ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ಭಕ್ತರಿಗೆ ದರ್ಶನಕ್ಕೆ ಸಕಲ ಸಿದ್ಧತೆ
ಪವಿತ್ರವಾದ ವೈಕುಂಠ ಏಕಾದಶಿ ಪರ್ವದಿನದ ಪ್ರಯುಕ್ತ ಬೆಂಗಳೂರಿನ ವೈಯಾಲಿಕಾವಲ್ನ 16ನೇ ಕ್ರಾಸ್ನಲ್ಲಿರುವ ಶ್ರೀವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಟಿಟಿಡಿ ಮಾಹಿತಿ ಕೇಂದ್ರದಲ್ಲಿ ಇದೇ ಡಿಸೆಂಬರ್ 30ರಂದು ಭಕ್ತರಿಗೆ ಶ್ರೀವಾರಿ ದರ್ಶನಕ್ಕಾಗಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ. ಅಂದು ಬೆಳಗಿನ ಜಾವ 1.35ರಿಂದ ರಾತ್ರಿ 11.45ರವರೆಗೆ ಭಕ್ತಿರಿಗೆ ನಿರಂತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಈ ಬಗ್ಗೆ ಟಿಟಿಡಿ ಬೆಂಗಳೂರು ಸ್ಥಳೀಯ ಸಲಹಾ ಸಮಿತಿ ಅಧ್ಯಕ್ಷ ಕೆ.ವೀರಾಂಜನೇಯಲು ಅವರು ಮಾಹಿತಿ ಹಂಚಿಕೊಂಡಿದ್ದಾರೆ. "ವೈಕುಂಠ ಏಕಾದಶಿಯಂದು ಭಕ್ತರಿಗೆ ಸುಗಮ ಮತ್ತು ಅನುಕೂಲಕರ ದರ್ಶನ ಕಲ್ಪಿಸುವ ನಿಟ್ಟಿನಲ್ಲಿ ಸಮಿತಿಯು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಅಂದು ಬೆಳಗಿನ ಜಾವ 1.35ರಿಂದ ರಾತ್ರಿ 11.45ರವರೆಗೆ ಶ್ರೀವಾರಿ ದರ್ಶನಕ್ಕೆ ಅವಕಾಶವಿರಲಿದೆ. ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಸರತಿ ಸಾಲಿನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಬಾರಿ 70,000 ಭಕ್ತರು ಇಲ್ಲಿಗೆ ಆಗಮಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಲಡ್ಡು ಮಾರಾಟ
ಈ ಪವಿತ್ರ ದಿನದಂದು ಇಲ್ಲಿಗೆ ಆಗಮಿಸುವ ಭಕ್ತಾದಿಗಳಿಗೆ ನಿರಂತರ ಅನ್ನಪ್ರಸಾದ ವಿನಿಯೋಗವಿರುತ್ತದೆ. ದೇವಸ್ಥಾನದ ಆವರಣದಲ್ಲಿ ಬೆಳಗಿನ ಜಾವ 2 ಗಂಟೆಯಿಂದ ಶ್ರೀವಾರಿ ಲಡ್ಡು ಪ್ರಸಾದ ಮಾರಾಟ ಮಾಡಲಾಗುವುದು. ನಮ್ಮಲ್ಲಿ ದಾಸ್ತಾನು ಇರುವವರೆಗೂ ಲಡ್ಡು ಲಭ್ಯವಿರುತ್ತದೆ. ಭಕ್ತರ ಅನುಕೂಲಕ್ಕಾಗಿ 2026ರ ಟಿಟಿಡಿ ಡೈರಿಗಳು, ಕ್ಯಾಲೆಂಡರ್ಗಳು, ಅಗರಬತ್ತಿ ಮತ್ತು ಇತರೆ ಟಿಟಿಡಿ ಉತ್ಪನ್ನಗಳ ಮಾರಾಟ ಮಳಿಗೆಯನ್ನು ಸಹ ತೆರೆಯಲಾಗುವುದು.
"ತಿರುಮಲದಲ್ಲಿಯೂ ವೈಕುಂಠ ಏಕಾದಶಿಯ ಪ್ರಯುಕ್ತ ಬೃಹತ್ ಮಟ್ಟದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಬಾರಿ ವೈಕುಂಠ ದ್ವಾರದ ಮೂಲಕ ಪ್ರತಿದಿನ ಸುಮಾರು 80,000ಕ್ಕೂ ಹೆಚ್ಚು ಭಕ್ತರಿಗೆ ದರ್ಶನ ಭಾಗ್ಯವನ್ನು ಕಲ್ಪಿಸಲು ಟಿಟಿಡಿ ಆಡಳಿತ ಮಂಡಳಿ ಯೋಜಿಸಿದೆ ಎಂದು ತಿರುಮಲದ ಸಿದ್ಧತೆಗಳ ಕುರಿತು ಟಿಟಿಡಿ ಮಂಡಳಿ ಸದಸ್ಯರಾದ ಎಸ್.ನರೇಶ್ ಕುಮಾರ್ ಹೇಳಿದ್ದಾರೆ. ಸಾಮಾನ್ಯ ಭಕ್ತರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ದರ್ಶನಕ್ಕೆ ಕಾಯುವ ಸಮಯದಲ್ಲಿ ಅನ್ನಪ್ರಸಾದ ಮತ್ತು ಪಾನೀಯಗಳ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಕ್ರಮ ಕೈಗೊಳ್ಳಲಾಗಿದೆ. ಭಕ್ತರ ಸುರಕ್ಷತೆ ಮತ್ತು ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮಗಳು
ಈ ಪವಿತ್ರ ದಿನದಂದು ಬೆಂಗಳೂರಿನ ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್ (ಹೆಚ್ಡಿಪಿಪಿ) ವತಿಯಿಂದ ದಿನವಿಡೀ ದೇವಸ್ಥಾನದ ಆವರಣದಲ್ಲಿ ಭಕ್ತಿ ಸಂಗೀತ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಸಮಸ್ತ ಭಕ್ತಾದಿಗಳು ಈ ವೈಕುಂಠ ಏಕಾದಶಿ ಆಚರಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀವೆಂಕಟೇಶ್ವರ ಸ್ವಾಮಿಯ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕು ಎಂದು ಟಿಟಿಡಿ ಅಧಿಕಾರಿಗಳು ಕೋರಿದ್ದಾರೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications