ವಾಲ್ಮೀಕಿ ಜಾತ್ರೆಯಲ್ಲಿ ಅಭಿಮಾನಿಗಳ ದಾಂಧಲೆ: ಆಹ್ವಾನವಿರಲಿಲ್ಲ ಎಂದ ಕಿಚ್ಚ ಸುದೀಪ್, ಆಹ್ವಾನ ನೀಡಿದ್ದ ಪೋಟೋ ವೈರಲ್
ತಮಗೆ ಕಾರ್ಯಕ್ರಮಕ್ಕೆ ಆಹ್ವಾನ ಇರಲಿಲ್ಲ. ಒಪ್ಪಿಕೊಂಡ ಕಾರ್ಯಕ್ರಮವನ್ನು ಯಾವಾಗಲೂ ತಪ್ಪಿಸಿಲ್ಲ ಎಂದು ಸುದೀಪ್ ಹೇಳಿದ್ದಾರೆ
ಬೆಂಗಳೂರು, ಫೆಬ್ರವರಿ. 10: ದಾವಣಗೆರೆಯಲ್ಲಿ ನಡೆದ ವಾಲ್ಮೀಕಿ ಜಾತ್ರಾ ಕಾರ್ಯಕ್ರಮಕ್ಕೆ ನಟ ಕಿಚ್ಚ ಸುದೀಪ್ ಬರುತ್ತಾರೆ ಎಂದು ಕಾಯುತ್ತಿದ್ದ ಅಭಿಮಾನಿಗಳು ಆಕ್ರೋಶದಿಂದ ವರ್ತಿಸಿರುವ ಘಟನೆ ಬೆನ್ನಲ್ಲೇ ಹಲವು ಬೆಳವಣಿಗೆಗಳು ನಡೆದಿವೆ.
ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಎರಡು ದಿನಗಳ ಕಾಲ ನಡೆದ ಗುರುಪೀಠದ ವಾಕ್ಮೀಕಿ ಜಾತ್ರೆಗೆ ಕಿಚ್ಚ ಸುದೀಪ್ ಗೈರಾಗಿದ್ದ ವಿಚಾರ ಸಾಕಷ್ಟು ಚರ್ಚೆ ಆಗಿತ್ತು. ನಟ ಸುದೀಪ್ ಕಾರ್ಯಕ್ರಮಕ್ಕೆ ಬರದ ಕಾರಣ ಅಭಿಮಾನಿಗಳು ಅಲ್ಲಿರುವ ಕುರ್ಚಿಗಳನ್ನು ಒಡೆದು ಹಾಕಿದ್ದರು. ಗಲಾಟೆಗೆ ವಾಲ್ಮೀಕಿ ಪೀಠಾಧಿಪತಿ ಪ್ರಸನ್ನನಾನಂದ ಸ್ವಾಮೀಜಿ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು.
ಸ್ನೇಹಿತರಿಗೆ ನಲ್ಮೆಯ ನಮಸ್ಕಾರ -ದಾವಣಗೆರೆಯ ಜಿಲ್ಲೆಯ ರಾಜನಹಳ್ಳಿಯ ಘಟನೆ ತಿಳಿದು ಬೇಸರವಾಯಿತು.ನನಗೆ ಕಾರ್ಯಕ್ರಮದ ಆಯೋಜಕರಿಂದ ಆಹ್ವಾನವಿರಲಿಲ್ಲ.ಕಾರ್ಯಕ್ರಮದ ಕುರಿತು ಮಾಹಿತಿಯೂ ಇರಲಿಲ್ಲ.ನಾನು ಒಪ್ಪಿಕೊಂಡ ಕಾರ್ಯಕ್ರಮಗಳನ್ನು ತಪ್ಪಿಸಿದವನಲ್ಲ.
— Kichcha Sudeepa (@KicchaSudeep) February 9, 2023
Cont'd...
