Get Updates
Get notified of breaking news, exclusive insights, and must-see stories!

ಜ.3ರಿಂದ ಬೆಂಗಳೂರು ಜನರ ಅಹವಾಲು ಆಲಿಸಲಿದ್ದಾರೆ ಡಿಕೆ ಶಿವಕುಮಾರ್

ಬೆಂಗಳೂರು, ಜನವರಿ 02: 'ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ' ಎಂಬ ಕಾರ್ಯಕ್ರಮ ಜನವರಿ 3ರಂದು ಬಹೃತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆರಂಭವಾಗಲಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ. ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನಾಗರಿಕರ ಅಹವಾಲು/ ಕುಂದು-ಕೊರತೆಗಳನ್ನು ಆಲಿಸುವ ಸಲುವಾಗಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ. ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಜನವರಿ 3ರಿಂದ 'ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ' ಎಂಬ ಹೆಸರಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Unique Program By DK Shivakumar In BBMP Limits

ಜನರು ಸರ್ಕಾರಿ ಕಛೇರಿಗಳಿಗೆ ಬರುವ ಬದಲು ಅವರ ಮನೆ ಬಾಗಿಲಲ್ಲೇ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪಾಲಿಕೆ ವ್ಯಾಪ್ತಿಯ 8 ವಲಯಗಳಲ್ಲಿ 28 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ವಲಯವಾರು 2 ಅಥವಾ 3 ವಿಧಾನಸಭಾ ಕ್ಷೇತ್ರಗಳನ್ನು ಒಟ್ಟುಗೂಡಿಸಿ ಈ ಕಾರ್ಯಕ್ರಮ ನಡೆಸಲಾಗುತ್ತದೆ.

ಮೊದಲ ಹಂತದ ಕಾರ್ಯಕ್ರಮ; 'ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ' ಎಂಬ ಹೆಸರಿನ ಕಾರ್ಯಕ್ರಮ ಮೊದಲನೇ ಹಂತದಲ್ಲಿ ಮಹದೇವಪುರ, ಯಲಹಂಕ ಹಾಗೂ ಪೂರ್ವ ವಲಯ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿದೆ. 2ನೇ ಹಂತದಲ್ಲಿ ಉಳಿದ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಬಿಬಿಎಂಪಿ ಹೇಳಿದೆ.

ಜನರು ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿ ತಮ್ಮ ಅಹವಾಲು/ ಸಮಸ್ಯೆಗಳನ್ನು ಸಲ್ಲಿಸಬಹುದು. ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ಆಸನ, ಕುಡಿಯುವ ನೀರು, ತಾತ್ಕಾಲಕ ಶೌಚಾಲಯಗಳ ವ್ಯವಸ್ಥೆ ಹಾಗೂ ಮಧ್ಯಾಹ್ನ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿರುತ್ತದೆ. ಅಲ್ಲದೆ ವಿದ್ಯುತ್, ಜನರೇಟರ್ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಸಿಬ್ಬಂದಿಗಳಗ ತರಬೇತಿ; 'ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ' ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಬಂದಂತಹ ದೂರುಗಳನ್ನು ಸಮಗ್ರ ಸಾರ್ವಜನಿಕ ಕುಂದುಕೊರತೆಗಳ ಪರಿಹಾರ ವ್ಯವಸ್ಥೆ (Integrated Public Grievance Redressal system-IPGRS) ಸಾಫ್ಟ್‌ವೇರ್‌ನಲ್ಲಿ ದಾಖಲಿಸಲು ಪಾಲಿಕೆ ಸಿಬ್ಬಂದಿಗಳಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ನಾಗರಿಕರ ಸಂಪೂರ್ಣ ವಿವರ ಹಾಗೂ ನಾಗರಿಕರಿಂದ ಬಂದಂತಹ ದೂರುಗಳು ಯಾವ ಇಲಾಖೆಗೆ ಸಂಬಂಧಿಸಿದ್ದು ಎಂಬುದನ್ನು ದಾಖಲಿಸಲು ವೈ-ಫೈ, ಕಂಪ್ಯೂಟರ್, ಪ್ರಿಂಟರ್ ಹಾಗೂ ಸ್ಕ್ಯಾನರ್‌ಗಳ ವ್ಯವಸೆಯೊಂದಿಗೆ 15 ಕೌಂಟರ್ ಸ್ಥಾಪಿಸಲಾಗಿದೆ.

ಇನ್ನು ಕಾರ್ಯಕ್ರಮದ ಸ್ಥಳದಲ್ಲಿ ನಾಗರಿಕರಿಗೆ ಅನುಕೂಲವಾಗಲು ಸಹಾಯ ಕೇಂದ್ರ ಸ್ಥಾಪಿಸಲಾಗಿರುತ್ತದೆ. ಅಲ್ಲದೆ ನಾಗರಿಕರಿಗೆ ಮಾಹಿತಿ ಒದಗಿಸುವ ನಾಮಫಲಕಗಳನ್ನು ಸಹ ಅಳವಡಿಸಲಾಗಿರುತ್ತದೆ. ಕಾರ್ಯಕ್ರಮದಲ್ಲಿ ನಾಗರಿಕರು ಅಹವಾಲುಗಳನ್ನು ನೀಡಲು ಅನುವಾಗಲು ಟೋಕನ್ ವಿತರಣೆ ಮಾಡಲಾಗುತ್ತದೆ. 10 ಕೌಂಟರ್‌ಗಳ ವ್ಯವಸ್ಥೆ ಮಾಡಲಾಗುತ್ತದೆ. ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಹಾಗೂ ಡಿ. ಕೆ. ಶಿವಕುಮಾರ್ ಅವರನ್ನು ನೇರವಾಗಿ ಭೇಟಿಯಾಗಲು ವ್ಯವಸ್ಥೆ ಕಲ್ಪಿಸಲಾಗುತ್ತದೆ. ಆಯಾ ಕ್ಷೇತ್ರದ ಶಾಸಕರನ್ನೂ ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

ಜನರ ಸಮಸ್ಯೆಗಳನ್ನು ಒಂದೇ ಸೂರಿನಡಿ ಬಗೆಹರಿಸುವ ನಿಟ್ಟಿನಲ್ಲಿ ಎಲ್ಲಾ ಪ್ರಮುಖ ಇಲಾಖೆಗಳಾದ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಸ್ಕಾಂ, ಜಲಮಂಡಳಿ, ಬಿಎಂಆರ್‌ಸಿಎಲ್, ಕೊಳಗೇರಿ ಅಭಿವೃದ್ಧಿ ಮಂಡಳಿ, ಪೊಲೀಸ್ ಇಲಾಖೆ, ಬಿಎಂಟಿಸಿ, ಕಂದಾಯ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲಿ ಇರುವರು.

ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮ ವಿವರ

* ದಿನಾಂಕ 3/01/2024. ಮಹದೇವಪುರ ವಲಯ. ವಿಧಾನಸಭಾ ಕ್ಷೇತ್ರಗಳು ಕೆ. ಆರ್. ಪುರ, ಮಹದೇವಪುರ. ಕಾರ್ಯಕ್ರಮದ ಸ್ಥಳ ಐಟಿಐ ಕ್ರೀಡಾಂಗಣ, ದೂರವಾಣಿ ನಗರ, ಕೆ. ಆರ್. ಪುರ.

* ದಿನಾಂಕ 5/01/2024. ಯಲಹಂಕ & ದಾಸರಹಳ್ಳಿ ವಲಯ. ಯಲಹಂಕ, ಬ್ಯಾಟರಾಯನಪುರ, ದಾಸರಹಳ್ಳಿ ವಿಧಾನಸಭಾ ಕ್ಷೇತ್ರಗಳು. ಸ್ಥಳ ಡಾ. ಬಿ. ಆರ್. ಅಂಬೇಡ್ಕರ್ ಭವನ, ಯಲಹಂಕ, ನ್ಯೂ ಟೌನ್.

* ದಿನಾಂಕ 6/01/2024. ಪೂರ್ವ ವಲಯ. ಹೆಬ್ಬಾಳ, ಶಿವಾಜಿನಗರ, ಪುಲಕೇಶಿನಗರ ವಿಧಾನಸಭಾ ಕ್ಷೇತ್ರಗಳು. ಸ್ಥಳ ಆರ್. ಐ. ಎ. ಎನ್. ಎಮ್. ಎಸ್ ಹೈಸ್ಕೂಲ್ ಮೈದಾನ, ಸೆಂಟ್ ಜಾನ್ಸ್ ರಸ್ತೆ, ಶಿವನ್ ಚೆಟ್ಟಿ ಗಾರ್ಡನ್.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+