೆ

7 ಇಂಜಿನಿಯರ್‌ಗಳು ವಶಕ್ಕೆ

ನೀರಿನ ಟ್ಯಾಂಕ್ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಇಂಜಿನಿಯರ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಗುತ್ತಿಗೆದಾರನ ವಿರುದ್ಧ ಪೊಲೀಸರು ದೂರು ದಾಖಲು ಮಾಡಿಕೊಂಡಿದ್ದಾರೆ.

20 ಜನರಿಗೆ ಗಾಯ

20 ಜನರಿಗೆ ಗಾಯ

ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದಿದ್ದರಿಂದ 3 ಜನರು ಮೃತಪಟ್ಟಿದ್ದಾರೆ. 20 ಜನರು ಕೊಲಂಬಿಯಾ ಏಷಿಯಾ ಮತ್ತು ಆಸ್ಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಗಾಯಗೊಂಡಿರುವ ಕೆಲವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಜಲಮಂಡಳಿ ಭರಿಸಲಿದೆ.

English summary
Minister for Law and Parliamentary affairs Krishna Byre Gowda said that BWSSB will give 5 lakh composition for the workers who killed in after under construction water tank collapse. On June 17 water tank collapsed in Bengaluru , Jogappa layout near Lumbini Garden.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X