ಬೆಂಗಳೂರು ಅಭಿವೃದ್ಧಿ ಕುರಿತು ಜ. 12 ರಂದು ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ
ಬೆಂಗಳೂರು, ಜ. 11: ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಾಳೆ (ಜ. 12) ಮಧ್ಯಾಹ್ನ 3.30ಕ್ಕೆ ಕೆ.ಡಿ.ಪಿ ಸಭೆ ನಡೆಯಲಿದೆ.
ಬೆಂಗಳೂರಿನ ಬನಶಂಕರಿಯ ಎಸ್. ಕರಿಸಿದ್ದಪ್ಪ ರಸ್ತೆಯ ನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಅನುಷ್ಠಾನದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ಕೆಡಿಪಿ ಸಭೆಗೂ ಮೊದಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಜಿಲ್ಲಾ ಪಂಚಾಯಿತಿಯ ಮುಖ್ಯದ್ವಾರ ಮತ್ತು ಸಂಪನ್ಮೂಲ ಕೇಂದ್ರ ಕಟ್ಟಡದ ಉದ್ಘಾಟನೆಯನ್ನು ಮಾಡಲಿದ್ದಾರೆ.
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಕೇಂದ್ರ ರಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ, ಸಹಕಾರ ಸಚಿವ ಎಸ್. ಟಿ.ಸೋಮಶೇಖರ್, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಸೇರಿದಂತೆ ಹಲವು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಲಿದೆ.












Click it and Unblock the Notifications