Shobha Karandlaje: ತಮಿಳರ ವಿರುದ್ಧ ಅವಹೇಳನಕಾರಿ ಹೇಳಿಕೆ; ಆಕ್ರೋಶದ ಬೆನ್ನಲ್ಲೇ ಕ್ಷಮೆ ಕೇಳಿದ ಶೋಭಾ ಕರಂದ್ಲಾಜೆ
ಉಡುಪಿ - ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ವಿರೋಧದಿಂದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಶಿಫ್ಟ್ ಆಗಿರುವ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ, ನಾಲಿಗೆ ಹರಿಬಿಟ್ಟು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿ ತಮಿಳುನಾಡಿನವರು ಎಂದು ಹೇಳಿಕೆ ನೀಡಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಹೇಳಿಕೆ ನೀಡಿದ ಕೆಲವೇ ಗಂಟೆಗಳ ನಂತರ, ತಮ್ಮ ಹೇಳಿಕೆ ಹಿಂಪಡೆದು, ಕ್ಷಮೆ ಕೇಳಿದ್ದಾರೆ.

ಎಕ್ಸ್‌ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ, "ನನ್ನ ತಮಿಳು ಸಹೋದರರು ಮತ್ತು ಸಹೋದರಿಯರಿಗೆ, ನನ್ನ ಮಾತುಗಳು ಬೆಳಕು ಚೆಲ್ಲುವ ಉದ್ದೇಶವನ್ನು ಹೊಂದಿದ್ದವು, ನೋವು ಉಂಟುಮಾಡುವುದಿಲ್ಲ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಆದರೂ ನನ್ನ ಹೇಳಿಕೆಗಳು ಕೆಲವರಿಗೆ ನೋವು ತಂದಿದೆ ಎನ್ನುವುದನ್ನು ನೋಡಿದ್ದೇನೆ, ಅದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ಕೃಷ್ಣಗಿರಿ ಅರಣ್ಯದಲ್ಲಿ ತರಬೇತಿ ಪಡೆದಿದ್ದು, ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಪಟ್ಟಂತೆ ಮಾತ್ರ ನಾನು ಟೀಕೆ ಮಾಡಿದ್ದೇನೆ. ತಮಿಳುನಾಡಿನ ಜನತೆಗೆ ನಾನು ಮನಃಪೂರ್ವಕವಾಗಿ ಕ್ಷಮೆ ಕೇಳುತ್ತೇನೆ. ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ" ಎಂದು ಹೇಳಿದ್ದಾರೆ.
To my Tamil brothers & sisters,
— Shobha Karandlaje (Modi Ka Parivar) (@ShobhaBJP) March 19, 2024
I wish to clarify that my words were meant to shine light, not cast shadows. Yet I see that my remarks brought pain to some - and for that, I apologize. My remarks were solely directed towards those trained in the Krishnagiri forest,
1/2
ಎಂಕೆ ಸ್ಟಾಲಿನ್ ವಿರುದ್ಧ ಟೀಕೆ
"ಮಿಸ್ಟರ್ ಸ್ಟಾಲಿನ್, ನಿಮ್ಮ ಆಡಳಿತದಲ್ಲಿ ತಮಿಳುನಾಡಿಗೆ ಏನಾಗಿದೆ? ನಿಮ್ಮ ತುಷ್ಟೀಕರಣ ರಾಜಕೀಯದಿಂದ ಹಿಂದೂಗಳು ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಹಗಲು ರಾತ್ರಿ ದಾಳಿ ಮಾಡಲಾಗಲು ಉತ್ತೇಜನ ಸಿಗುತ್ತಿದೆ. ಐಸಿಸ್‌ನಂತಹ ಭಯೋತ್ಪಾದಕ ಸಂಘಟನೆಗಳ ಲಕ್ಷಣಗಳನ್ನು ಹೊಂದಿರುವ ಬಾಂಬ್ ಸ್ಫೋಟಗಳು ಸಂಭವಿಸುತ್ತವೆ." ಕರಂದ್ಲಾಜೆ ಪೋಸ್ಟ್‌ನಲ್ಲಿ ಹೇಳಿದ್ದರು.
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಭಾಗಿಯಾದ ಬಾಂಬರ್ ಕೃಷ್ಣಗಿರಿ ಅರಣ್ಯದಲ್ಲಿ ತರಬೇತಿ ಪಡೆದಿದ್ದಾನೆ ಎಂದು ಹೇಳಿದ ಅವರು, "ರಾಮೇಶ್ವರಂ ಬಾಂಬರ್ ನಿಮ್ಮ ಕೃಷ್ಣಗಿರಿ ಅರಣ್ಯದಲ್ಲಿ ತರಬೇತಿ ಪಡೆದಿದ್ದಾರೆ, ತಮಿಳು ಮಕ್ಕಳ್ ಕರ್ನಾಟಕದೊಂದಿಗೆ ಸಾಮರಸ್ಯದ ಸಂಬಂಧದ ಸುದೀರ್ಘ ಇತಿಹಾಸವನ್ನು ಹೊಂದಿದೆ" ಎಂದು ಹೇಳಿದರು.