ಇದರ ಬೆನ್ನಲ್ಲೆ ಕಾರ್ಯಕ್ರಮಕ್ಕೆ ಗೈರಾಗಿದ್ದ ಬಗ್ಗೆ ಸ್ಪಷ್ಟನೆ ನೀಡಿರುವ ಸುದೀಪ್ ತಮಗೆ ಕಾರ್ಯಕ್ರಮಕ್ಕೆ ಆಹ್ವಾನ ಇರಲಿಲ್ಲ. ಒಪ್ಪಿಕೊಂಡ ಕಾರ್ಯಕ್ರಮವನ್ನು ಯಾವಾಗಲೂ ತಪ್ಪಿಸಿಲ್ಲ ಎಂದು ಹೇಳಿದ್ದಾರೆ. ಇದು ಇನ್ನೊಂದು ರೀತಿಯ ಬೆಳವಣಿಗೆಗೆ ಕಾರಣವಾಗಿದೆ.

"ಸ್ನೇಹಿತರಿಗೆ ನಲ್ಮೆಯ ನಮಸ್ಕಾರ, ದಾವಣಗೆರೆಯ ಜಿಲ್ಲೆಯ ರಾಜನಹಳ್ಳಿಯ ಘಟನೆ ತಿಳಿದು ಬೇಸರವಾಯಿತು.ನನಗೆ ಕಾರ್ಯಕ್ರಮದ ಆಯೋಜಕರಿಂದ ಆಹ್ವಾನವಿರಲಿಲ್ಲ.ಕಾರ್ಯಕ್ರಮದ ಕುರಿತು ಮಾಹಿತಿಯೂ ಇರಲಿಲ್ಲ. ನಾನು ಒಪ್ಪಿಕೊಂಡ ಕಾರ್ಯಕ್ರಮಗಳನ್ನು ತಪ್ಪಿಸಿದವನಲ್ಲ. ಆದರೂ ಇಂದು ನಡೆದ ಘಟನೆಯ ಬಗ್ಗೆ ತೀವ್ರ ವಿಷಾದವಿದೆ. ನಿಮ್ಮ ಜೊತೆ ಬೆರೆಯಲು ನನಗೂ ಸದಾ ಆತೀವ ಆಸೆ ..ಮುಂದೆ ಖಂಡಿತ ಬರುವೆ. ಪ್ರೀತಿ ಇರಲಿ. ಶಾಂತ ರೀತಿಯಿಂದ ವರ್ತಿಸಿ ... ಪ್ರೀತಿಯೊಂದಿಗೆ ನಿಮ್ಮ ಕಿಚ್ಚ.... " ಎಂದು ಟ್ವೀಟ್ ಮಾಡಿದ್ದಾರೆ.
ಇದಾದ ಬೆನ್ನಲ್ಲೇ ಪ್ರಸನ್ನಾನಂದಪುರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ನಟ ಸುದೀಪ್ ಅವರಿಗೆ ಆಹ್ವಾನ ನೀಡಲು ಹೋಗಿರುವ ಫೋಟೋಗಳು ವೈರಲ್ ಆಗುತ್ತಿವೆ.
ಸಾಮಾಜಿಕ ಮಾಧ್ಯಮಗಳಲ್ಲಿ ಕಿಚ್ಚ ಸುದೀಪ್ ಅವರ ಟ್ವೀಟ್‌ಗೆ ಈ ಫೋಟೋಗಳನ್ನು ಸೇರಿಸಿ ರೀಟ್ವೀಟ್ ಮಾಡಲಾಗುತ್ತಿದೆ.

