ಹಗರಣದ ಹಣ ದೆಹಲಿ ತಲುಪಿದ್ದರ ರೂಟ್ ಮ್ಯಾಪ್ ಕೊಟ್ಟ ಆರ್.ಅಶೋಕ್: 4 ಹಂತಗಳಲ್ಲಿ ಹೋರಾಟ
ಬೆಂಗಳೂರು, ಜೂನ್ 06: ಸರ್ಕಾರಿ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಕಾರಣವಾದ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇಡಿ ಮಂತ್ರಿ ಮಂಡಲವೇ ಭಾಗಿಯಾಗಿದೆ. ಸಚಿವ ನಾಗೇಂದ್ರ ಜೊತೆಗೆ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ನಾಲ್ಕು ಹಂತಗಳಲ್ಲಿ ಹೋರಾಟಕ್ಕೆ ಸಜ್ಜಾಗಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಹಾಗೂ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ವಿಧಾನಸೌಧದಿಂದ ರಾಜಭವನವರೆಗೆ ತೆರಳಿ, ರಾಜ್ಯಪಾಲರಿಗೆ ಗುರುವಾರ ದೂರು ಸಲ್ಲಿಸಿದರು.

ಈ ವೇಳೆ ಸುದ್ದಿಗಾರರ ಜೊತೆಗೆ ಮಾತನಾಡಿದ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ನೇರವಾಗಿ ಶಾಮೀಲಾಗಿದ್ದಾರೆ. ಸಚಿವರು ರಾಜೀನಾಮೆ ಕೊಟ್ಟಿದ್ದು, ಮುಖ್ಯಮಂತ್ರಿ ಸಹ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಸಚಿವ ಬಿ.ನಾಗೇಂದ್ರ ಅವರು ಈ ಪ್ರಕರಣದಲ್ಲಿ ಸಣ್ಣ ಆರೋಪಿ. ಇದಕ್ಕೂ ದೊಡ್ಡ ಆರೋಪಿಗಳು ಇದರ ಹಿಂದೆ ಇದ್ದಾರೆ. ಈ ಎಲ್ಲ ಸತ್ಯ ಹೊರಬರಲು ಪ್ರಕರಣವನ್ನು ಸಿಬಿಐಗೆ ನೀಡಬೇಕು. ಸೂಕ್ತ ತನಿಖೆ ನಡೆಸಿ ದೊಡ್ಡ ಆರೋಪಿಗಳನ್ನು ಬಯಲಿಗೆಳೆಯಬೇಕು ಎಂದರು.

