ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಕ್ಷಿಣ ಕನ್ನಡ ಕೊಲೆ ವಿಚಾರದಲ್ಲಿ ಸಿಎಂಗೆ ಖಡಕ್ ಸೂಚನೆ ಕೊಟ್ಟ ಶಾ!

|
Google Oneindia Kannada News

ಬೆಂಗಳೂರು, ಆಗಸ್ಟ್ 04: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿಯನ್ನು ನೀಡಿದ್ದರು. ಈ ವೇಳೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಖಡಕ್ ಸೂಚನೆಯನ್ನು ನೀಡಿದ್ದಾರೆ. ಪಕ್ಷದಲ್ಲಿನ ಸಚಿವರನ್ನು, ಶಾಸಕರನ್ನು , ಮತ್ತು ಪದಾಧಿಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಮೂರು ಕೊಲೆಗಳು ಆಗಿವೆ. ಇದರಿಂದಾಗಿ ಪಕ್ಷದ ಇಮೇಜ್‌ಗೆ ಡ್ಯಾಮೇಜ್ ಆಗುತ್ತಿದೆ. ಮಸೂದ್ , ಪ್ರವೀಣ್, ಫಾಜಿಲ್ ಕೊಲೆಗಳ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ ಆರೋಪಿಗಳನ್ನು ಶ್ರೀಘ್ರದಲ್ಲಿಯೇ ಬಂಧಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಅಮಿತ್ ಶಾ ಸೂಚನೆಯನ್ನು ನೀಡಿದ್ದಾರೆ. ಯಾವುದೇ ಜಾತಿ , ಧರ್ಮದ ಭೇದವಿಲ್ಲದೇ ಆರೋಪಿಗಳನ್ನು ಶೀಘ್ರವೇ ಬಂಧಿಸಿ ಜೈಲಿಗೆ ಕಳುಹಿಸಿ ಎಂದಿದ್ದಾರೆ.

Union Home Minister Amit Shah Instructions For Dakshina Kannada Murders to CM Bommai

ಬಿಜೆಪಿ ಪಕ್ಷ ಪದಾಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ
ಅಮಿತ್ ಶಾ ಕೊಲೆಗಳ ವಿಚಾರದಲ್ಲಿ ಪಕ್ಷದ ಪದಾಧಿಕಾರಿಗಳೇ ಬೀದಿಗಳಿದು ಪ್ರತಿಭಟನೆಯನ್ನು ನಡೆಸಿದ್ದಕ್ಕೆ ಅಸಮಧಾನವನ್ನು ವ್ಯಕ್ತಪಡಿಸಿದ್ದಾರೆ. ನಮ್ಮ ಪಕ್ಷ ಕೇಡರ್ ಬೇಸ್ ಪಕ್ಷ ಶಾಸಕರು, ಸಚಿವರನ್ನು ಮಾತ್ರವಲ್ಲದೇ ಪದಾಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸವನ್ನು ಮಾಡುವಂತೆ ಮುಖ್ಯಮಂತ್ರಿಗೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.

Union Home Minister Amit Shah Instructions For Dakshina Kannada Murders to CM Bommai

ವಿಧಾನ ಸಭೆಯ ರೋಡ್ ಮ್ಯಾಪಿಂಗ್ ಸಿದ್ಧಪಡಿಸಿ
ರಾಜ್ಯ ವಿಧಾನಸಭೆಯ ಚುನಾವಣೆಗೆ ಸಿದ್ದವಾಗಬೇಕಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ರೋಡ್ ಮ್ಯಾಪಿಂಗ್ ಸಿದ್ದಪಡಿಸಿ. ಪ್ರತಿ ತಿಂಗಳಿಗೊಮ್ಮೆ ವರದಿಯನ್ನು ತಯಾರಿಸಿ ಕಳುಹಿಸಿ ಎಂದು ಅಮಿತ್ ಶಾ ಹೇಳಿದ್ದಾರೆ. ನಗರದ ಖಾಸಗಿ ಹೋಟೇಲ್ ನಲ್ಲಿ ಊಟದ ಸಮಯದಲ್ಲಿ 2023ರ ಚುನಾವಣೆಗೆ ಸಿದ್ದತೆಯನ್ನು ಮಾಡಿಕೊಳ್ಳಿ ಇದಕ್ಕಾಗಿ ಯೋಜನೆಯನ್ನು ಸಿದ್ದಪಡಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಸೂಚನೆಯನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ.

Recommended Video

DK Shivakumar ಮತ್ತು ಸಿದ್ದರಾಮಯ್ಯ ಅಪ್ಪುಗೆಯ ಡ್ರಾಮಾ‌:ಡೈರೆಕ್ಷನ್ ರಾಹುಲ್ ಗಾಂಧಿ *Polirics | OneIndia Kannada

English summary
Union Home Minister Amit Shah visited the state. At this time Chief Minister Basavaraja has issued a stern notice to Bommai. It has been suggested to take the ministers, MLAs and party workers in the party into confidence, know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X