Good News: ಬೆಂಗಳೂರು ರೈಲು ಪ್ರಯಾಣಿಕರಿಗೆ ಬಿಗ್ ಗುಡ್‌ನ್ಯೂಸ್ ಕೊಟ್ಟ ವಿ ಸೋಮಣ್ಣ
ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದ ರೈಲು ಟರ್ಮಿನಲ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಗುಡ್‌ನ್ಯೂಸ್‌ವೊಂದನ್ನು ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಳವಾಗುತ್ತಿದ್ದು. ವರ್ಷದಿಂದ ವರ್ಷಕ್ಕೆ ರೈಲ್ವೆ ಪ್ರಯಾಣಿಕರ ಸಂಖ್ಯೆಯೂ ಸಹ ಹೆಚ್ಚಳವಾಗುತ್ತಿದೆ. ಇನ್ನು ಬೆಂಗಳೂರಿನಲ್ಲಿ ಈಗಾಗಲೇ ಕೆಎಸ್‌ಆರ್ ಬೆಂಗಳೂರು ಸಿಟಿ, ಯಶವಂತಪುರ ಹಾಗೂ ಸರ್ ಎಂ. ವಿಶ್ವೇಶ್ವರಯ್ಯ ಎನ್ನುವ ಮೂರು ಪ್ರಮುಖ ಟರ್ಮಿನಲ್‌ಗಳು ಇವೆ. ಇದೀಗ ಬೆಂಗಳೂರಿನಲ್ಲಿ ಇನ್ನೆರಡು ಟರ್ಮಿನಲ್‌ಗಳನ್ನು ನಿರ್ಮಾಣ ಮಾಡುವ ಬಗ್ಗೆ ಸೋಮಣ್ಣ ಅವರು ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಹೌದು ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ 2 ಟರ್ಮಿನಲ್ ನಿರ್ಮಾಣ ಮಾಡುವ ಬಗ್ಗೆ ಬಿಗ್‌ಅಪ್‌ಡೇಟ್ ಕೊಟ್ಟಿದ್ದಾರೆ.
ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತನ ಪ್ರದೇಶದಲ್ಲಿ ರೈಲು ಪ್ರಯಾಣಿಕರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದ್ದು. ಈ ಪ್ರಯಾಣಿಕೆ ಸಂಖ್ಯೆಗೆ ಅನುಗುಣವಾಗಿ ರೈಲ್ವೆ ಸೇವೆಯನ್ನು ವಿಸ್ತರಿಸುವುದಕ್ಕೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದರ ಭಾಗವಾಗಿ ದೇವನಹಳ್ಳಿ ಹಾಗೂ ನೆಲಮಂಗಲದಲ್ಲಿ ಇನ್ನೆರಡು ಟರ್ಮಿನಲ್‌ಗಳನ್ನು ನಿರ್ಮಾಣ ಮಾಡುವ ಬಗ್ಗೆ ಪರಿಶೀಲನೆ ಮಾಡುತ್ತಿರುವುದಾಗಿ ವಿ ಸೋಮಣ್ಣ ಅವರು ಮಾಹಿತಿ ನೀಡಿದ್ದಾರೆ.

ಇನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಮೆಗಾ ಕೋಚಿಂಗ್ ಟರ್ಮಿನಲ್ ನಿರ್ಮಾಣ ಮಾಡುವುದಕ್ಕೆ ನೈಋತ್ಯ ರೈಲ್ವೆ ಮುಂದಾಗಿದೆ. ಬೆಂಗಳೂರಿನಲ್ಲಿ ಈಗಾಗಲೇ ಮೂರು ಪ್ರಮುಖ ರೈಲು ನಿಲ್ದಾಣ ಕೇಂದ್ರಗಳಿವೆ. ಆದರೆ ಈ ರೈಲು ನಿಲ್ದಾಣಗಳಲ್ಲಿ ಜನದಟ್ಟಣೆ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಳವಾಗುತ್ತಿರುವುದು, ಈಗಾಗಲೇ ಇರುವ ಟರ್ಮಿನಲ್‌ಗಳ ಮೇಲೆ ಒತ್ತಡ ಹೆಚ್ಚಳವಾಗುತ್ತಿರುವುದು ಹಾಗೂ ಸುತ್ತಮುತ್ತಲಿನ ಪ್ರದೇಶದ ಜನ ಮುಖ್ಯ ರೈಲುಗಳಿಗಾಗಿ ಇದೇ ರೈಲು ನಿಲ್ದಾಣಗಳಿಗೆ ಬರಬೇಕಾಗಿರುವ ಪರಿಸ್ಥಿತಿ ಇರುವುದು ಸೇರಿದಂತೆ ವಿವಿಧ ಕಾರಣಗಳಿಗೆ ಈ ಟರ್ಮಿನಲ್‌ನ ಮೇಲೆ ಒತ್ತಡ ಹೆಚ್ಚಳವಾಗುತ್ತಿದೆ. ಹೀಗಾಗಿ ಇನ್ನೆರಡು ಟರ್ಮಿನಲ್‌ಗಳ ನಿರ್ಮಾಣಕ್ಕೆ ಚಿಂತನೆ ನಡೆದಿರುವುದಾಗಿ ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಟರ್ಮಿನಲ್ ಅವಶ್ಯವಿದೆ: ಬೆಂಗಳೂರಿನಲ್ಲಿ ರೈಲು ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹೀಗಾಗಿ ಈಗಾಗಲೇ ಇರುವ ರೈಲು ಟರ್ಮಿನಲ್‌ಗಳ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಇನ್ನು ಬೆಂಗಳೂರಿಗೆ ಇನ್ನಷ್ಟು ರೈಲು ಟರ್ಮಿನಲ್‌ಗಳ ಅವಶ್ಯಕತೆ ಇದೆ ಎಂದು ವಿ ಸೋಮಣ್ಣ ಅವರು ಹೇಳಿದ್ದಾರೆ. ಅಲ್ಲದೆ ವೈಟ್‌ಫೀಲ್ಡ್ ವ್ಯಾಪ್ತಿಯಲ್ಲಿ ಹೊಸ ಟರ್ಮಿನಲ್‌ಗಳ ನಿರ್ಮಾಣಕ್ಕೆ ಅವಶ್ಯವಿರುವಷ್ಟು ಜಾಗ ಇಲ್ಲದೆ ಇರುವುದರಿಂದ ದೇವನಹಳ್ಳಿ ಹಾಗೂ ನೆಲಮಂಗಲದಲ್ಲಿ ಟರ್ಮಿನಲ್‌ಗಳನ್ನು ಅಭಿವೃದ್ಧಿಪಡಿಸುವುದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪ್ರತಿ ಹೊಸ ಟರ್ಮಿನಲ್ ನಿರ್ಮಾಣ ಮಾಡುವುದಕ್ಕೆ ಕನಿಷ್ಠ 400 ಎಕರೆ ಅವಶ್ಯಕತೆ ಇದೆ ಎಂದು ಅವರು ಹೇಳಿದ್ದಾರೆ.
ದೇವನಹಳ್ಳಿ ರೈಲ್ವೆ ಟರ್ಮಿನಲ್ ಹೆಂಗಿರಲಿದೆ: ಇನ್ನು ದೇವನಹಳ್ಳಿಯ ನೂತನ ರೈಲ್ವೆ ಟರ್ಮಿನಲ್ ಭರ್ಜರಿಯಾಗಿ ನಿರ್ಮಾಣವಾಗಲಿದೆ. ಇದರಿಂದ ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರು ಹಾಗೂ ಈ ಭಾಗದ ಪ್ರಯಾಣಿಕರಿಗೂ ಅನುಕೂಲವಾಗಲಿದೆ. ನೂತನ ಮೆಗಾ ರೈಲ್ವೆ ಟರ್ಮಿನಲ್ ನಿರ್ಮಾಣಕ್ಕಾಗಿ ದೇವನಹಳ್ಳಿಯ ವೆಂಕಟಗಿರಿ ಕೋಟೆ ಹಾಲ್ಟ್ ನಿಲ್ದಾಣದ ಸಮೀಪದಲ್ಲಿ ಜಾಗವನ್ನು ಗುರತಿಸಲಾಗಿದೆ. ಇನ್ನು ನೂತನ ಟರ್ಮಿನಲ್ 16 ಪ್ಲಾಟ್‌ಫಾರ್ಮ್‌ಗಳನ್ನು ಒಳಗೊಂಡಿರಲಿದೆ. ಅಲ್ಲದೆ ಹಲವು ವಿಶೇಷ ಸೌಲಭ್ಯಗಳನ್ನು ಇದು ಒಳಗೊಂಡಿರಲಿದೆ ಎಂದು ಹೇಳಲಾಗಿದೆ.

ಇನ್ನು ಕೆಎಸ್ಆರ್ ಬೆಂಗಳೂರು ಸಿಟಿ ರೈಲು ನಿಲ್ದಾಣವನ್ನು ಇನ್ನಷ್ಟು ಅಭಿವೃದ್ಧಿಪಡಿಸಲಾಗುತ್ತಿದೆ. ಈ ನಿಲ್ದಾಣದ ಪುನರ್ ಅಭಿವೃದ್ಧಿಯನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿ ಮಾಡಲಾಗುತ್ತಿದ್ದು. ಇದಕ್ಕೆ ಅಂದಾಜು 1200 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಮುಂದುವರಿದು ಕೆಎಸ್ಆರ್ ಬೆಂಗಳೂರು ಸಿಟಿ ನಿಲ್ದಾಣದಲ್ಲೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗುತ್ತಿದೆ. ಇಲ್ಲಿ 180 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ನೂತನ ಪ್ಲಾಟ್‌ಫಾರ್ಮ್‌ಗಳನ್ನು ನಿರ್ಮಿಸಲಾಗುವುದು. ಅಲ್ಲದೆ ಬೆಂಗಳೂರು ಕಂಟೋನ್ಮೆಂಟ್ ಹಾಗೂ ಯಶವಂತಪುರ ನಿಲ್ದಾಣಗಳನ್ನು ವಿಶ್ವ ದರ್ಜಿಯ ಸೌಲಭ್ಯಗಳೊಂದಿಗೆ ಅಭಿವೃದ್ಧಿ ಮಾಡುವುದಾಗಿ ಅವರು ಹೇಳಿದ್ದಾರೆ.












Click it and Unblock the Notifications