ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯುಪಿಎಸ್‌ಪಿ ಪರೀಕ್ಷೆ; ಯಶವಂತಪುರ-ಹುಬ್ಬಳ್ಳಿ ನಡುವೆ ರೈಲು ಸಂಚಾರ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 01: ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಹಿನ್ನಲೆಯಲ್ಲಿ ನೈಋತ್ಯ ರೈಲ್ವೆ ವಿಶೇಷ ರೈಲು ಓಡಿಸಲಿದೆ. ಅಕ್ಟೋಬರ್ 3 ಮತ್ತು 4ರಂದು ಈ ರೈಲು ಸಂಚಾರ ನಡೆಸಲಿದೆ.

ನೈಋತ್ಯ ರೈಲ್ವೆ ಬೆಂಗಳೂರಿನ ಯಶವಂತಪುರ ಮತ್ತು ಹುಬ್ಬಳ್ಳಿ ನಡುವೆ ವಿಶೇಷ ರೈಲನ್ನು ಓಡಿಸಲಿದೆ. ಪರೀಕ್ಷೆ ಬರೆಯಲು ಬರುವ ಅಭ್ಯರ್ಥಿಗಳಿಗೆ ಸಹಕಾರಿಯಾಗಲಿ ಎಂದು ರೈಲನ್ನು ಓಡಿಸಲಾಗುತ್ತಿದೆ.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ವಿಶೇಷ ಮೆಮು ರೈಲು ಸಂಚಾರ ಬೆಂಗಳೂರು ವಿಮಾನ ನಿಲ್ದಾಣಕ್ಕೆ ವಿಶೇಷ ಮೆಮು ರೈಲು ಸಂಚಾರ

ಯಶವಂತಪುರ-ಹುಬ್ಬಳ್ಳಿ ವಿಶೇಷ ರೈಲು ಗದಗ ಮೂಲಕ ಸಂಚಾರ ನಡೆಸಲಿದೆ. ಇದು ವಿಶೇಷ ರೈಲು ಆಗಿದ್ದು, ಅಕ್ಟೋಬರ್ 3 ಮತ್ತು 4ರಂದು ಮಾತ್ರ ಸಂಚಾರ ನಡೆಸಲಿದೆ ಎಂದು ನೈಋತ್ಯ ರೈಲ್ವೆ ಸ್ಪಷ್ಟಪಡಿಸಿದೆ.

ಏರ್‌ಪೋರ್ಟ್ ಮಾದರಿಯಲ್ಲಿ ರೈಲು ನಿಲ್ದಾಣಗಳಲ್ಲೂ ಅಭಿವೃದ್ಧಿ ಶುಲ್ಕ ಏರ್‌ಪೋರ್ಟ್ ಮಾದರಿಯಲ್ಲಿ ರೈಲು ನಿಲ್ದಾಣಗಳಲ್ಲೂ ಅಭಿವೃದ್ಧಿ ಶುಲ್ಕ

UPSC Exam South Western Railway Will Run Special Train

ಹುಬ್ಬಳ್ಳಿಯಿಂದ ಹೊರಡುವ ರೈಲು ಗದಗ, ಕೊಪ್ಪಳ, ಹೊಸಪೇಟೆ, ಬಳ್ಳಾರಿ, ರಾಯದುರ್ಗ, ಚಿತ್ರದುರ್ಗ, ಬೀರೂರು, ಅರಸೀಕೆರೆ, ತುಮಕೂರು ಮೂಲಕ ಸಂಚಾರ ನಡೆಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೈಸೂರು ದಸರಾ; ಕಲಾವಿದರಿಗೆ ಕಡ್ಡಾಯ ಕೋವಿಡ್ ಪರೀಕ್ಷೆಮೈಸೂರು ದಸರಾ; ಕಲಾವಿದರಿಗೆ ಕಡ್ಡಾಯ ಕೋವಿಡ್ ಪರೀಕ್ಷೆ

ಕೋವಿಡ್ ಹಿನ್ನಲೆಯಲ್ಲಿ ಯುಪಿಎಸ್‌ಸಿ ಪರೀಕ್ಷೆಯನ್ನು ಮುಂದೂಡುವಂತೆ ಅಭ್ಯರ್ಥಿಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ನ್ಯಾಯಾಲಯ ಇದಕ್ಕೆ ಒಪ್ಪಿಗೆ ನೀಡಿರಲಿಲ್ಲ.

ಕೋವಿಡ್ ಹಿನ್ನಲೆಯಲ್ಲಿ ಯುಪಿಎಸ್‌ಸಿ ಪರೀಕ್ಷೆಯನ್ನು ಮುಂದೂಡುವಂತೆ ಅಭ್ಯರ್ಥಿಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ನ್ಯಾಯಾಲಯ ಇದಕ್ಕೆ ಒಪ್ಪಿಗೆ ನೀಡಿರಲಿಲ್ಲ.

2020 ಮತ್ತು 2021ರ ಯುಪಿಎಸ್‌ಸಿ ಪರೀಕ್ಷೆಯನ್ನು ಒಟ್ಟಿಗೆ ನಡೆಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿದೆ. ಆದ್ದರಿಂದ, ಪರೀಕ್ಷೆ ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ.

English summary
South western railway will run special train in a view of UPSC exam. Train will run between Hubballi and Yeshwanthpur on October 3 and 4, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X