ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿಸೆಂಬರ್ ಅಂತ್ಯಕ್ಕೆ ಎಲ್ಲರಿಗೂ ಲಸಿಕೆ: ಸಚಿವ ಡಾ.ಕೆ.ಸುಧಾಕರ್

|
Google Oneindia Kannada News

ಬೆಂಗಳೂರು, ಜೂನ್ 24: ''ಲಸಿಕೆಯೊಂದರಿಂದಲೇ ಕೊರೊನಾ ಸೋಂಕಿನಿಂದ ದೂರವಿರಲು ಸಾಧ್ಯ. ಡಿಸೆಂಬರ್ ಅಂತ್ಯಕ್ಕೆ ಎಲ್ಲರಿಗೂ ಎರಡೂ ಡೋಸ್ ಲಸಿಕೆಯನ್ನು ರಾಜ್ಯ ಸರ್ಕಾರ ನೀಡಲಿದೆ,'' ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ರಾಜ್ಯ ವಕೀಲರ ಪರಿಷತ್ತಿನಲ್ಲಿ ಕೋವಿಡ್-19 ಉಚಿತ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಡಿಸೆಂಬರ್ ಅಂತ್ಯದಲ್ಲಿ ಕರ್ನಾಟಕದ ಸಮಸ್ತ ಜನರಿಗೆ ಎರಡೂ ಡೋಸ್ ನೀಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಲಿದೆ. ಲಸಿಕೆಯೊಂದರಿಂದಲೇ ನಾವು ಕೊರೊನಾದಿಂದ ದೂರವಿರಲು ಸಾಧ್ಯ. ಇಲ್ಲದಿದ್ದರೆ ಯಾವಾಗಲೂ ಮಾಸ್ಕ್ ಧರಿಸಿಕೊಂಡೇ ಇರಬೇಕಾಗುತ್ತದೆ. ಮಾಸ್ಕ್ ಬಿಟ್ಟು ಮುಕ್ತವಾಗಿ ಮೊದಲಿನಂತೆ ಇರುವ ಸ್ಥಿತಿ ಬರಲು ಎಲ್ಲರೂ ಲಸಿಕೆ ಪಡೆಯಬೇಕು ಎಂದರು.

ಕೋವಿಡ್ ಎರಡನೇ ಅಲೆಯಲ್ಲಿ ನಿರೀಕ್ಷೆಗೆ ಮೀರಿ ಸೋಂಕು ಹೆಚ್ಚಿದ್ದರೂ, ಸರ್ಕಾರದ ಕ್ರಮಗಳಿಂದ ಸಾವಿನ ಪ್ರಮಾಣ ಬಹಳ ಕಡಿಮೆಯಾಗಿದೆ. ಸೋಂಕು ನಿಯಂತ್ರಣಕ್ಕೆ ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ ಹೆಚ್ಚಿಸಲಾಗಿದೆ. ಕಳೆದ ಇಪ್ಪತ್ತೈದು ವರ್ಷಗಳಲ್ಲೇ ವೈದ್ಯರ ನೇರ ನೇಮಕ ಆಗಿರಲಿಲ್ಲ. ಗ್ರಾಮೀಣ ಪ್ರದೇಶದ ಆಸ್ಪತ್ರೆಗಳಿಂದ, ಜಿಲ್ಲಾಸ್ಪತ್ರೆಗಳವರೆಗೂ ಖಾಲಿ ಇರುವ 1,760 ವೈದ್ಯ, ವೈದ್ಯಾಧಿಕಾರಿ ಹುದ್ದೆಗಳನ್ನು ತುಂಬಲಾಗಿದೆ. ಮೂರನೇ ಅಲೆಗೆ ಸಂಬಂಧಿಸಿದಂತೆ ಡಾ.ದೇವಿಶೆಟ್ಟಿ ಸಮಿತಿ ನೀಡಿದ ವರದಿಯ ಶಿಫಾರಸು ಆಧರಿಸಿ ಜಿಲ್ಲಾಮಟ್ಟದಲ್ಲಿ ಆರೋಗ್ಯ ಸೌಕರ್ಯ ಬಲಪಡಿಸಲಾಗುತ್ತಿದೆ ಎಂದರು.

Vaccination is the only way to keep Covid-19 away; Health & Medical Education Minister Dr.K.Sudhakar

ಲಸಿಕೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡಲಾಗುತ್ತಿದೆ. ಅದನ್ನೇ ಜನರು ಬೇಗ ನಂಬುತ್ತಿದ್ದಾರೆ. ಆದರೆ ಸರ್ಕಾರ ನೀಡುವ ಅಂಕಿ ಅಂಶಗಳನ್ನು ನಂಬಬೇಕು. ಸಿಡುಬು ರೋಗಕ್ಕೆ ಲಸಿಕೆ ಕಂಡುಹಿಡಿದಾಗ ಅದನ್ನು ನಂಬಲು ಹಲವು ವರ್ಷಗಳೇ ಬೇಕಾಯಿತು. ಹೆಪಟೈಟಿಸ್ ಬಿ ಲಸಿಕೆ ಆವಿಷ್ಕಾರವಾದರೂ ಭಾರತಕ್ಕೆ ಬರಲು 20 ವರ್ಷ ಬೇಕಾಯಿತು. ಆದರೆ ಕೋವಿಡ್ ಆರಂಭವಾದ ಬಳಿಕ ಬೇಗ ಲಸಿಕೆ ದೊರೆತಿದೆ. ಇದು ವಿದೇಶದ್ದಾಗಿರದೆ, ದೇಶೀಯವಾಗಿಯೇ ತಯಾರಾಗಿರುವುದು ಹೆಮ್ಮೆಯ ವಿಚಾರ. ಅತ್ಯಂತ ಪರಿಣಾಮಕಾರಿಯಾದ ಈ ಲಸಿಕೆಗಳನ್ನು ಎಲ್ಲರೂ ಪಡೆಯಬೇಕು ಎಂದರು.

ವಿದೇಶದ ಲಸಿಕೆಗಳು ಹೆಚ್ಚು ದರ ಹೊಂದಿವೆ. ಆದರೆ ನಮ್ಮ ದೇಶದ ಲಸಿಕೆಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಸಂಪೂರ್ಣ ಉಚಿತವಾಗಿ ನೀಡಿದ್ದಾರೆ. ಲಸಿಕೆಯ ಬಗ್ಗೆ ವೈಜ್ಞಾನಿಕ ನೆಲೆಗಟ್ಟಿನಲ್ಲಿ ಅರ್ಥ ಮಾಡಿಕೊಂಡು ಜನರಿಗೆ ಉತ್ತಮ ಸಂದೇಶ ನೀಡಬೇಕು ಎಂದರು.

Vaccination is the only way to keep Covid-19 away; Health & Medical Education Minister Dr.K.Sudhakar

Recommended Video

Philippines ಅಧ್ಯಕ್ಷ ಲಸಿಕೆ ತೆಗೆದುಕೊಳ್ಳದಿದ್ದರೆ ಯಾವ ಶಿಕ್ಷೆ ಏನು | Oneindia Kannada

ರಾಜ್ಯದಲ್ಲಿರುವ ಸುಮಾರು 1 ಲಕ್ಷ ವಕೀಲರು ಹಾಗೂ ಅವರ ಕುಟುಂಬ ಸದಸ್ಯರಿಗೆ ಪ್ರಾಶಸ್ತ್ಯದಲ್ಲಿ ಲಸಿಕೆ ನೀಡಲು ರಾಜ್ಯ ಸರ್ಕಾರ ಕ್ರಮ ವಹಿಸಿದೆ. ಹೆಚ್ಚು ಜನರ ಸಂಪರ್ಕ ಇರುವ ವೃತ್ತಿಪರರಿಗೆ ಲಸಿಕೆ ನೀಡಲಾಗುತ್ತಿದೆ ಎಂದರು.

English summary
Vaccination is the only way out to keep Covid away. Government is determined to provide both the doses of Covid vaccine for all by this December end, said Health & Medical education Minister Dr.K.Sudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X