• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಜ್ಯೋತ್ಸವ ಭಾಷಣದಲ್ಲಿ ಕೇಂದ್ರ ಸರಕಾರದ ವಿರುದ್ದ ನಾರಾಯಣ ಗೌಡ ಗರಂ

|
Google Oneindia Kannada News

ಬೆಂಗಳೂರು, ನ 1: 65ನೇ ಕನ್ನಡ ರಾಜ್ಯೋತ್ಸವವನ್ನು ನಾಡಿನೆಲ್ಲಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ನಗರದ ಕರ್ನಾಟಕ ರಕ್ಷಣಾ ವೇದಿಕೆಯ ಕಚೇರಿ ಮುಂಭಾಗದಲ್ಲಿ ಕನ್ನಡ ಧ್ವಜಾರೋಹಣವನ್ನು ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣ ಗೌಡರು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಾರಾಯಣ ಗೌಡ್ರು, "ಕೇಂದ್ರ ಸರ್ಕಾರದ ನಡವಳಿಕೆ ನೋಡಿದರೆ ದಕ್ಷಿಣ ಭಾರತೀಯರನ್ನು ಅವರು ದೇಶದ ನಾಗರಿಕರೆಂದು ಪರಿಗಣಿಸಿಯೇ ಇಲ್ಲವೆಂದು ತೋರುತ್ತದೆ. ಭಾರತವೇನು ಕೇವಲ ಹಿಂದಿವಾಲಾಗಳ ದೇಶವೇ? ದ್ರಾವಿಡ ಚಳವಳಿ ನೆನಪಿದೆಯೇ? ಅಂಥ ಚಳವಳಿ ಮತ್ತೆ ಮರುಕಳಿಸಿದರೆ ಆಶ್ವರ್ಯವಿಲ್ಲ"ಎಂದು ನಾರಾಯಣ ಗೌಡರು ಎಚ್ಚರಿಸಿದರು.

ಕರ್ನಾಟಕ ರಾಜ್ಯೋತ್ಸವ: ಎಲ್ಲಡೆ ಮೊಳಗಿತು ಕನ್ನಡ ಡಿಂಡಿಮಕರ್ನಾಟಕ ರಾಜ್ಯೋತ್ಸವ: ಎಲ್ಲಡೆ ಮೊಳಗಿತು ಕನ್ನಡ ಡಿಂಡಿಮ

"ಪ್ರಧಾನಿ ನರೇಂದ್ರ ಮೋದಿಯವರಿಗೆ ಕರ್ನಾಟಕ ನೆನಪಿಲ್ಲವೇ? ಯಾಕೆ ಅವರು ಕರ್ನಾಟಕದ ನೆರೆ ಸಂತ್ರಸ್ಥ ಜಿಲ್ಲೆಗಳಿಗೆ ಭೇಟಿ ನೀಡುತ್ತಿಲ್ಲ. ಅವರ ದೃಷ್ಟಿಯಲ್ಲಿ ಉತ್ತರ ಭಾರತ ಮಾತ್ರ ಭಾರತವೇ? ದಕ್ಷಿಣ ಭಾರತವು ಭಾರತಕ್ಕೆ ಸೇರಿಲ್ಲವೇ? ಜಿಎಸ್ ಟಿ ಬಾಕಿ ಹಣ ಕೊಡಿ ಎಂದು ಕರ್ನಾಟಕ‌ ಬೇಡುವ ಸ್ಥಿತಿ ತಲುಪಿದೆ" ಎಂದು ಗೌಡರು ಹೇಳಿದರು.

"ನಾವು ಯಾರ ಹಣವನ್ನು ಕೇಳುತ್ತಿದ್ದೇವೆ? ಅದು ನಮ್ಮದೇ ಹಣ. ನಾವೇ ಕೊಟ್ಟ ತೆರಿಗೆಯ ಒಂದು ಭಾಗವನ್ನಷ್ಟೇ ಕೇಳುತ್ತಿದ್ದೇವೆ. ಕೇಂದ್ರ ಸರ್ಕಾರ ನಮ್ಮ ಹಣವನ್ನು ನಮಗೆ ಕೊಡದೆ ನಮ್ಮನ್ನು ಸಾಲಗಾರರನ್ನಾಗಿ ಮಾಡುತ್ತಿದೆ. ಕರ್ನಾಟಕಕ್ಕೆ ನ್ಯಾಯಯುತವಾಗಿ ದಕ್ಕಬೇಕಿರುವ ಅನುದಾನಗಳನ್ನು ಕೇಳಲು, ಕರ್ನಾಟಕದ ಸಮಸ್ಯೆಗಳ ಬಗ್ಗೆ ಪ್ರಧಾನಿ ಜತೆ ಮಾತನಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಭಯ ಪಡುತ್ತಿದ್ದಾರೆ"ಎಂದು ನಾರಾಯಣ ಗೌಡರು ಹೇಳಿದರು.

