ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ
Suraj Revanna Case: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಬರೀ ರಾಜ್ಯ, ದೇಶ ಅಲ್ಲದೆ, ವಿಶೇಶಗಳವರೆಗೂ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಪ್ರಜ್ವಲ್ ರೇವಣ್ಣ ಅಣ್ಣ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧವೂ ಸಹ ಅಸಹಜ ಲೈಂಗಿಕ ದೌರ್ಜನ್ಯ ಆರೋಪವೊಂದು ಕೇಳಿಬಂದಿದ್ದು, ಈ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿ ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಪ್ರಕರಣದ ಬೆನ್ನಲ್ಲೇ, ಸಹೋದರ ಸೂರಜ್ ರೇವಣ್ಣ ವಿರುದ್ಧ ಸಲಿಂಗ ಲೈಂಗಿಕ ದೌರ್ಜನ್ಯ ದೂರು ದಾಖಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಈ ಬಗ್ಗೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವ ಎಚ್.ಡಿ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಎಚ್.ಡಿ ಕುಮಾರಸ್ವಾಮಿ ಅವರು, ಈ ವೇಳೆ ಸೂರಜ್ ರೇವಣ್ಣ ಪ್ರಕರಣಕ್ಕೆ ಬಗ್ಗೆ ಕೇಳುತ್ತಿದ್ದಂತೆ ಆಕ್ರೊಶಗೊಂಡಿದ್ದಾರೆ. ದಯವಿಟ್ಟು ಇಂತಹ ವಿಷಯಗಳನ್ನ ನನ್ನ ಬಳಿ ಚರ್ಚೆ ಮಾಡಬೇಡಿ. ರಾಜ್ಯಕ್ಕೆ ರಾಜ್ಯಕ್ಕೆ ಸಂಬಂಧಪಟ್ಟ ವಿಚಾರಗಳ ಬಗ್ಗೆ ಅಷ್ಟೇ ಚರ್ಚೆ ಮಾಡಿ ಅಂತಾ ಹೇಳಿದ್ದಾರೆ.
ಇಂತಹ ವಿಚಾರಗಳನ್ನಯ ನನ್ನ ಹತ್ತಿರ ಯಾಕೆ ಚರ್ಚೆ ಮಾಡುತ್ತೀರಾ? ಅದರ ಅವಶ್ಯಕತೆ ಏನಿದೆ? ಕಾನೂನು ಇದ್ದು, ಅದನ್ನು ಕಾನೂನು ನೋಡಿಕೊಳ್ಳುತ್ತದೆ. ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ. ಆ ತರಹದ ಪ್ರಶ್ನೆಗಳನ್ನು ಕೇಳಬೇಡಿ ಎಂದು ಗರಂ ಆಗಿದ್ದಾರೆ.
ಅತ್ಯಾಚಾರ ಆರೋಪ: ಸೂರಜ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಅರಕಲಗೂಡು ಜೆಡಿಎಸ್ ಕಾರ್ಯಕರ್ತನ ಮೇಲೆ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈಗಾಗಲೇ ಪ್ರಜ್ವಲ್ ರೇವಣ್ಣ ಅವರ ಪ್ರಕರಣದಿಂದ ಮುಜುಗರಕ್ಕೀಡಾಗಿದ್ದ ರೇವಣ್ಣ ಕುಟುಂಬ ಮತ್ತಷ್ಟು ಮುಜುರಕ್ಕೆ ಒಳಗಾಗುವಂತಾಗಿದೆ.
ಇನ್ನು ಸಂತ್ರಸ್ತ ಯುವಕ ಸಿಎಂ, ಗೃಹ ಸಚಿವ ಹಾಗೂ ಡಿಜಿ ಮತ್ತು ಐಜಿಗೆ ದೂರು ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇನ್ನೂ ಮುಂದಿನ ದಿನಗಳಲ್ಲಿ ಈ ಪ್ರಕರಣ ಯಾವ ಹಂತಕ್ಕೆ ಹೋಗಲಿದೆ ಎಂದು ಕಾದುನೋಡಬೇಕಿದೆ. ಎಚ್.ಡಿ.ರೇವಣ್ಣ ಅವರ ಮಗ ಸೂರಜ್ ರೇವಣ್ಣ ಅವರು ಜೂನ್ 16ರ ರಾತ್ರಿ ತಮ್ಮ ಪಕ್ಷದ ಕಾರ್ಯಕರ್ತನನ್ನು ಸಹಾಯ ಮಾಡುವುದಾಗಿ ಚನ್ನಪಟ್ಟಣ ತಾಲ್ಲೂಕಿನ ಗನ್ನಿಕಡದ ತೋಟದ ಮನೆಗೆ ಕರೆಯಿಸಿಕೊಂಡಿದ್ದು, ಈ ವೇಳೆ ಆತನ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ ಗಂಭೀರ ಆರೋಪ ಇದೆ.












Click it and Unblock the Notifications