Bengaluru Karaga: ವಿಶ್ವವಿಖ್ಯಾತ ಬೆಂಗಳೂರು ಕರಗಕ್ಕೆ ಎದುರಾಯ್ತು ದೊಡ್ಡ ವಿಘ್ನ
ಐತಿಹಾಸಿಕ ಹಾಗೂ ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಇದೇ ಏಪ್ರಿಲ್ 4ರಿಂದ ಏಪ್ರಿಲ್ 14ರವರೆಗೆ ಕರಗದ ಆಚರಣೆಗಳು ನಡೆಯಲಿವೆ. ಏಪ್ರಿಲ್ 12ರ ಚೈತ್ರ ಪೌರ್ಣಮಿ ಅದ್ಧೂರಿ ಕರಗ ಶಕ್ತ್ಯೋತ್ಸವಕ್ಕೆ ಭರ್ಜರಿ ಸಿದ್ಧತೆ ನಡೆದಿದೆ. ಈ ಬಾರಿಯೂ ಕರಗದ ಪೂಜಾರಿ ಎ.ಜ್ಞಾನೇಂದ್ರ ಅವರೇ ಕರಗ ಹೊರಲು ರೆಡಿಯಾಗಿದ್ದಾರೆ. ಆದರೆ, ಈ ಬಾರಿಯ ಕರಗ ಮಹೋತ್ಸವಕ್ಕೆ ದೊಡ್ಡ ವಿಘ್ನ ಎದುರಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾಡಿರುವ ಕೆಲಸದಿಂದಾಗಿ ಇದೀಗ ಕರಗದ ಆಚರಣೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
ಪ್ರತಿ ವರ್ಷವೂ ಈ ಕರಗ ಮಹೋತ್ಸವಕ್ಕೆ ಲಕ್ಷಾಂತರ ಜನ ಸೇರುತ್ತಾರೆ. ಈ ಬಾರಿಯೂ ಕರಗ ಮಹೋತ್ಸವದಲ್ಲಿ 20 ಲಕ್ಷಕ್ಕೂ ಹೆಚ್ಚು ಜನ ಭಾಗಿಯಾಗುವ ಸಾಧ್ಯತೆ ಇದೆ. ಹೀಗಾಗಿ ತಿಗಳರಪೇಟೆಯಲ್ಲಿರುವ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆದರೆ ಈ ಬಾರಿಯ ಕರಗಕ್ಕೆ ಬಿಬಿಎಂಪಿಯೇ ಅಡ್ಡಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಕಾರಣ ಬಿಬಿಎಂಪಿ ಕೈಗೆತ್ತಿಕೊಂಡಿರುವ ಕಾಮಗಾರಿಗಳು ಅಪೂರ್ಣಗೊಂಡಿರುವುದು.

ಹೌದು, ಕರಗ ಶಕ್ತ್ಯೋತ್ಸವ ನಡೆಯುವ ಧರ್ಮರಾಯಸ್ವಾಮಿ ದೇವಸ್ಥಾನದ ಬಳಿಯ ಪ್ರಮುಖ ರಸ್ತೆಗಳು, ಎಸ್.ಪಿ.ರೋಡ್ ಸೇರಿದಂತೆ ಕರಗ ಸಂಚರಿಸುವ ಮಾರ್ಗಗಳಲ್ಲಿ ಬಿಬಿಎಂಪಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ. ಹಲವು ತಿಂಗಳಿನಿಂದ ಇಲ್ಲಿ ಕಾಮಗಾರಿಗಳು ನಡೆಯುತ್ತಿದ್ದರೂ ವೇಗವಾಗಿ ಸಾಗಿಲ್ಲ. ಅಲ್ಲಲ್ಲಿ ಒಳಚರಂಡಿ ಹಾಗೂ ರಸ್ತೆ ಕಾಮಗಾರಿಗಳು ನಡೆಯುತ್ತಿದ್ದು, ಕೆಲಸಗಳು ಅರ್ಧಕ್ಕೆ ನಿಂತುಬಿಟ್ಟಿವೆ. ಕರಗಕ್ಕೆ ಹೆಚ್ಚು ಜನ ಸೇರುವ ಈ ಸ್ಥಳಗಳಲ್ಲಿ ಕಾಮಗಾರಿಗಳು ಅಪೂರ್ಣಗೊಂಡಿರುವುದು ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಕರಗ ಮಹೋತ್ಸವಕ್ಕೆ ಇನ್ನು ಒಂದು