ಕೆಂಪೇಗೌಡ ಹೆಸರಿನಲ್ಲಿ ವಿಶ್ವವಿದ್ಯಾನಿಲಯ: ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜೂನ್ 27: ನಾಡಪ್ರಭು ಕೆಂಪೇಗೌಡರ ಹೆಸರಿನಲ್ಲಿ ಕೌಶಲ್ಯಾಭಿವೃದ್ಧಿ ವಿಶ್ವವಿದ್ಯಾನಿಲಯ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದರು.

ಕುಮಾರಸ್ವಾಮಿ ಅವರು ಇಂದು ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಅರಮನೆ ಆವಣದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯದ ಒಟ್ಟಾರೆ ಆದಾಯದ ಶೇ. 60 ರಿಂದ 65 ರಷ್ಟು ಬೆಂಗಳೂರಿನದ್ದೇ ಆಗಿದ್ದು ಇದನ್ನು ರಾಜ್ಯದ ಅಭಿವೃದ್ಧಿಗೆ ಬಳಸಲಾಗುವುದು. ರಾಜ್ಯಾದ್ಯಂತ ಕೆಂಪೇಗೌಡ ಅವರ ಜಯಂತಿ ಆಚರಿಸಲಾಗುವುದು. ಕೆಂಪೇಗೌಡ ಅವರ ಭವನ ನಿರ್ಮಾಣ ಮಾಡಲು ಯೋಜಿಸಲಾಗಿದ್ದು ಅದಕ್ಕಾಗಿ ಹಣ ಮೀಸಲಿಡಲಾಗುವುದು ಎಂದು ತಿಳಿಸಿದರು.

University in the name of Kempegowda : CM Kumaraswamy

ಸಚಿವ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ಕೆಂಪೇಗೌಡರ ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಶಾಲಾ ಪಠ್ಯ ಪುಸ್ತಕಗಳಲ್ಲಿ ಅವರ ಬಗ್ಗೆ ಪಠ್ಯವನ್ನು ಸೇರ್ಪಡಿಗೊಳಿಸಲಾಗುವುದು. ಕೆಂಪೇಗೌಡ ಜಯಂತಿಯನ್ನು ನಾಡಹಬ್ಬವಾಗಿ ಆಚರಿಸಲಾಗುವುದು . ಅಲ್ಲದೆ ಬೆಂಗಳೂರು ನಗರವನ್ನು ಮಾದರಿ ನಗರವನ್ನಾಗಿಸಲು ಶ್ರಮಿಸಲಾಗುವುದೆಂದು ತಿಳಿಸಿದರು.

University in the name of Kempegowda : CM Kumaraswamy

ಕಾರ್ಯಕ್ರಮದಲ್ಲಿ ಸಚಿವರುಗಳಾದ ಡಿ.ಕೆ. ಶಿವಕುಮಾರ್, ಕೃಷ್ಣಭೈರೇಗೌಡ, ಡಾ: ಜಯಮಾಲ ಸೇರಿದಂತೆ ಹಲವಾರು ಶಾಸಕರು, ಗಣ್ಯರು ಅಧಿಕಾರಿಗಳು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+