ಉತ್ತರ ಕರ್ನಾಟಕ ನವನಿರ್ಮಾಣ ವೇದಿಕೆಯಿಂದ ಬೆಂಗಳೂರಲ್ಲಿ ಅದ್ಧೂರಿ ಕಾರ್ಯಕ್ರಮ
ಸಾಂಸ್ಕೃತಿ ಕಾರ್ಯಕ್ರಮಗಳನ್ನು ನೀಡುವುದರಲ್ಲಿ ಸದಾ ಮುಂದಿರುವ ಉತ್ತರ ಕರ್ನಾಟಕ ನವ ನಿರ್ಮಾಣ ವೇದಿಕೆ(ರಿ)ಯ ಎರಡನೇ ವರ್ಷದ ವಾರ್ಷಿಕೋತ್ಸವ ನಾಳೆ (ಜೂನ್ 4, ಭಾನುವಾರ) ಅದ್ಧೂರಿಯಾಗಿ ನಡೆಯಲಿದೆ.
ಬೆಂಗಳೂರು, ಜೂನ್ 3: ಸಾಂಸ್ಕೃತಿ ಕಾರ್ಯಕ್ರಮಗಳನ್ನು ನೀಡುವುದರಲ್ಲಿ ಸದಾ ಮುಂದಿರುವ ಉತ್ತರ ಕರ್ನಾಟಕ ನವ ನಿರ್ಮಾಣ ವೇದಿಕೆ(ರಿ)ಯ ಎರಡನೇ ವರ್ಷದ ವಾರ್ಷಿಕೋತ್ಸವ ನಾಳೆ (ಜೂನ್ 4, ಭಾನುವಾರ) ಅದ್ಧೂರಿಯಾಗಿ ನಡೆಯಲಿದೆ.
ಕಾರ್ಯಕ್ರಮದ ನಿಮಿತ್ತ ಮಧ್ಯಾಹ್ನ 3 ಗಂಟೆಗೆ ಉದ್ಯಾನ ನಗರಿ ಬೆಂಗಳೂರಿನ ರಾಜಾಜಿನಗರದ ಬಾಷ್ಯಂ ವೃತ್ತದಿಂದ ಶ್ರೀ ರಾಮಮಂದಿರ ಮಾರ್ಗವಾಗಿ ಕಲಾಕ್ಷೇತ್ರದವರೆಗೆ ಮೆರವಣಿಗೆ ನಡೆಯಲಿದೆ. ಪೂರ್ಣಕುಂಭಮೇಳದೊಂದಿಗೆ ಮೆರವಣಿಗೆ ನಡೆಯಲಿದ್ದು, ನಂತರ ವಿಜಯಪುರದ ಸಾವನ್ ಬ್ಯಾಂಜೋ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.['ಬಿಲೀಫ್ ಫೆಸ್ಟ್' ಆಚರಿಸುವಂತೆ ಯುವ ಬ್ರಿಗೇಡ್ ಕರೆ, ಏನಿದು ಬಿಲೀಫ್ ಫೆಸ್ಟ್!]

ಕೂಡಲಸಂಗಮದ ಲಿಂಗಾಯಿತ ಪಂಚಸಾಲಿ ಜಗದ್ಗುರು ಮಹಾಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮಿ, ರಾಜಾಜಿನಗರ ಶಾಸಕ ಸುರೇಶ್ ಕುಮಾರ್, ಮೇಯರ್ ಜಿ. ಪದ್ಮಾವತಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಗಾಯಕ ಮತ್ತು ನಟ ಚೆನ್ನಪ್ಪ ಹುದ್ದಾರ್ ಸಹ ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಸುಮಾರು 500 ರಿಂದ 1000 ಜನ ಸೇರುವ ನಿರೀಕ್ಷೆಯಿದೆ.












Click it and Unblock the Notifications