"2/2/23 ಪ್ರಸನ್ನನಾಂದ ಮಹಾಸ್ವಾಮಿಜೀಯವರು ಮತ್ತು 2023 ರ ವಾಲ್ಮೀಕಿ ಜಾತ್ರೆಯ ಅಧ್ಯಕ್ಷರು ಹಾಗೂ ಜಗಳೂರಿನ ಶಾಸಕರಾದ ಎಸ್ ವಿ.ರಾಮಚಂದ್ರಪ್ಪ ಅವರು ಕಿಚ್ಚ ಸುದೀಪ್ ಅವರ ಮನೆಗೆ ಭೇಟಿ ನೀಡಿ ಸುದೀಪ್ ರವರು ಬೆಂಗಳೂರಿನಲ್ಲಿ ಇಲ್ಲದ ಕಾರಣ ಅವರ ತಂದೆಯವರಾದ ಸಂಜೀವ್ ಸರ್ ಅವರನ್ನ ಭೇಟಿ ಮಾಡಿ ಸುದೀಪ್ ಅವರನ್ನ ಕರೆದುಕೊಂಡು ಕಾರ್ಯಕ್ರಮಕ್ಕೆ ಬನ್ನಿ ಎಂದು ಆಹ್ವಾನಿಸಲಾಗಿತ್ತು" ಎಂದು ಟಿಪ್ಪಣಿ ಬರೆಯಲಾಗಿದೆ.
2/2/23ಪ್ರಸನ್ನನಾಂದ ಮಹಾಸ್ವಾಮಿಜೀಯವರು ಹಾಗೂ 2023 ರ ವಾಲ್ಮೀಕಿ ಜಾತ್ರೆಯ ಅದ್ಯಕ್ಷರು ಹಾಗೂ ಜಗಳೂರಿನ ಶಾಸಕರಾದ ಎಸ್ ವಿ.ರಾಮಚಂದ್ರಪ್ಪ .ಕಿಚ್ಚ ಸುದೀಪ್ ರವರ ಮನೆಗೆ ಭೇಟಿ ನೀಡಿ ಸುದೀಪ್ ರವರು ಬೆಂಗಳೂರಿನಲ್ಲಿ ಇಲ್ಲದ ಕಾರಣ ತಂದೆಯವರಾದ ಸಂಜೀವ್ ಸರ್ ರವರನ್ನ ಭೇಟಿ ಮಾಡಿ ಸುದೀಪ್ ನವರನ್ನ ಕರೆದುಕೊಂಡು ಬನ್ನಿ ಎಂದು ಆಹ್ವಾನಿಸಲಾಗಿತ್ತು. pic.twitter.com/AAJjXmuXbS
— Ranganath KM (@Ranganathkm94) February 9, 2023
ಮನೆಗೆ ಹೋಗಿ ಆಹ್ವಾನ ನೀಡಿದರೂ, ಕಾರ್ಯಕ್ರಮ ಆಯೋಜನಕರು ಆಹ್ವಾನ ನೀಡಿಲ್ಲ ಎಂದು ಹೇಳುತ್ತಿರುವುದೇಕೆ ಎಂದು ಹಲವರು ಪ್ರಶ್ನಿಸಿದ್ದಾರೆ.
ಇನ್ನು, ಕಿಚ್ಚ ಸುದೀಪ್ ಹರಿಹರ ತಾಲೂಕಿನ ರಾಜನಹಳ್ಳಿಗೆ ಬರುತ್ತಾರೆ ಎಂಬ ವಿಚಾರ ತಿಳಿದು ಕಾರ್ಯಕ್ರಮಕ್ಕೆ ಆಗಮಿಸಿದ್ದ ಅಭಿಮಾನಿಗಳು ಬೆಳಗ್ಗೆಯಿಂದಲೂ ಕಿಚ್ಚ ಕಿಚ್ಚ ಎಂದು ಘೋಷಣೆ ಹಾಕುತ್ತಾ ಕಾಯುತ್ತಿದ್ದರು. ಆದರೆ, ಅವರು ಬಂದಿರಲಿಲ್ಲ. ಬಳಿಕ ಬೇಸರಗೊಂಡ ಅಭಿಮಾನಿಗಳು ವೇದಿಕೆ ಮುಂಭಾಗದ ಕುರ್ಚಿಗಳನ್ನು ಮುರಿದು, ಬ್ಯಾರಿಕೇಡ್‌ಗಳನ್ನು ನೆಲಕ್ಕುರುಳಿಸಿ ಆಕ್ರೋಶ ವ್ಯಕ್ತಪಡಿಸಿದ್ದರು.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ












Click it and Unblock the Notifications