ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಿಯುಸಿ: ಮೌಲ್ಯಮಾಪನ ಆರಂಭವಾಯ್ತು, ಫಲಿತಾಂಶ ಯಾವಾಗ?

By Sachhidananda Acharya
|
Google Oneindia Kannada News

ಬೆಂಗಳೂರು, ಏಪ್ರಿಲ್ 5: ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಿದೆ.

ಕರ್ನಾಟಕದಾದ್ಯಂತ 48 ಕೇಂದ್ರಗಳಲ್ಲಿ ಏಕಕಾಲದಲ್ಲಿ ಸುಮಾರು 20,000 ಉಪನ್ಯಾಸಕರು ಮೌಲ್ಯಮಾಪನ ನಡೆಸುತ್ತಿದ್ದಾರೆ. ಮೂಲಗಳ ಪ್ರಕಾರ ಏಪ್ರಿಲ್ 16ರ ಒಳಗೆ ಮೌಲ್ಯಮಾಪನ ಪೂರ್ಣಗೊಳಿಸಲು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ.[ಮೌಲ್ಯಮಾಪನ ಬಹಿಷ್ಕರಿಸುವ ಉಪನ್ಯಾಸಕರಿಗೆ ಜೈಲು ಶಿಕ್ಷೆ!]

Valuation started, when was the second PUC result?

ಈ ಬಾರಿ ಭಿಗಿ ಭದ್ರತೆಯಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆದಿದ್ದು ಮೌಲ್ಯಮಾಪನವನ್ನೂ ಬೇಗ ಪೂರ್ಣಗೊಳಿಸಿ ಫಲಿತಾಂಶ ಪ್ರಕಟಿಸುವ ಇರಾದೆಯಲ್ಲಿ ಶಿಕ್ಷಣ ಇಲಾಖೆ ಇದೆ. ಮೌಲ್ಯಮಾಪನದಲ್ಲಿ ಪಾರದರ್ಶಕತೆ ತರಲು ಎಲ್ಲಾ ಕೇಂದ್ರಗಳಲ್ಲೂ ಸಿಸಿಟಿವಿ ಅಳವಡಿಸಲಾಗಿದೆ. ಇನ್ನು ಸ್ಟ್ರಾಂಗ್ ರೂಂಗಳಿಗೂ ಭಾರೀ ಭದ್ರತೆ ಒದಗಿಸಲಾಗಿದ್ದು 24*7 ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು ಇದೆ.

ಈಗಾಗಲೇ ಮೇ 1, ಮೇ 10 ಕ್ಕೂ ಮೊದಲು ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆ ಇದೆ ಎನ್ನುವ ಸುದ್ದಿಗಳೂ ಬರುತ್ತಿವೆ. ಈ ಬಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಹೇಳುವುದೇ ಬೇರೆ.

"ಫಲಿತಾಂಶ ಪ್ರಕಟಗೊಳ್ಳುವ ದಿನಾಂಕವನ್ನು ಇನ್ನೂ ನಿರ್ಧರಿಸಿಲ್ಲ. ಆದಷ್ಟು ಬೇಗ ಮೌಲ್ಯಮಾಪನ ಮುಗಿಸುವ ಗುರಿ ಹಾಕಿಕೊಂಡಿದ್ದೇವೆ. ಏನಿದ್ದರೂ ಸಿಇಟಿ ಪರೀಕ್ಷೆ ಮುಗಿದ ನಂತರವೇ ಫಲಿತಾಂಶ ಪ್ರಕಟಗೊಳ್ಳಲಿದೆ," ಎಂದು ತಿಳಿಸಿದ್ದಾರೆ.

English summary
Valuation of second PUC answer paper started in 48 centers across the state of Karnataka. Pre University Education Department planned to announce the result only after CET exams.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X