ಯುಪಿಎಸ್‌ಪಿ ಪರೀಕ್ಷೆ; ಯಶವಂತಪುರ-ಹುಬ್ಬಳ್ಳಿ ನಡುವೆ ರೈಲು ಸಂಚಾರ
ಬೆಂಗಳೂರು, ಅಕ್ಟೋಬರ್ 01: ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಹಿನ್ನಲೆಯಲ್ಲಿ ನೈಋತ್ಯ ರೈಲ್ವೆ ವಿಶೇಷ ರೈಲು ಓಡಿಸಲಿದೆ. ಅಕ್ಟೋಬರ್ 3 ಮತ್ತು 4ರಂದು ಈ ರೈಲು ಸಂಚಾರ ನಡೆಸಲಿದೆ.
ನೈಋತ್ಯ ರೈಲ್ವೆ ಬೆಂಗಳೂರಿನ ಯಶವಂತಪುರ ಮತ್ತು ಹುಬ್ಬಳ್ಳಿ ನಡುವೆ ವಿಶೇಷ ರೈಲನ್ನು ಓಡಿಸಲಿದೆ. ಪರೀಕ್ಷೆ ಬರೆಯಲು ಬರುವ ಅಭ್ಯರ್ಥಿಗಳಿಗೆ ಸಹಕಾರಿಯಾಗಲಿ ಎಂದು ರೈಲನ್ನು ಓಡಿಸಲಾಗುತ್ತಿದೆ.
ಯಶವಂತಪುರ-ಹುಬ್ಬಳ್ಳಿ ವಿಶೇಷ ರೈಲು ಗದಗ ಮೂಲಕ ಸಂಚಾರ ನಡೆಸಲಿದೆ. ಇದು ವಿಶೇಷ ರೈಲು ಆಗಿದ್ದು, ಅಕ್ಟೋಬರ್ 3 ಮತ್ತು 4ರಂದು ಮಾತ್ರ ಸಂಚಾರ ನಡೆಸಲಿದೆ ಎಂದು ನೈಋತ್ಯ ರೈಲ್ವೆ ಸ್ಪಷ್ಟಪಡಿಸಿದೆ.

ಹುಬ್ಬಳ್ಳಿಯಿಂದ ಹೊರಡುವ ರೈಲು ಗದಗ, ಕೊಪ್ಪಳ, ಹೊಸಪೇಟೆ, ಬಳ್ಳಾರಿ, ರಾಯದುರ್ಗ, ಚಿತ್ರದುರ್ಗ, ಬೀರೂರು, ಅರಸೀಕೆರೆ, ತುಮಕೂರು ಮೂಲಕ ಸಂಚಾರ ನಡೆಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕೋವಿಡ್ ಹಿನ್ನಲೆಯಲ್ಲಿ ಯುಪಿಎಸ್‌ಸಿ ಪರೀಕ್ಷೆಯನ್ನು ಮುಂದೂಡುವಂತೆ ಅಭ್ಯರ್ಥಿಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ನ್ಯಾಯಾಲಯ ಇದಕ್ಕೆ ಒಪ್ಪಿಗೆ ನೀಡಿರಲಿಲ್ಲ.
#SWR to run fully reserved special train between #Hubballi - #Yeshwanthpur via #Gadag, #Koppala, #Hospete, #Ballari, #Rayadurga, #Chitradurga, #Birur, #Arsikere, #Tumakuru in view of #UPSC examination as per the details below document#Karnataka #IndianRailways pic.twitter.com/y1t2Q84EhZ
— Karnataka Rail Users (@KARailway) October 1, 2020
ಕೋವಿಡ್ ಹಿನ್ನಲೆಯಲ್ಲಿ ಯುಪಿಎಸ್‌ಸಿ ಪರೀಕ್ಷೆಯನ್ನು ಮುಂದೂಡುವಂತೆ ಅಭ್ಯರ್ಥಿಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ನ್ಯಾಯಾಲಯ ಇದಕ್ಕೆ ಒಪ್ಪಿಗೆ ನೀಡಿರಲಿಲ್ಲ.
2020 ಮತ್ತು 2021ರ ಯುಪಿಎಸ್‌ಸಿ ಪರೀಕ್ಷೆಯನ್ನು ಒಟ್ಟಿಗೆ ನಡೆಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿದೆ. ಆದ್ದರಿಂದ, ಪರೀಕ್ಷೆ ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ.












Click it and Unblock the Notifications