ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಪ್ರಾಪ್ತ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ; ಹಲ್ಲುಜ್ಜನಿಗೆ ಮರಣದಂಡನೆ ಶಿಕ್ಷೆ

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು. ನ.18. ಏಳು ವರ್ಷಗಳ ಹಿಂದೆ ಬೆಂಗಳೂರು ನಗರದಲ್ಲಿ ನಡೆದ ಅಪ್ರಾಪ್ತ ಬಾಲಕನ ಮೇಲಿನ ಅನೈಸರ್ಗಿಕ ಹಾಗೂ ವಿಚಿತ್ರ ಲೈಂಗಿಕ ದೌರ್ಜನ್ಯ ಎಸಗಿ ಕೊಲೆಗೈಯ್ದ ಪ್ರಕರಣದಲ್ಲಿ ನ್ಯಾಯಾಲಯ ಮರಣದಂಡನೆ ಶಿಕ್ಷೆಯನ್ನು ವಿಧಿಸಿದೆ. ಇದು ಇತ್ತೀಚಿನ ವರ್ಷಗಳಲ್ಲಿ ನೀಡಿದ ಮೊದಲ ಮರಣದಂಡನೆ ಶಿಕ್ಷೆಯಾಗಿದೆ.

ಪ್ರಕರಣದ ತೀವ್ರತೆಯನ್ನು ಅರಿತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ- ಪೋಕ್ಸೋ ಕಾಯಿದೆ ಮತ್ತು ಭಾರತೀಯ ದಂಡ ಸಂಹಿತೆ ಅಡಿ ಪ್ರಕರಣದ ಅಪರಾಧಿ ಮೂರ್ತಿ ಅಲಿಯಾಸ್ 'ಹಲ್ಲುಜ್ಜ' ನಿಗೆ ಮರಣದಂಡನೆ ವಿಧಿಸಿದ ಕೋರ್ಟ್ ಆದೇಶ ನೀಡಿದೆ.

ಬೆಂಗಳೂರಿನ ಒಂದನೇ ತ್ವರಿತ ಗತಿ ನ್ಯಾಯಾಲಯದ (ಎಫ್ ಟಿಎಸ್ ಸಿ) ನ್ಯಾಯಾಧೀಶೆ ಕೆ.ಎನ್.ರೂಪ ಈ ಮಹತ್ವದ ತೀರ್ಪು ನೀಡಿದ್ದಾರೆ.

ಅಲ್ಲದೆ, ಸಂತ್ರಸ್ತನ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರಕ್ಕೆ ಸೂಚನೆ ನೀಡಿದೆ. ಪ್ರಾಸಿಕ್ಯೂಷನ್ ಪರ ಕೃಷ್ಣವೇಣಿ ಅವರು ವಾದ ಮಂಡಿಸಿದ್ದರು.

Unnatural sex with boy child: Court convicts accused for death sentence

ಪ್ರಕರಣದ ಹಿನ್ನೆಲೆ: 2015 ಸೆ.17 ರಂದು ರಾಜಗೋಪಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. 1 ವರ್ಷದ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ರಾಜಗೋಪಾಲನಗರ ಪೊಲೀಸರು ಮೂರ್ತಿ ಅಲಿಯಾಸ್ ಹಲ್ಲುಜ್ಜ ನನ್ನು ಬಂಧಿಸಿ ಆರೋಪಪಟ್ಟಿ ಸಲ್ಲಿಸಿದ್ದರು. ಇದು ಅಪರೂಪದಲ್ಲಿ ಅಪರೂಪದ ಪ್ರಕರಣವಾಗಿರುವುದರಿಂದ ಆರೋಪಿಗೆ ಕಠಿಣವಾದ ಮರಣದಂಡನೆ ಶಿಕ್ಷೆ ವಿಧಿಸಬೇಕೆಂದು ಪ್ರಾಸಿಕ್ಯೂಟರ್ ಕೃಷ್ಣವೇಣಿ ಮನವಿ ಮಾಡಿದ್ದರು.

ಪ್ರಕರಣದ ದಾಖಲೆ ಹಾಗೂ ಎಲ್ಲ ಅಂಶಗಳನ್ನು ಪರಿಶೀಲಿಸಿದ ನ್ಯಾಯಾಲಯ, ಪೋಕ್ಸೋ ಕಾಯ್ದೆಯಡಿ ಜೀವಾವಧಿ ಶಿಕ್ಷೆ ಮತ್ತು ಐಪಿಸಿ ಕಾಯ್ದೆಯಡಿ ಮರಣದಂಡನೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ಎಚ್ಚರಿಕೆಯ ಸಂದೇಶ: ಸಮಾಜದಲ್ಲಿ ಪೋಕ್ಸೋ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆತಂಕ ವಾತಾವರಣ ಸೃಷ್ಟಿಯಾಗಿದೆ. ಮಕ್ಕಳು ದೇಶದ ಭವಿಷ್ಯವಾಗಿದ್ದು, ಅವರ ಮೇಲಿನ ಕ್ರೂರತನಕ್ಕೆ ಕಠಿಣ ಶಿಕ್ಷೆ ವಿಧಿಸಬೇಕಾಗಿದೆ.

ಇಲ್ಲದಿದ್ದರೆ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ. ಆ ನಿಟ್ಟಿನಲ್ಲಿ ಈ ಮರಣದಂಡನೆ ತೀರ್ಪು ಎಚ್ಚರಿಕೆಯ ಗಂಟೆಯಾಗಿದ್ದು, ಅಂತಹ ಕೃತ್ಯಗಳನ್ನು ಎಸಗುವ ಆರೋಪಿಗಳಿಗೆ ಸಂದೇಶ ರವಾನಿಸಲಾಗಿದೆ ಎಂದು ಪ್ರಾಸಿಕ್ಯೂಟರ್ ಕೃಷ್ಣವೇಣಿ ಹೇಳಿದ್ದಾರೆ.

English summary
Unnatural sex with boy child: Court convicts accused for death sentence
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X