"ಅವರು ಕರ್ನಾಟಕದ ಸಾಮಾಜಿಕ ರಚನೆಯ ಅವಿಭಾಜ್ಯ ಅಂಗವಾಗಿದ್ದಾರೆ, ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ನಾವು ನಿಕಟ ಸಾಂಸ್ಕೃತಿಕ ಬಂಧಗಳನ್ನು ಹೊಂದಿದ್ದೇವೆ ಮತ್ತು ಇತಿಹಾಸವನ್ನು ಹಂಚಿಕೊಂಡಿದ್ದೇವೆ" ಎಂದು ಅವರು ಹೇಳಿದರು.
ಕರಂದ್ಲಾಜೆ ಅವರ ಪ್ರಚೋದನಕಾರಿ ಹೇಳಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಕೇಂದ್ರ ಸಚಿವರಿಗೆ ಇಂತಹ ಸಮರ್ಥನೆಗಳನ್ನು ಮಾಡುವ ಅಧಿಕಾರವಿಲ್ಲ ಎಂದು ಹೇಳಿದ್ದಾರೆ.
"ಕೇಂದ್ರ ಬಿಜೆಪಿ ಸಚಿವೆ ಶೋಭಾ ಕರಂದ್ಲಾಜೆ ಅವರ ಅಜಾಗರೂಕ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತೇನೆ. ಅಂತಹ ಹೇಳಿಕೆ ನೀಡಲು ಅವರು ಎನ್‌ಐಎ ಅಧಿಕಾರಿಯಾಗಿರಬೇಕು ಅಥವಾ ರಾಮೇಶ್ವರಂ ಕೆಫೆ ಸ್ಫೋಟದೊಂದಿಗೆ ನಿಕಟ ಸಂಪರ್ಕ ಹೊಂದಿರಬೇಕು. ಸ್ಪಷ್ಟವಾಗಿ, ಅಂತಹ ಸಮರ್ಥನೆಗಳಿಗೆ ಅವರಿಗೆ ಅಧಿಕಾರವಿಲ್ಲ" ಎಂದು ಸ್ಟಾಲಿನ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕರಂದ್ಲಾಜೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಚುನಾವಣಾ ಆಯೋಗ ಗಮನಹರಿಸುವಂತೆ ಆಗ್ರಹಿಸಿದ ಸ್ಟಾಲಿನ್, ''ಬಿಜೆಪಿಯ ಈ ವಿಭಜಕ ಮಾತುಗಳನ್ನು ತಮಿಳರು ಮತ್ತು ಕನ್ನಡಿಗರು ತಿರಸ್ಕರಿಸುತ್ತಾರೆ. ಶಾಂತಿ, ಸೌಹಾರ್ದತೆಗೆ ಮತ್ತು ರಾಷ್ಟ್ರೀಯ ಏಕತೆಗೆ ಧಕ್ಕೆ ಉಂಟು ಮಾಡಿರುವ ಶೋಭಾ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸುತ್ತೇನೆ. ಪ್ರಧಾನಿಯಿಂದ ಹಿಡಿದು ಕಾರ್ಯಕರ್ತರವರೆಗೆ, ಬಿಜೆಪಿಯ ಎಲ್ಲರೂ ಈ ಕೊಳಕು ವಿಭಜಕ ರಾಜಕೀಯದಲ್ಲಿ ತೊಡಗಿಸಿಕೊಳ್ಳುವುದನ್ನು ತಕ್ಷಣವೇ ನಿಲ್ಲಿಸಬೇಕು. ಈ ದ್ವೇಷದ ಭಾಷಣವನ್ನು ಚುನಾವಣಾ ಆಯೋಗ ಗಮನಿಸಬೇಕು ಮತ್ತು ತಕ್ಷಣವೇ ಕಠಿಣ ಕ್ರಮ ತೆಗೆದುಕೊಳ್ಳಬೇಕು" ಎಂದು ಹೇಳಿದ್ದಾರೆ.
ಶೋಭಾ ಕರಂದ್ಲಾಜೆ ಹೇಳಿಕೆಯ ವಿರುದ್ಧ ಡಿಎಂಕೆ ಭಾರತದ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications