ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವನಮಹೋತ್ಸವ: ಪ್ರತಿಯೊಬ್ಬರು 5 ಗಿಡ ನೆಡಲು ಮುಖ್ಯಮಂತ್ರಿಗಳ ಕರೆ

|
Google Oneindia Kannada News

ಬೆಂಗಳೂರು, ಜು.1: ಕರ್ನಾಟಕ ರಾಜ್ಯದಲ್ಲಿ ಜುಲೈ 1 ರಿಂದ 7ರವರೆಗೆ ವನಮಹೋತ್ಸವ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಮಾಚೋಹಳ್ಳಿ ಟ್ರೀ ಪಾರ್ಕ್ ಉದ್ಘಾಟಿಸುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು. ವನಮಹೋತ್ಸವ ಕಾರ್ಯಕ್ರಮದ ಮೂಲಕ ಅರಣ್ಯಗಳನ್ನು ಬೆಳೆಸುವುದು ಮತ್ತು ಮುಂದಿನ ಪೀಳಿಗೆ ಗೆ ಅವುಗಳನ್ನು ಸಂರಕ್ಷಿಸುವುದು ಉದ್ದೇಶವಾಗಿದೆ.

"ನಾಳಿನ ಹಸಿರಿಗೆ ಸಸಿಗಳೇ ಉಸಿರು ಎಂಬ ಘೋಷವಾಕ್ಯದಡಿಯಲ್ಲಿ ವನಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಸಾರ್ವಜನಿಕರು ಭಾಗವಹಿಸುವ ಮೂಲಕ ತಮ್ಮ ಸಹಕಾರವನ್ನು ನೀಡುವಂತೆ" ಬಸವರಾಜ ಬೊಮ್ಮಾಯಿ ಕರೆ ನೀಡಿದರು.

ಬೆಂಗಳೂರಲ್ಲಿ ತಾಂತ್ರಿಕ ವ್ಯವಸ್ಥೆ ಬಲಪಡಿಸಿ; ಬೊಮ್ಮಾಯಿ ಕರೆಬೆಂಗಳೂರಲ್ಲಿ ತಾಂತ್ರಿಕ ವ್ಯವಸ್ಥೆ ಬಲಪಡಿಸಿ; ಬೊಮ್ಮಾಯಿ ಕರೆ

"ಪ್ರತಿಯೊಬ್ಬರೂ ಐದು ಗಿಡಗಳನ್ನು ಬೆಳೆಸಬೇಕು ಎಂದು ರಾಜ್ಯದ ಜನತೆಗೆ ಕರೆ ನೀಡಿ, ಜನರ ಸಹಭಾಗಿತ್ವದಿಂದ ಮಾತ್ರ ಅರಣ್ಯೀಕರಣದ ಕಾರ್ಯಕ್ರಮಗಳು ಯಶಸ್ವಿಯಾಗಲು ಸಾಧ್ಯ" ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬೆಂಗಳೂರು ವಾಹನ ದಟ್ಟಣೆ ನಿವಾರಿಸಲು ಸ್ಯಾಟ್‌ಲೈಟ್ ಟೌನ್ ನಿರ್ಮಾಣ: ಬೊಮ್ಮಾಯಿ ಬೆಂಗಳೂರು ವಾಹನ ದಟ್ಟಣೆ ನಿವಾರಿಸಲು ಸ್ಯಾಟ್‌ಲೈಟ್ ಟೌನ್ ನಿರ್ಮಾಣ: ಬೊಮ್ಮಾಯಿ

ನಿರೀಕ್ಷೆಗೂ ಮೀರಿ ಬೆಂಗಳೂರು ಬೆಳವಣಿಗೆ

ನಿರೀಕ್ಷೆಗೂ ಮೀರಿ ಬೆಂಗಳೂರು ಬೆಳವಣಿಗೆ

ಶುಕ್ರವಾರ ದಾಸನಪುರ ಹೋಬಳಿಯ ಮಾಚೋಹಳ್ಳಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಆಯೋಜಿಸಿದ್ದ ಮಾಚೋಹಳ್ಳಿ ವೃಕ್ಷೋಧ್ಯಾನ ಕಾರ್ಯಕ್ರಮ ಮತ್ತು ವನಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ಮುಖ್ಯಮಂತ್ರಿಗಳು, "ಬೆಂಗಳೂರು ನಗರ ನಿರೀಕ್ಷೆಗೂ ಮೀರಿ ಬೆಳೆಯುತ್ತಿದೆ. ಇಂದಿನ ಎಲ್ಲ ಬಡಾವಣೆಗಳಲ್ಲಿ ಉದ್ಯಾನಗಳು, ಗಿಡಮರಗಳಿವೆ. ಬೆಂಗಳೂರು ಉದ್ಯಾನನಗರ ಎಂದು ಕರೆಯಲ್ಪಡುತ್ತದೆ. ಈಗ ನಾಗರಿಕತೆ ಹೆಚ್ಚಾಗಿದ್ದು, ಉದ್ಯಮಗಳು ಹೆಚ್ಚಾಗಿದೆ. ಅರಣ್ಯ ಇಲಾಖೆ ವತಿಯಿಂದ ಬೆಂಗಳೂರಿನ ಸುತ್ತಲೂ ಅರಣ್ಯ ಉದ್ಯಾನವನ ಬೆಳೆಸಲು ವಿಶೇಷ ಕಾರ್ಯಕ್ರಮವನ್ನು ರೂಪಿಸಬೇಕೆಂದು" ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಪತ್ತು ತಡೆಯಲು ಅರಣ್ಯೀಕರಣ ಬಹಳ ಮುಖ್ಯ

ವಿಪತ್ತು ತಡೆಯಲು ಅರಣ್ಯೀಕರಣ ಬಹಳ ಮುಖ್ಯ

"ಪರಿಸರ ಬಹಳ ಮುಖ್ಯ. ಗಿಡಮರಗಳಿಂದ ಶುದ್ಧ ಗಾಳಿ ಸಿಗುತ್ತದೆ. ಗಿಡಮರಗಳಿಂದ ಶುದ್ಧವಾದ ಆಮ್ಲಜನಕ ದೊರೆಯುತ್ತದೆ. ಪರಿಸರದಲ್ಲಿ ಕಾರ್ಬನ್ ಅಂಶ ಹೆಚ್ಚಾದರೆ ಮನುಷ್ಯನ ಆರೋಗ್ಯಕ್ಕೆ ಹಾನಿಕಾರಕವಾಗಿರುತ್ತದೆ. ಹವಾಮಾನ ಬದಲಾವಣೆ ಆಗುತ್ತಿದೆ. ಕಳೆದ ವರ್ಷ ವಿಶ್ವದ ತಾಪಮಾನ ಶೇ. 1 ರಷ್ಟು ಹೆಚ್ಚಾಗಿದ್ದು, ಹಿಮಬಂಡೆಗಳು ಕರುಗುತ್ತಿವೆ. ಇದರಿಂದ ವಾತಾವರಣದಲ್ಲಿನ ಉಷ್ಣಾಂಶ ಹೆಚ್ಚಾಗಿ ಜನರಿಗೆ ತೊಂದರೆಯಾಗುವ ಜೊತೆಗೆ ಪ್ರವಾಹ ಭೀತಿಯೂ ಎದುರಾಗುತ್ತದೆ. ಈ ಸಮಸ್ಯೆಗಳನ್ನು ತಡೆಗಟ್ಟಲು ಅರಣ್ಯೀಕರಣ ಬಹಳ ಮುಖ್ಯ. ಈ ಸಾಲಿನ ಆಯವ್ಯಯದಲ್ಲಿ ಹಸಿರು ಬಜೆಟ್ ನ್ನು ರೂಪಿಸಿ 100 ಕೋಟಿ ರೂ.ಗಳನ್ನು ಮೀಸಲಿರಿಸಿದೆ. ಪರಿಸರ ಹಾನಿಯನ್ನು ಸರಿದೂಗಿಸಲು ಈಗಾಗಲೇ ಸೂಚನೆ ನೀಡಲಾಗಿದ್ದು, ಕ್ರಿಯಾ ಯೋಜನೆ ಸಿದ್ಧವಾಗುತ್ತಿದೆ. ಪ್ರತಿ ವರ್ಷವೂ ಪರಿಸರದ ಹಾನಿಯಿಂದಾಗುವ ಕೊರತೆಯನ್ನು ನೀಗಿಸುವ ಯೋಜನೆಗಳನ್ನು ರೂಪಿಸಲು ಅರಣ್ಯ ಇಲಾಖೆಗೆ 100 ಕೋಟಿ ರೂ. ಗಳನ್ನು ಒದಗಿಸಲಾಗುವುದು" ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಗಂಧದ ಮರಗಳ ನಿರ್ವಹಣೆಗೆ ಅನುಕೂಲ