ಹಣ ದೆಹಲಿ ತಲುಪಿದ್ದು ಹೇಗೆ?
ಅಕ್ರಮದ ಹಣವನ್ನು ಸಚಿವರೊಬ್ಬರೇ ನುಂಗಿಲ್ಲ. ಇದರಲ್ಲಿ ಇಡೀ ಸಚಿವ ಸಂಪುಟ ಶಾಮೀಲಾಗಿದೆ. ಬೆಂಗಳೂರಿನಿಂದ ಮೊದಲು ಟಕಾಟಕ್ ಹೈದರಾಬಾದ್ ತಲುಪಿದೆ. ಅಲ್ಲಿಂದ ರಾಷ್ಟ್ರ ರಾಜಧಾನಿ ದೆಹಲಿಯ ಕಾಂಗ್ರೆಸ್ ಹೈಕಮಾಂಡ್‌ಗೆ ತಲುಪಿದೆ ಎಂದು ಅವರು ಹಣ ತಲುಪಿದ್ದರ ರೂಟ್ ಮ್ಯಾಪ್ ಮಾಹಿತಿ ನೀಡಿದರು.
ಎಲ್ಲಿ ಹಗರಣವು ತಮ್ಮ ಬುಡಕ್ಕೆ ಬಂದು ಬಿಡುತ್ತದೆ ಎಂಬ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಸಿಬಿಐ ತನಿಖೆ ಮಾಡಿಸಲು ನಿರಾಕರಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕೂಡ ಇದಕ್ಕೆ ಉತ್ತರ ನೀಡಬೇಕು ಎಂದು ಗುಡುಗಿದರು.
14 ಸಲ ಬಜೆಟ್ ಮಂಡಿಸಿದವರ ಮುಂದೆಯೇ ಹಗರಣ
ಬಡವರಿಗೆ ಸೇರಬೇಕಾಗಿದ್ದ ಹಣ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೇಬಿಗೆ ಹೋಗಿದೆ. ಪರಿಶಿಷ್ಟ ಜಾತಿ, ಪಂಗಡದ ಹಣವನ್ನೂ ನುಂಗುತ್ತಾರೆ ಎನ್ನುವುದು ರಾಜ್ಯ ರಾಜಕೀಯದ ದುರಂತ. 14 ಬಾರಿ ಬಜೆಟ್ ಮಂಡಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ. ಈಗ ಅವರ ಕಣ್ಣಿನಡಿಯಲ್ಲೇ ಹಗರಣ ನಡೆದಿದೆ. ಒಂದು ವರ್ಷ ಕಾಂಗ್ರೆಸ್ ಸರ್ಕಾರ ಲೂಟಿ ಗ್ಯಾರಂಟಿಯನ್ನು ನೀಡಿದೆ ಎಂದು ದೂರಿದರು.
ಲೂಟಿಕೋರರ ಪಾರ್ಟಿ ಕಾಂಗ್ರೆಸ್ ನುಡಿದಂತೆ ನಡೆಯುತ್ತೇವೆ ಎಂದು ಹಣ ಕೊಳ್ಳೆ ಹೊಡೆದಿದ್ದಾರೆ. ಯಾವುದೇ ಪ್ರಕರಣದಲ್ಲಿ ಒಂದೇ ಬಾರಿಗೆ ಎರಡು ಸಂಸ್ಥೆಯಿಂದ ತನಿಖೆ ನಡೆಸಲು ಸಾಧ್ಯವಿಲ್ಲ. ಆದರೆ ಸಿಬಿಐ ಮಾಡಬೇಕಾದ ತನಿಖೆಯನ್ನು ಎಸ್‌ಐಟಿಗೆ ವಹಿಸಲಾಗಿದೆ. ಈ ಎಟಿಎಂ ಸರ್ಕಾರ ಟಕಾಟಕ್ ಎಂದು ಹಣ ವರ್ಗಾವಣೆ ಮಾಡಿಕೊಂಡಿದೆ ಎಂದು ವಿವರಿಸಿದರು.
ಇನ್ನೂ ಯಾವ ನಿಗಮಗಳಲ್ಲಿ ಎಷ್ಟು ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ? ಎಷ್ಟು ಬೇನಾಮಿ ಖಾತೆಗಳಿಗೆ ಹಣ ಹೋಗಿದೆ ಎಂದು ಪತ್ತೆಯಾಗಬೇಕು. ಸಚಿವರ ಆಪ್ತ ಸಹಾಯಕ ಇದರಲ್ಲಿ ಶಾಮೀಲಾಗಿದ್ದಾನೆ ಎಂದರೆ ಸಚಿವರು ಕೂಡ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿಯಿಂದ ನಾಲ್ಕು ಹಂತದಲ್ಲಿ ಹೋರಾಟ
ರಾಜ್ಯಪಾಲರಿಗೆ ಈ ಕುರಿತು ವಿವರ ನೀಡಿದ್ದೇವೆ. ಬಿಜೆಪಿ ನಾಲ್ಕು ಹಂತಗಳಲ್ಲಿ ಇದರ ವಿರುದ್ಧ ಹೋರಾಟ ಮಾಡಲಿದೆ. ಸಚಿವರು ಹಾಗೂ ಮುಖ್ಯಮಂತ್ರಿಯವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದೇವೆ. ಈ ಸರ್ಕಾರವನ್ನು ವಜಾ ಮಾಡಬೇಕು ಎಂದು ಕೂಡ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ ಎಂದು ತಿಳಿಸಿದರು.
ಈವರೆಗೆ ಸಚಿವರ ಪರ ನಿಂತಿದ್ದ ಸಿಎಂ ಸಿದ್ದರಾಮಯ್ಯನವರಷ್ಟು ಭಂಡ ಯಾರೂ ಇಲ್ಲ. ಈ ಭ್ರಷ್ಟಾಚಾರಕ್ಕೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಸಿದರು.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ












Click it and Unblock the Notifications