• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜನಸಂದಣಿ ತಾಣಗಳಿಗೆ ಹೋಗುವವರಿಗೆ ಲಸಿಕೆ ಕಡ್ಡಾಯ: ಸಿ.ಎನ್.ಅಶ್ವತ್ಥನಾರಾಯಣ

|
Google Oneindia Kannada News

ಬೆಂಗಳೂರು ಡಿಸೆಂಬರ್ 3: ರಾಜ್ಯದಲ್ಲಿ ಓಮಿಕ್ರಾನ್ ವೈರಾಣು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜನಸಂದಣಿ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಲಾಗಿದೆ. ಮಾಸ್ಕ್‌, ಸಾಮಾಜಿಕ ಅಂತರ ಕಾಪಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

ಇನ್ನೂ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಮಾರುಕಟ್ಟೆ, ಶಾಲಾ ಕಾಲೇಜು, ಕಚೇರಿ, ಸಿನಿಮಾ ಮಂದಿರ ಮತ್ತು ಹೋಟೆಲುಗಳಂತಹ ಜನಸಂದಣಿಯ ಸ್ಥಳಗಳಿಗೆ ಹೋಗುವವರಿಗೆ ಕೊರೊನಾ ಲಸಿಕೆಯನ್ನು ಕಡ್ಡಾಯಗೊಳಿಸಲಾಗುವುದು ಎಂದು ಹೇಳಿದ್ದಾರೆ.

'ಓಮಿಕ್ರಾನ್ ವೈರಾಣು ಹರಡುತ್ತಿರುವ ಹಿನ್ನೆಲೆಯಲ್ಲಿ ಜರ್ಮನಿ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಇಂತಹ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲೂ ಇದೇ ಕ್ರಮವನ್ನು ಅನುಸರಿಸಲಾಗುವುದು. ಹೊಸ ವೈರಾಣುವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲರೂ ಒಂದೇ ಬಗೆಯಲ್ಲಿ ಯೋಚಿಸಬೇಕಾದ ಅಗತ್ಯವಿದೆ. ಯಾರೂ ಅನಗತ್ಯ ಭಯಕ್ಕೆ ಒಳಗಾಗಬೇಕಿಲ್ಲ. ಸರಕಾರವು ಈ ವೈರಾಣು ಹೇಗೆ ಹಬ್ಬುತ್ತಿದೆ ಮತ್ತು ಇದರ ಸ್ವರೂಪ ಇತ್ಯಾದಿಗಳ ಬಗ್ಗೆ ಚಿಂತಿಸುತ್ತಿದೆ' ಎಂದು ಅವರು ಹೇಳಿದರು.

ರಾಜ್ಯ ರಾಜಧಾನಿಯಲ್ಲಿ ಓಮಿಕ್ರಾನ್ ವೈರಸ್ ಹರಡಿದ ಬೆನ್ನಲ್ಲೆ ಇಂದು ಸಿಎಂ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಆರ್, ಅಶೋಕ್ ಹೊಸ ಮಾರ್ಗಸೂಚಿಗಳ ಬಗ್ಗೆ ವಿವರಿಸಿದರು. ಬೆಂಗಳೂರಿನಲ್ಲಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್, "ಸಭೆಯಲ್ಲಿ ಸಿಎಂ ಅಧಿಕಾರಿಗಳು ಮತ್ತು ಸಚಿವರ ಜೊತೆ ಚರ್ಚೆ ಮಾಡಿದ್ದಾರೆ. ಸಭೆಯಲ್ಲಿ ಕೆಲ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ವಿಶ್ವದಲ್ಲಿ ಈವರೆಗೆ 400 ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಶಾಲಾ-ಕಾಲೇಜುಗಳಲ್ಲಿ ಹೆಚ್ಚು ಪ್ರಕರಣಗಳು ಕಂಡು ಬರುತ್ತಿರುವುದರಿಂದ ಫೋಷಕರಿಗೆ ಎರಡು ಡೋಸ್ ಆಗಿದ್ದರೆ ಮಾತ್ರ ಅವರ ಮಕ್ಕಳಿಗೆ ಶಾಲೆಗೆ ಬರಲು ಅವಕಾಶ ನೀಡಲಾಗುತ್ತದೆ. ಯಾವುದೇ ಶಾಲೆಯಲ್ಲಿ ಸಮಾರಂಭ ಮಾಡುವಂತಿಲ್ಲ. ಜೊತೆಗೆ ಮಾಲ್, ಸಿನಿಮಾ ಮಂದಿರಗಳಿಗೆ ಎರಡು ಡೋಸ್ ಹಾಕಿಸಿಕೊಂಡವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲು ಸೂಚಿಸಲಾಗಿದೆ. ಜೊತೆಗೆ ಆರೋಗ್ಯ ಇಲಾಖೆಗೆ ಸಿಎಂ ಸೂಚನೆ ಕೊಟ್ಟಿದ್ದಾರೆ.

ಈ ಹಿಂದೆ ಕೊರೊನಾ ತೀವ್ರವಾಗಿದ್ದ ಸಮಯದಲ್ಲಿ ತೆಗೆದುಕೊಂಡ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧವಾಗಿರಬೇಕು. ಐಸಿಯು, ಹೆಚ್ಚು ಬೆಡ್‌ಗಳನ್ನು ಮತ್ತೆ ಸ್ಥಾಪಿಸಬೇಕು. ಹೆಚ್ಚಿನ ಆಕ್ಸಿಜನ್ ಕೂಡ ವ್ಯವಸ್ಥೆ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಕಂಟ್ರೋಲ್ ರೂಂ ಮತ್ತೆ ಪ್ರಾರಂಭ ಮಾಡಲಾಗಿದೆ. ಅದಕ್ಕೆ ಬೇಕಾದ ಸಿಬ್ಬಂದಿ ವರ್ಗವನ್ನು ತೆಗೆದುಕೊಳ್ಳಲು ಮಾಡಲು ಸೂಚಿಸಲಾಗಿದೆ. ಅಗತ್ಯವಿರುವ ಔಷಧಿ ಖರೀದಿಗೂ ಸೂಚನೆ ಮಾಡಲಾಗಿದೆ. ಇನ್ನೂ ಕೆಲ ಮಾರ್ಗಸೂಚಿಗಳನ್ನು ಸೂಚಿಲಾಗಿದೆ. ಮದುವೆ ಸಮಾರಂಭಗಳಲ್ಲಿ ಐದು ನೂರು ಜನ ಮಾತ್ರ ಸೇರಬೇಕು. ವಿಮಾನ ನಿಲ್ದಾಣದಲ್ಲಿ ಟೆಸ್ಟಿಂಗ್ ಕಡ್ಡಾಯ ಮಾಡಲಾಗಿದೆ. ಪ್ರತಿನಿತ್ಯ ಒಂದು ಲಕ್ಷ ಪರೀಕ್ಷೆ ಮಾಡಲು ಸೂಚನೆ ಮಾಡಲಾಗುತ್ತದೆ. ನೆಗಟಿವ್ ರಿಪೋರ್ಟ್ ಬಂದ್ರೆ ಮಾತ್ರ ವಿಮಾನ ನಿಲ್ದಾಣದಲ್ಲಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಜೊತೆಗೆ ನೆಗಟಿವ್ ಬಂದ್ರೆ ಮಾತ್ರ ಹೊರಗೆ ಕಳುಹಿಸಲಾಗುತ್ತದೆ. ಈವರೆಗೆ ಓಮಿಕ್ರಾನ್ ಸಾವಿನ ಪ್ರಕರಣಗಳು ಕಂಡುಬಂದಿಲ್ಲ' ಎಂದರು.

