ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಬೆಂಗಳೂರಿಗೆ ಬುಧವಾರ ಅಮಿತ್ ಶಾ ಆಗಮನ

|
Google Oneindia Kannada News

ಬೆಂಗಳೂರು ಆಗಸ್ಟ್ 02: ಆಗಸ್ಟ್ 4ರಂದು ಗುರುವಾರ ರಾಜ್ಯ ರಾಜಧಾನಿಗೆ ಬೆಂಗಳೂರಿನಲ್ಲಿ ನಡೆಯಲಿರುವ ಸಿಐಐಎನ ಸಾಸ್ಕೃತಿಕ ವಿಭಾಗದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬುಧವಾರ ರಾತ್ರಿ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಬಸವರಾಜ ಬೊಮ್ಮಾಯಿ, "ಗುರುವಾರ ಬೆಂಗಳೂರಿನ ಖಾಸಗಿ ಹೋಟಲ್‌ನಲ್ಲಿ ನಡೆಯಲಿರುವ 'ಸಂಕಲ್ಪದಿಂದ ಸಿದ್ಧಿ' (ಸಂಕಲ್ಪ್ ಸೇ ಸಿದ್ಧಿ) ಸಮಾವೇಶದ ಮೂರನೇ ಆವೃತ್ತಿಯಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧ ಅವರು ಬುಧವಾರ ರಾತ್ರಿಯೇ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದರು.

ಕೇಂದ್ರ ಸಚಿವಾಲಯ ಮಾಹಿತಿ ಪ್ರಕಾರ, ಬುಧವಾರ ರಾತ್ರಿ 8 ಗಂಟೆಗೆ ವಿಮಾನ ಮೂಲಕ ಹೊರಟು ರಾತ್ರಿ ಸುಮಾರು 11ಗಂಟೆ ವೇಳೆಗೆ ಬೆಂಗಳೂರು ಎಚ್‌ಎಎಲ್ ಬಂದು ತಲುಪಲಿದ್ದಾರೆ. ನಂತರ ರೇರ್ಸ್‌ಕೋರ್ಸ್ ರಸ್ತೆಯ ತಾಜ್‌ವೆಸ್ಟೆಂಡ್‌ ನಲ್ಲಿ ತಂಗಲಿದ್ದಾರೆ. ಮರುದಿನ ಬೆಳಗ್ಗೆ 11ಗಂಟೆಯ ಕಾರ್ಯಕ್ರಮ ಮುಗಿಸಿ ಮಧ್ಯಾಹ್ನದ ನಂತರ ದೆಹಲಿಗೆ ವಾಪಸ್‌ ಆಗಲಿದ್ದಾರೆ ಎಂಬ ಮಾಹಿತಿ ಇದೆ.

Union minister Amit Shah visit to Bengaluru on Wednesday

ಇನ್ನು ವಿದೇಶಗಳಲ್ಲಿ, ನೆರೆ ರಾಜ್ಯಗಳಲ್ಲಿ ಮಾತ್ರವೇ ಪತ್ತೆಯಾಗಿದ್ದ ಮಂಕಿಪಾಕ್ಸ ಕಾಯಿಲೆ ಕರ್ನಾಟಕದಲ್ಲೂ ಕಾಣಿಸಿಕೊಳ್ಳುತ್ತಿರುವ ಬಗ್ಗೆ ವರದಿಯಾಗಿದೆ. ಈಗಾಗಲೇ ಮಂಕಿಪಾಕ್ಸ್ ಸೋಂಕು ನಿಯಂತ್ರಣ ಬಗ್ಗೆ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಬಿಬಿಎಂಪಿಗೆ ಮಾರ್ಗಸೂಚಿ ಹೊರಡಿಸಲಾಗಿದೆ. ಈ ಮಂಕಿಪಾಕ್ಸ ಸೋಂಕು ನಿಯಂತ್ರಿಸುವಲ್ಲಿ ಸರ್ಕಾರದ ಸಜ್ಜಾಗಿದೆ ಎಂದು ಬೊಮ್ಮಾಯಿ ಹೇಳಿದರು.

English summary
Union Home Affairs Minister Amit Shah visit to Bengaluru on Wednesday, CM Basavaraj Bommai said
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X