ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಮ್ಮ ಮೆಟ್ರೋ: 2ಎ, 2ಬಿ ಹಂತದ ಯೋಜನೆಗಳಿಗೆ ಕೇಂದ್ರದ ಒಪ್ಪಿಗೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 20: ನಮ್ಮ ಮೆಟ್ರೋ ಯೋಜನೆಯ 2ಎ ಮತ್ತು 2 ಬಿ ಹಂತಕ್ಕೆ ಕೇಂದ್ರ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.

ಒಟ್ಟಾರೆ, 58.19 ಕಿಲೋ ಮೀಟರ್ ಉದ್ದದ ಈ ಯೋಜನೆಗೆ ಒಟ್ಟಾರೇ. 14,788,101 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದು ಪಿಯೂಷ್ ಗೋಯಲ್ ಮಾಹಿತಿ ನೀಡಿದ್ದಾರೆ.

ಮೈಸೂರು ರಸ್ತೆ-ಕೆಂಗೇರಿ ನಡುವೆ ಪರೀಕ್ಷಾರ್ಥ ಸಂಚಾರ ಆರಂಭಿಸಿದ ನಮ್ಮ ಮೆಟ್ರೋ ಮೈಸೂರು ರಸ್ತೆ-ಕೆಂಗೇರಿ ನಡುವೆ ಪರೀಕ್ಷಾರ್ಥ ಸಂಚಾರ ಆರಂಭಿಸಿದ ನಮ್ಮ ಮೆಟ್ರೋ

2ಎ ಹಂತದಲ್ಲಿ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ನಿಂದ ಕೆಆರ್ ಪುರಂವರೆಗೆ ಹಾಗೂ 2ಬಿ ಹಂತದಲ್ಲಿ ಕೆಆರ್ ಪುರಂನಿಂದ ಹೆಬ್ಬಾಳ ಜಂಕ್ಷನ್ ಮಾರ್ಗವಾಗಿ ವಿಮಾನ ನಿಲ್ದಾಣದವರೆಗೂ ಮೆಟ್ರೋ ರೈಲು ಯೋಜನೆಯನ್ನು ವಿಸ್ತರಿಸಲಾಗುತ್ತಿದೆ.

Union Cabinet Approves Bangalore Metro Rail Project Phase 2A, 2B

ಬಿಎಂಆರ್‌ಸಿಎಲ್ ಮೈಸೂರು ರಸ್ತೆ ಹಾಗೂ ಕೆಂಗೇರಿ ನಡುವೆ ಪರೀಕ್ಷಾರ್ಥ ನಮ್ಮ ಮೆಟ್ರೋ ಸಂಚಾರವನ್ನು ಆರಂಭಿಸಿದೆ. ಇದು ನೇರಳೆ ಮಾರ್ಗ ಮೈಸೂರು ರಸ್ತೆಯ ವಿಸ್ತರಿತ ಮಾರ್ಗವಾಗಿದೆ. ಈ ಮಾರ್ಗದಲ್ಲಿ ಪರೀಕ್ಷಾರ್ಥ ಮೆಟ್ರೋ ರೈಲು ಸಂಚರಿಸಿದೆ.

2020ರ ಡಿಸೆಂಬರ್‌ನಲ್ಲಿ ಬಿಎಂಆರ್‌ಸಿಎಲ್ ನೀಡಿದ್ದ ಮಾಹಿತಿ ಪ್ರಕಾರ 2021ರ ಆರಂಭದಲ್ಲಿಯೇ ಮೈಸೂರು ರಸ್ತೆ ಹಾಗೂ ಕೆಂಗೇರಿ ನಡುವೆ ಮೆಟ್ರೋ ರೈಲು ಸಂಚರಿಸಲಿದೆ.

7.5 ಕಿ.ಮೀ ಉದ್ದದ ವಿಸ್ತರಿಸಿದ ಮೆಟ್ರೋ ಮಾರ್ಗ ಇದಾಗಿದೆ. ಜೂನ್ 2021ರಲ್ಲಿ ಮೆಟ್ರೋ ರೈಲು ಸಂಚಾರ ಆರಂಭಗೊಳ್ಳಲಿದೆ. ಅದಕ್ಕೂ ಮುನ್ನ ಹಳಿಗಳ ವೀಕ್ಷಣೆ ಸೇರಿದಂತೆ ಹಲವು ಕಾಮಗಾರಿಗಳು ಬಾಕಿ ಇವೆ.

Recommended Video

ಕರ್ನಾಟಕ: ರಾಜ್ಯದಲ್ಲಿ ಸಾರಿಗೆ ಬಸ್ ಸಂಚಾರ ಆರಂಭ, ಕರ್ತವ್ಯಕ್ಕೆ ಮರಳುತ್ತಿರುವ ಸಾರಿಗೆ ಸಿಬ್ಬಂದಿ | Oneindia Kannada

English summary
The Union Cabinet on Tuesday approved the Bangalore Metro Rail Project phase 2A and phase 2B, Union minister Piyush Goyal said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X