ತಿಂಗಳೂ ಇಲ್ಲ. ಆದರೂ ಕಾಮಗಾರಿಗಳು ಪೂರ್ಣಗೊಳ್ಳದಿರುವುದು ಆತಂಕ ಮೂಡಿಸಿದೆ. ಬಿಬಿಎಂಪಿಯ ಈ ಕಾಮಗಾರಿಗಳು ಇನ್ನೂ ಹಲವು ತಿಂಗಳ ಕಾಲ ನಡೆಯುವ ಸ್ಥಿತಿಯಲ್ಲಿದ್ದು, ಕರಗದ ವೇಳೆಗೆ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಇಲ್ಲಿನ ಸ್ಥಳೀಯರು ಆಗ್ರಹಿಸಿದ್ದಾರೆ. ಇದು ಕರಗದ ನಡೆಸುವ ಧರ್ಮರಾಯಸ್ವಾಮಿ ದೇವಾಲಯದ ವ್ಯವಸ್ಥಾಪನಾ ಸಮಿತಿಗೂ ಆತಂಕ ಮೂಡಿಸಿದೆ. ಕರಗ ವೀಕ್ಷಿಸಲು ಲಕ್ಷಾಂತರ ಮಂದಿ ಆಗಮಿಸುವುದರಿಂದ ಇಲ್ಲಿನ ರಸ್ತೆಗಳಲ್ಲಿ ಜನಜಂಗುಳಿ ಇರುತ್ತದೆ. ಕಾಮಗಾರಿಗಳಿಂದಾಗಿ ಭಕ್ತರು ಹಾಗೂ ಕರಗದ ವೀಕ್ಷಕರಿಗೆ ಸಮಸ್ಯೆಯಾಗಲಿದೆ ಎಂದು ಹೇಳಲಾಗುತ್ತಿದೆ.

ತಿಗಳರ ಪೇಟೆಯಲ್ಲಿರುವ ಶ್ರೀಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ಹತ್ತು ದಿನಗಳಿಗೂ ಹೆಚ್ಚಿನ ಕಾಲ ಕರಗದ ಆಚರಣೆಗಳು ನಡೆಯುತ್ತವೆ. ಲಕ್ಷಾಂತರ ಮಂದಿ ಕರಗವನ್ನು ಕಣ್ತುಂಬಿಕೊಳ್ಳಲು ತಡರಾತ್ರಿಯಲ್ಲೂ ಇಲ್ಲಿಗೆ ಜಮಾಯಿಸುತ್ತಾರೆ. ಈ ಕರಗಕ್ಕೆ ನೂರಾರು ವರ್ಷಗಳ ಐತಿಹ್ಯವಿದೆ. ಈ ಬಾರಿ ಏಪ್ರಿಲ್ 4ರಿಂದ ಕರಗದ ಆಚರಣೆಗಳು ಶುರುವಾಗಲಿವೆ. ಮೊದಲಿಗೆ ರಥೋತ್ಸವ ಧ್ವಜಾರೋಹಣ ನೆರವೇರಲಿದ್ದು, ಬಳಿಕ ಪ್ರತಿದಿನವೂ ವಿಶೇಷ ಪೂಜೆ, ಆರತಿ ದೀಪಗಳು, ಹಸಿ ಕರಗ, ಪೊಂಗಲ್ ಸೇವೆ, ಕರಗ ಶಕ್ತ್ಯುತ್ಸವ- ಧರ್ಮರಾಯಸ್ವಾಮಿ ಮಹಾರಥೋತ್ಸವ, ಗಾವು ಶಾಂತಿ, ವಸಂತೋತ್ಸವ, ಧ್ವಜಾರೋಹಣದ ಮೂಲಕ ಕರಗ ಮಹೋತ್ಸವವು ಪೂರ್ಣಗೊಳ್ಳಲಿದೆ.
ಕರಗ ಮಹೋತ್ಸವದ ವೇಳಾಪಟ್ಟಿ
* ಏಪ್ರಿಲ್ 4: ರಥೋತ್ಸವ, ಧ್ವಜಾರೋಹಣ
* ಏಪ್ರಿಲ್ 5-8: ತನಕ ಪ್ರತಿದಿನ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ
* ಏಪ್ರಿಲ್ 9: ದೀಪಾರತಿಗಳು
* ಏಪ್ರಿಲ್ 10: ಹಸಿ ಕರಗ
* ಏಪ್ರಿಲ್ 11: ಹೊಂಗಲು ಸೇವೆ
* ಏಪ್ರಿಲ್ 12: ಕರಗ ಶಕ್ತ್ಯೋತ್ಸವ, ಧರ್ಮರಾಯಸ್ವಾಮಿ ರಥೋತ್ಸವ
* ಏಪ್ರಿಲ್ 13: ಪುರಾಣ ಪ್ರವಚನ ಮತ್ತು ಗಾವು ಶಾಂತಿ
* ಏಪ್ರಿಲ್ 14: ವಸಂತೋತ್ಸವ ಧ್ವಜಾರೋಹಣ
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications