ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕದಲ್ಲಿ 237 ಕಡೆ ಕೋವಿಶೀಲ್ಡ್, 6 ಕಡೆ ಕೋವ್ಯಾಕ್ಸಿನ್ ಲಸಿಕೆ ವಿತರಣೆ

|
Google Oneindia Kannada News

ಬೆಂಗಳೂರು, ಜನವರಿ 15: ರಾಜ್ಯದ 243 ಕಡೆಗಳಲ್ಲಿ ಶನಿವಾರ (ಜನವರಿ 16) ಕೊರೊನಾ ಲಸಿಕೆ ನೀಡುತ್ತಿದ್ದು, ಬೆಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಸೇರಿದಂತೆ 10 ಕಡೆಗಳಲ್ಲಿ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಕೊರೊನಾ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒ, ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು.

54 ಬಾಕ್ಸ್, 6.48 ಲಕ್ಷ ಡೋಸ್ ಲಸಿಕೆ ಎಲ್ಲವೂ ಸುರಕ್ಷಿತ : ಸುಧಾಕರ್ 54 ಬಾಕ್ಸ್, 6.48 ಲಕ್ಷ ಡೋಸ್ ಲಸಿಕೆ ಎಲ್ಲವೂ ಸುರಕ್ಷಿತ : ಸುಧಾಕರ್

ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿಯವರು ಲಸಿಕೆ ವಿತರಣೆಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು ಒಂದರಲ್ಲೇ 10 ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುವುದು. ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲೂ ನೀಡಲಾಗುವುದು. ಕೋವಿಶೀಲ್ಡ್ ಲಸಿಕೆಯನ್ನು ರಾಜ್ಯದ 237 ಕೇಂದ್ರ ಹಾಗೂ ಕೋವ್ಯಾಕ್ಸಿನ್ ಲಸಿಕೆಯನ್ನು ಬಳ್ಳಾರಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ ಕೇಂದ್ರಗಳಲ್ಲಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಕೊರೊನಾ ವಾರಿಯರ್ಸ್ ಗಳಿಗೆ ಮೊದಲು ಲಸಿಕೆ

ಕೊರೊನಾ ವಾರಿಯರ್ಸ್ ಗಳಿಗೆ ಮೊದಲು ಲಸಿಕೆ

ಲಸಿಕೆ ನೀಡಲು ಮೊದಲಿಗೆ ಜನಪ್ರತಿನಿಧಿಗಳನ್ನೇ ಆರಿಸಬಹುದಿತ್ತು. ಆದರೆ ಕೊರೊನಾ ನಿಯಂತ್ರಣಕ್ಕೆ ಶ್ರಮಿಸುತ್ತಿರುವವರಿಗೆ ಮೊದಲ ಪ್ರಾಶಸ್ತ್ಯದಲ್ಲಿ ಲಸಿಕೆ ನೀಡಲಾಗುತ್ತಿದೆ. ಬಳಿಕ ಇತರೆ ರೋಗಗಳಿಂದ ಬಳಲುವವರಿಗೆ ಲಸಿಕೆ ನೀಡಲಾಗುವುದು ಎಂದರು.

7,17,439 ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತದೆ. ಮೊದಲ ದಿನ 24,300 ಮಂದಿಗೆ ನೀಡುವ ಗುರಿ ಇದೆ. ನಮ್ಮಲ್ಲಿ ಒಟ್ಟು 8,14,500 ಡೋಸ್ ಲಸಿಕೆ ಲಭ್ಯವಿದ್ದು, ಒಂದು ವಾರದೊಳಗೆ ಮೊದಲ ಹಂತದ ವಿತರಣೆ ಪ್ರಕ್ರಿಯೆ ಮುಗಿಯುವ ಸಾಧ್ಯತೆ ಇದೆ ಎಂದರು.

