ಪಿಣರಾಯಿ ವಿಜಯನ್ ರಾಜೀನಾಮೆಗೆ ಸದಾನಂದ ಗೌಡ ಆಗ್ರಹ
ಬೆಂಗಳೂರು, ಮಾರ್ಚ್ 6: ನೈತಿಕ ಹೊಣೆ ಹೊತ್ತು ಕೇರಳ ಸಿಎಂ ಪಿಣರಾಯಿ ವಿಜಯನ್ ರಾಜೀನಾಮೆ ಕೊಡಬೇಕು ಎಂದು ಬೆಂಗಳೂರಿನಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಆಗ್ರಹಿಸಿದ್ದಾರೆ.
Recommended Video
ಚಿನ್ನ ಸ್ಮಗಲಿಂಗ್ ಪ್ರಕರಣದಲ್ಲಿ ಕೇರಳದ ಸಿಎಂ ಪಿಣರಾಯಿ ವಿಜಯನ್ ಮೇಲೆ ನೇರ ಆರೋಪ ಬಂದಿದೆ. ಈ ಪ್ರಕರಣದ ಪ್ರಮುಖ ಆರೋಪಿಯೇ ಸಿಎಂ ವಿಜಯನ್ ಹೆಸರು ಹೇಳಿದ್ದಾರೆ. ಹಾಗಾಗಿ ಪಿಣರಾಯಿ ವಿಜಯನ್ ತಮ್ಮ ಹುದ್ದೆಯಿಂದ ಕೆಳಗಿಳಿಯುವುದು ಸೂಕ್ತ ಎಂದಿದ್ದಾರೆ.
ವಿಜಯನ್ ಅವರು ಇದನ್ನು ಚುನಾವಣೆ ಷಡ್ಯಂತ್ರ ಎನ್ನಬಹುದು, ಆದರೂ ಈಗ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವುದು ಸೂಕ್ತ ಎಂದು ಸದಾನಂದ ಗೌಡ ಅಭಿಪ್ರಾಯಪಟ್ಟಿದ್ದಾರೆ.

ಕೇರಳದ ಬಹುಕೋಟಿ ಚಿನ್ನದ ಸ್ಮಗಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕ್ಲೀನ್ ಚಿಟ್ ಸಿಕ್ಕಿತ್ತು. ಆದರೆ, ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ವಿಧಾನಸಭೆ ಸ್ಪೀಕರ್ ಪಿ. ಶ್ರೀರಾಮಕೃಷ್ಣನ್ ಮತ್ತು ರಾಜ್ಯದ ಇತರೆ ಮೂವರು ಸಚಿವರು ಭಾಗಿಯಾಗಿದ್ದಾರೆ ಎಂಬ ಆಘಾತಕಾರಿ ಸಂಗತಿಯನ್ನು ಪ್ರಮುಖ ಆರೋಪಿ ಸ್ವಪ್ನ ಸುರೇಶ್ ಹೇಳಿಕೆ ನೀಡಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ಹಳೆಯ ಪ್ರಕರಣವೊಂದರಲ್ಲಿ ಪಿಣರಾಯಿ ವಿಜಯನ್ ಅವರ ಅಳಿಯ ಮೊಹಮ್ಮದ್ ರಿಯಾಸ್ ಜೈಲು ಪಾಲಾಗಿದ್ದರು. ಈಗ ಚುನಾವಣೆಯ ಸಂದರ್ಭದಲ್ಲಿ ಮತ್ತೊಂದು ಸವಾಲು ಅವರಿಗೆ ಎದುರಾಗಿದೆ.
ಮುಖ್ಯಮಂತ್ರಿ ಹಾಗೂ ಸ್ಪೀಕರ್ ಅವರ ಸೂಚನೆಯ ಮೇರೆಗೆ ವಿದೇಶಿ ಕರೆನ್ಸಿಯನ್ನು ಕಳಸಾಗಣೆ ಮಾಡಲಾದ ಚಟುವಟಿಕೆಗಳ ಬಗ್ಗೆ ತಮಗೆ ತಿಳಿದಿದೆ ಎಂಬುದನ್ನು ಸಹ ಸ್ವಪ್ನಾ ಒಪ್ಪಿಕೊಂಡಿದ್ದಾರೆ ಎಂದು ಕಸ್ಟಮ್ಸ್ ಆಯುಕ್ತರು ಹೇಳಿರುವುದು ಪಿಣರಾಯಿಗೆ ಉರುಳಾಗುವ ಸಾಧ್ಯತೆಯಿದೆ.












Click it and Unblock the Notifications