46 ವರ್ಷದ ಸೋಂಕಿತ ವ್ಯಕ್ತಿ ನವೆಂಬರ್ 20ರಂದು ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಬಂದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಪಾಸಿಟಿವ್ ಬಂದಿತ್ತು. ಮೂರು ದಿನ ಮಾತ್ರ ಹೋಟೆಲ್‌ನಲ್ಲಿ ಕ್ವಾರಂಟೈನ್ ಆಗಿದ್ದರು. ಮೂರು ದಿನಗಳ ನಂತರ ಪರೀಕ್ಷೆ ಮಾಡಲಾಗಿದೆ. ನೆಗೆಟಿವ್ ಬಂದಿದೆ. ಈ ವ್ಯಕ್ತಿಯಲ್ಲಿ ರೋಗ ಲಕ್ಷಣಗಳು ಕಂಡು ಬಂದಿರಲಿಲ್ಲ. ಪರೀಕ್ಷೆ ಬಳಿಕ ಇವರು ನೇರವಾಗಿ ಬೊಮ್ಮಸಂದ್ರಕ್ಕೆ ತೆರಳಿದ್ದಾರೆ. ನಂತರ ಅವರು ಮೀಟಿಂಗ್‌ನಲ್ಲಿ ಭಾಗಿಯಾಗಿದ್ದಾರೆ. ಕಂಪನಿ ಬೋರ್ಡ್ ಮೀಟಿಂಗ್‌ನಲ್ಲಿ ಆರು ಜನ ಭಾಗಿಯಾಗಿದ್ದರು. ಹೋಮ್ ಕ್ವಾರಂಟೈನ್ ಆಗದೇ ಮೀಟಿಂಗ್‌ನಲ್ಲಿ ಅವರು ಭಾಗಿಯಾಗಿದ್ದಾರೆ. ಹೀಗಾಗಿ ಪ್ರಥಮ ಸಂಪರ್ಕದಲ್ಲಿದ್ದವರಲ್ಲಿ ಸೋಂಕು ಹರಡಿರುವ ಸಾಧ್ಯತೆ ಇದೆ. ಈ ಬಗ್ಗೆ ಪರಶೀಲನೆ ನಡೆಸಲಾಗಿದ್ದು ಮಾದರಿಗಳನ್ನು ಪರೀಕ್ಷೆಗೆ ನೀಡಲಾಗಿದೆ.

   ಓಮಿಕ್ರಾನ್ ರೂಪಾಂತರ, ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. | Oneindia Kannada | Oneindia Kannada

   ಎರಡನೇ ವ್ಯಕ್ತಿಗೆ ಯಾವುದೇ ಟ್ರಾವೆಲ್ ಹಿಸ್ಟ್ರಿ ಇಲ್ಲ. ಇದರ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ನವೆಂಬರ್ 22 ರಂದು ಎರಡನೇ ವ್ಯಕ್ತಿಗೆ ಪರೀಕ್ಷೆ ಮಾಡಲಾಗಿದೆ. ಈ ವೇಳೆ ಪಾಸಿಟಿವ್ ಬಂದಿದೆ. ನವೆಂಬರ್ 24 ಸೋಂಕು ದೃಢಪಟ್ಟಿದೆ. 13 ಪ್ರಥಮ 213 ದ್ವೀತಿಯ ಸಂಪರ್ಕದಲ್ಲಿದ್ದರು. ಇವರಲ್ಲಿ ಮೂವರಿಗೆ ಪಾಸಿಟಿವ್ ಬಂದಿದೆ. ಒಟ್ಟು ಐದು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. "ಜೀವಕ್ಕೆ ಅಪಾಯ ಇದಿಯೋ ಇಲ್ವೋ ಅನ್ನೋದನ್ನ ನೋಡಲಾಗುತ್ತದೆ. ಈವರೆಗೆ ಸೋಂಕಿತರಲ್ಲಿ ಜೀವಕ್ಕೆ ಅಪಾಯವಿರುವುದು ಕಂಡು ಬಂದಿಲ್ಲ. ಹೀಗಾಗಿ ಆಂತಕ ಬೇಡ. ಜಾಗೃತರಾಗಿವಾಗಿರಿ. ವೇಗವಾಗಿ ಇದು ಹರಡುತ್ತದೆ ಆದರೆ ಅಪಾಯವಿಲ್ಲ" ಎಂದು ಸಚಿವ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.

   English summary
   Higher Education Minister Dr CNN Ashwaththa Narayana said the coronavirus vaccine would be made compulsory for those going to crowded places like market, school, office, cinema and hotels.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X