ಸರ್ಕಾರಿ ಮಾಹಿತಿ ಮಾತ್ರ ನಂಬಿ:

ಸರ್ಕಾರಿ ಮಾಹಿತಿ ಮಾತ್ರ ನಂಬಿ:

ಲಸಿಕೆಯಿಂದ ಅಡ್ಡಪರಿಣಾಮ ಉಂಟಾದರೆ, ಸ್ಥಳದಲ್ಲೇ ತುರ್ತು ಚಿಕಿತ್ಸೆ ವ್ಯವಸ್ಥೆ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡಿ ಜನಸಾಮಾನ್ಯರನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ. ಸರ್ಕಾರದ ಸಾಮಾಜಿಕ ಜಾಲತಾಣಗಳಿಂದ ಬಿಡುಗಡೆ ಮಾಡುವ ಮಾಹಿತಿ ಮಾತ್ರ ಅಧಿಕೃತ ಹಾಗೂ ಸತ್ಯ ಎಂದು ಸ್ಪಷ್ಟಪಡಿಸಿದರು.

ಲಸಿಕೆ ಸಂಪೂರ್ಣ ಸುರಕ್ಷಿತ:

ಲಸಿಕೆ ಸಂಪೂರ್ಣ ಸುರಕ್ಷಿತ:

ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿ, ಪೊಲೀಸರು, ಪೌರಕಾರ್ಮಿಕರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಲಸಿಕೆ ಸಂಪೂರ್ಣ ಸುರಕ್ಷಿತ.

ಮೊದಲ ಡೋಸ್ ಪಡೆದ 28 ದಿನಗಳ ನಂತರ 2ನೇ ಡೋಸ್ ನೀಡಲಾಗುತ್ತದೆ. ಜನರು ಯಾವುದೇ ಆತಂಕವಿಲ್ಲದೆ ವಿಶ್ವಾಸದಿಂದ ಲಸಿಕೆ ಪಡೆಯಿರಿ.

ರಾಜ್ಯದಲ್ಲಿ 10 ವಾಕ್-ಇನ್ ಕೂಲರ್, 4 ವಾಕ್-ಇನ್ ಫ್ರೀಜರ್, 3,210 ಐಎಲ್ ಆರ್, 3,312 ಕೋಲ್ಡ್ ಬಾಕ್ಸ್, 46,591 ಲಸಿಕೆ ಕ್ಯಾರಿಯರ್, 2,25,749 ಐಸ್ ಪ್ಯಾಕ್ ಇದೆ ಎಂದು ಹೇಳಿದರು.

ಒಂದು ವೈಲ್ ನಿಂದ 20 ಮಂದಿಗೆ ಲಸಿಕೆ ನೀಡಬಹುದು

ಒಂದು ವೈಲ್ ನಿಂದ 20 ಮಂದಿಗೆ ಲಸಿಕೆ ನೀಡಬಹುದು

ಕೋವ್ಯಾಕ್ಸಿನ್ ನ ಒಂದು ವೈಲ್ ನಲ್ಲಿ 10 ಎಂಎಲ್ ಲಸಿಕೆ ಇದೆ. ಕೋವಿಶೀಲ್ಡ್ ನ ಒಂದು ವೈಲ್ ನಲ್ಲಿ 5 ಎಂಎಲ್ ಇದೆ. ಕೋವ್ಯಾಕ್ಸಿನ್ ನ ಒಂದು ವೈಲ್ ನಿಂದ 20 ಮಂದಿಗೆ ಲಸಿಕೆ ನೀಡಬಹುದು. ಎರಡು ಲಸಿಕೆಗಳ ನಡುವೆ ಇರುವ ವ್ಯತ್ಯಾಸ ಇಷ್ಟೇ. ರಾಜ್ಯದಲ್ಲಿ ಇವೆರಡೂ ಲಸಿಕೆಗಳನ್ನು ನೀಡಲಾಗುವುದು. ಆದರೆ ಲಸಿಕೆ ಪಡೆಯುವವರು ಯಾವ ಲಸಿಕೆ ಬೇಕೆಂದು ಕೇಳುವಂತಿಲ್ಲ ಎಂದರು.

Recommended Video

Yediyurappa ಮತ್ತು Vijayendra ನ ಮಾಯ ಜಾಲ!!| Oneindia Kannada

English summary
Vaccine will be distributed at 243 centres across the state, Covishield at 237 and Covaxin at 6 places: Health & Medical Education Minister Dr.K.Sudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X