ಒಬ್ಬ ಪ್ರಧಾನಿ ಜತೆ ಮಾತಾಡಲು ಒಬ್ಬ ಮುಖ್ಯಮಂತ್ರಿ ಭಯ ಪಡುವ ಸ್ಥಿತಿ ತಲುಪಿದರೆ ಏನರ್ಥ? ಇದನ್ನು ಒಕ್ಕೂಟವೆಂದು ಕರೆಯಲು ಸಾಧ್ಯವೇ? ಒಕ್ಕೂಟದ ಮೂಲತತ್ವಗಳು‌ ಉಳಿದುಕೊಂಡಿವೆಯೇ? ರಾಜ್ಯೋತ್ಸವವನ್ನು ಸಂಘಸಂಸ್ಥೆಗಳು ಸರಳವಾಗಿ ಆಚರಿಸಬೇಕು ಎಂದು ಸರ್ಕಾರ ಹೇಳುತ್ತದೆ. ಆದರೆ ಸರ್ಕಾರ ನಡೆಸುವ‌ ಪಕ್ಷ, ಉಪಚುನಾವಣೆಗಳಲ್ಲಿ ಹತ್ತಾರು ಸಾವಿರ ಜನರನ್ನು ಸೇರಿಸಿ, ಸಿನಿಮಾ ಕಲಾವಿದರನ್ನು‌ ಕರೆಯಿಸಿ ರ‍್ಯಾಲಿಗಳನ್ನು ನಡೆಸುತ್ತದೆ. ನೀವು ಹೇಳುವ ನಿಯಮಗಳು ನಿಮಗೆ ಅನ್ವಯಿಸುವುದಿಲ್ಲವೇ" ಎಂದು ಗೌಡರು ಪ್ರಶ್ನಿಸಿದರು.

Union Government Not Considering South India As Part Of The Country: TA Narayana Gowda

"ಕೊರೊನಾ ಮತ್ತು ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹದ ಹಿನ್ನೆಲೆಯಲ್ಲಿ ಈ ವರ್ಷ ಸರಳವಾಗಿ ರಾಜ್ಯೋತ್ಸವ ಆಚರಿಸಲು‌ ನಾವು ಮೊದಲೇ ತೀರ್ಮಾನಿಸಿದ್ದೆವು. ಆದರೆ ರಾಜಕೀಯ ಪಕ್ಷಗಳು ಚುನಾವಣೆ ಹೆಸರಲ್ಲಿ‌ ತಾವೇ ಮಾಡಿದ ನಿಯಮಗಳನ್ನು ತಾವೇ ಮುರಿಯುತ್ತಿವೆ" ಎಂದು ನಾರಾಯಣ ಗೌಡರು ಬೇಸರ ವ್ಯಕ್ತ ಪಡಿಸಿದರು.

"ರಾಜ್ಯೋತ್ಸವವೆಂದರೆ ಕೇವಲ ಸಂಭ್ರಮ, ಸಡಗರವಲ್ಲ. ಅಖಂಡ ಕರ್ನಾಟಕದ ಕನಸು ಕಂಡ ನಮ್ಮ ಹಿರಿಯರ ಶ್ರೇಯೋಭಿಲಾಷೆಯನ್ನು ಕಾಪಾಡುವ ಹೊಣೆಗಾರಿಕೆ ಮತ್ತು ಸವಾಲು. ನಾವು ನಮ್ಮ ಹಕ್ಕುಗಳಿಗೆ ಯಾರನ್ನು ಬೇಕಾದರೂ ಪ್ರಶ್ನಿಸುವ ಅವಕಾಶವನ್ನು ಸಂವಿಧಾನ ನಮಗೆ ನೀಡಿದೆ. ಕನ್ನಡಿಗರ ಹಕ್ಕೊತ್ತಾಯಗಳಿಗೆ ಕೇಂದ್ರ, ರಾಜ್ಯ ಸರ್ಕಾರಗಳನ್ನು ಪ್ರಶ್ನಿಸುತ್ತಿರೋಣ, ಹೋರಾಟ ನಡೆಸೋಣ" ಎಂದು ಗೌಡರು ಹೇಳಿದರು.

 ಕನ್ನಡ ರಾಜ್ಯೋತ್ಸವ ಮೆರವಣಿಗೆ ಮಾಡುವಂತಿಲ್ಲ: ಸರ್ಕಾರದ ಆದೇಶ! ಕನ್ನಡ ರಾಜ್ಯೋತ್ಸವ ಮೆರವಣಿಗೆ ಮಾಡುವಂತಿಲ್ಲ: ಸರ್ಕಾರದ ಆದೇಶ!

   DK Ravi ನಾನು ತುಂಬಾ ಚನ್ನಾಗಿದ್ವಿ! | Kusuma Exclusive Interview | Part 2 | Oneindia Kannada

   "ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡಲು ರಾಷ್ಟ್ರೀಯ ಪಕ್ಷಗಳು ವಿಫಲವಾಗಿವೆ. ನಾವು ಈಗ ಪ್ರಾದೇಶಿಕ ಚಿಂತನೆಗಳನ್ನು ಬಿತ್ತಬೇಕಿದೆ. ಕೇಂದ್ರ ಸರ್ಕಾರ ಏನೇ ಸಮಸ್ಯೆ ಬಂದರೂ‌ ಒಮ್ಮೆ ಚೀನಾ ಕಡೆ ಮತ್ತೊಮ್ಮೆ ಪಾಕಿಸ್ತಾನದ ಕಡೆ ತೋರಿಸಿ ನುಣುಚಿಕೊಳ್ಳುತ್ತದೆ. ಈ‌ ಆಟ ಹೆಚ್ಚು‌ ದಿನ‌ ನಡೆಯದು. ಕನ್ನಡಿಗರು ಜಾಗ್ರತರಾಗಿದ್ದಾರೆ" ಎಂದು ನಾರಾಯಣ ಗೌಡರು ಎಚ್ಚರಿಸಿದರು.

   English summary
   Union Government Not Considering South India As Part Of The Country: KRV President TA Narayana Gowda During Rajyotsava Speech.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X