ಬೆಂಗಳೂರು : ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿತ, 3 ಸಾವು

ಬೆಂಗಳೂರು, ಜೂನ್ 17 : ಬೆಂಗಳೂರಿನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿದೆ. ಅವಶೇಷಗಳಡಿ ನಾಲ್ವರು ಸಿಲುಕಿರುವ ಶಂಕೆ ಇದೆ. ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಪೊಲೀಸರು, ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.

ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್‌ನಲ್ಲಿ ನಿರ್ಮಾಣ ಹಂತದ ವಾಟರ್ ಟ್ಯಾಂಕ್‌ನ ಸೆಂಟ್ರಿಂಗ್ ಕುಸಿದಿದೆ. ನಾಲ್ವರು ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ.

ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ನಾಲ್ಕಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಆಗಮಿಸಿವೆ. ಅವಶೇಷಗಳಡಿ ಸಿಲುಕಿ ಕೃಷ್ಣ ಎಂಬ ಕಾರ್ಮಿಕ ಮೃತಪಟ್ಟಿದ್ದಾರೆ. ಉಳಿದವರ ವಿವರ ತಿಳಿದು ಬಂದಿಲ್ಲ.

Under construction water tank collapse in Bengaluru

ಬೆಂಗಳೂರು ಜಲಮಂಡಳಿಯ ನೀರಿನ ಟ್ಯಾಂಕ್ ನಿರ್ಮಾಣ ಕಾರ್ಯ ಕಳೆದ ಆರು ತಿಂಗಳಿನಿಂದ ನಡೆಯುತ್ತಿತ್ತು. ಸುಮಾರು 60 ಜನರು ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ.

Under construction water tank collapse in Bengaluru

110 ಎಂಎಲ್‌ಡಿ ಸಾಮರ್ಥ್ಯದ ನೀರು ಶುದ್ಧೀಕರಣ ಘಟಕವನ್ನು ನಿರ್ಮಾಣ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಸೆಂಟ್ರಿಂಗ್‌ಗೆ ಅಳವಡಿಕೆ ಮಾಡಿದ್ದ ಕಂಬ ಸಡಿಲಗೊಂಡು ಕುಸಿದುಬಿದ್ದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+