ಮಂಗಳೂರು ಗಲಭೆಗೆ ಯುಟಿ ಖಾದರ್ ಪ್ರಚೋದನಕಾರಿ ಭಾಷಣವೇ ಕಾರಣ: ಲಕ್ಷ್ಮಣ ಸವದಿ
ಬೆಂಗಳೂರು, ಡಿಸೆಂಬರ್ 20: ಮಂಗಳೂರು ಗಲಭೆಗೆ ಮಾಜಿ ಸಚಿವ ಯುಟಿ ಖಾದರ್ ಅವರ ಪ್ರಚೋದನಕಾರಿ ಭಾಷಣವೇ ಕಾರಣ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿರುವ ಅವರು, ಪೌರತ್ವ ಕಾಯ್ದೆಯಿಂದ ರಾಷ್ಟ್ರದಲ್ಲಿ ಭದ್ರತೆ ಮತ್ತು ಶಾಂತಿಗೆ ಅವಕಾಶ ಸಿಗುತ್ತದೆ. ಆದರೆ ಅದನ್ನು ತಿಳಿಯದೆ ಯುಟಿ ಖಾದರ್ ನೀಡುತ್ತಿರುವ ಪ್ರಚೋದನಕಾರಿ ಹೇಳಿಕೆಯಿಂದ ಗಲಭೆ ನಡೆಯುತ್ತಿದೆ ಎಂದರು.
ರಾಜ್ಯದಲ್ಲಿ ಶಾಂತಿ ನೆಲೆಸಲು ಎಲ್ಲರೂ ಕೈ ಜೋಡಿಸಬೇಕು, ಕಾನೂನು ಬಂದಿರೋದು ರಾಷ್ಟ್ರದ ಏಕತೆಗಾಗಿ. ಈ ಕಾಯ್ದೆಗೆ ಎಲ್ಲರೂ ಬೆಂಬಲ ನೀಡಬೇಕು. ಪ್ರತಿಭಟನೆ ಜನರ ಹಕ್ಕು, ಆದರೆ ಕೆಎಸ್ ಆರ್‌ಟಿಸಿ ಬಸ್ ಮೇಲೆ ಕಲ್ಲು ತೂರಾಟ ಬೇಡ ಎಂದು ಸವದಿ ಮನವಿ ಮಾಡಿದರು.

ರೈಲು ಮೇಲೆ ದಾಳಿ ಮಾಡುವವರ ವಿರುದ್ಧ ಗುಂಡು ಹಾರಿಸಿ ಎನ್ನುವ ಕೇಂದ್ರ ಸಚಿವ ಸುರೇಶ ಅಂಗಡಿ ಹೇಳಿಕೆ ವಿಚಾರ ಕುರಿತು ಮಾತನಾಡಿರುವ ಅವರು, ಆವೇಶದ ಭರದಲ್ಲಿ ಅಂಗಡಿಯವರು ಹೇಳಿರಬೇಕು.
ಖಾದರ್ ಅವರ ಪ್ರಚೋದನ ಹೇಳಿಕೆಯಿಂದ ಎಲ್ಲ ಸಮುದಾಯದವರಲ್ಲಿ ತಪ್ಪು ಸಂದೇಶ ರವಾನೆಯಾಗಿದೆ ಎಂದು ಹೇಳಿದರು.












Click it and Unblock the Notifications