ಗಂಧದ ಮರಗಳ ನಿರ್ವಹಣೆಗೆ ಅನುಕೂಲ

ಗಂಧದ ಮರಗಳು ಮನೆಯಲ್ಲಿದ್ದರೆ ಅದನ್ನು ನಿಭಾಯಿಸುವುದು ಕಷ್ಟವಾಗಿದ್ದು, ಈ ನಿಟ್ಟಿನಲ್ಲಿ ಇರುವ ನಿಯಮಗಳನ್ನು ಸರಳೀಕರಿಸಿ ಗಂಧ ಮರಗಳ ನಿರ್ವಹಣೆಗೆ ಈ ವರ್ಷದ ಆಯವ್ಯಯದಲ್ಲಿ ಅನುಕೂಲ ಕಲ್ಪಿಸಲಾಗಿದೆ. ಕನ್ನಡ ನಾಡನ್ನು ಗಂಧದ ನಾಡು ಎಂಬ ಖ್ಯಾತಿ ಇದೆ. ಗಂಧದ ಉತ್ಪನ್ನಗಳು ವಿದೇಶಗಳಿಗೆ ರಫ್ತಾಗುತ್ತದೆ. ಆದ್ದರಿಂದ ಗಂಧದ ಮರಗಳನ್ನು ಹೆಚ್ಚಾಗಿ ಬೆಳೆಸಿ, ರಕ್ಷಣೆ ನೀಡಲು ಈ ಯೋಜನೆಗಳನ್ನು ರೂಪಿಸಲಾಗಿದೆ. ಬೀಜೋತ್ಸವ ಕಾರ್ಯಕ್ರಮವನ್ನು ರೂಪಿಸಿ ಎರಡೂವರೆ ಕೋಟಿ ಬೀಜಗಳನ್ನು ಈ ವರ್ಷ ಬಿತ್ತಲಾಗುತ್ತಿದೆ. ಅರಣ್ಯವೆಂದು ಗುರುತಿಸಲ್ಪಡುವ ಪ್ರದೇಶಗಳಲ್ಲಿ ಬೀಜಗಳನ್ನು ಬಿತ್ತುವ ಹಾಗೂ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಮಾಡಲಾಗುವುದು ಎಂದರು.

ಮಾನವನ ನಡುವೆ ಅವಿನಾಭಾವ ಸಂಬಂಧ

ಮಾನವನ ನಡುವೆ ಅವಿನಾಭಾವ ಸಂಬಂಧ

ಪರಿಸರಕ್ಕೆ, ಅರಣ್ಯೀಕರಣಕ್ಕೆ ಹಾಗೂ ಟ್ರೀಟಾಪ್ ಗಳನ್ನು ಹೆಚ್ಚಿಸಲು ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇಂದು ಶಾಲಾ ಮಕ್ಕಳು, ಹಿರಿಯರಿಗೆ ಸಸಿಗಳನ್ನು ನೀಡಲಾಗಿದೆ. ಹಳೇ ಬೇರು , ಹೊಸ ಚಿಗುರು ಒಂದಾದಾಗ ಮಾತ್ರ ಅರಣ್ಯೀಕರಣ ಯಶಸ್ವಿಯಾಗುತ್ತದೆ. ಮಕ್ಕಳು ನೆಡುವ ಗಿಡಗಳಿಗೆ ಒಂದು ಹೆಸರು ನೀಡಬೇಕು. ನಿಮ್ಮ ಪ್ರೀತಿಪಾತ್ರರ ಹೆಸರನ್ನು ನೀಡಿ, ಆಗ ಆ ಗಿಡದೊಂದಿಗೆ ನಿಮ್ಮ ಬಾಂಧವ್ಯ ಹೆಚ್ಚುತ್ತದೆ. ಇದನ್ನು ಎಲ್ಲರೂ ಮಾಡಬೇಕು. ಗಿಡಮರಗಳಿಗೆ ಹಾಗೂ ಮಾನವನ ನಡುವೆ ಅವಿನಾಭಾವ ಸಂಬಂಧವಿದೆ. ಗಿಡಮರಗಳು ಮಾನವನ ಜೀವನದ ಆಧಾರವಾಗಿದ್ದು, ಅಮೂಲ್ಯ ಕೊಡುಗೆಯನ್ನು ನೀಡುತ್ತದೆ. ಮಕ್ಕಳಲ್ಲಿ ಗಿಡಮರಗಳನ್ನು ಆರೈಕೆಯಲ್ಲಿ ಆಸಕ್ತಿಯನ್ನು ಬೆಳೆಸಲು ಸರ್ಕಾರದೊಂದಿಗೆ ಸಾರ್ವಜನಿಕರು, ಸಂಘಸಂಸ್ಥೆಗಳೂ ಕೈಜೋಡಿಸಬೇಕು. ಪ್ರತಿ ಶಾಲಾ ಕಾಲೇಜುಗಳಲ್ಲಿ, ಸಾರ್ವಜನಿಕ ಪ್ರದೇಶಗಳಲ್ಲಿ ಗಿಡಗಳನ್ನು ನೆಡಬೇಕು ಎಂದರು.

ನೂರು ಎಕರೆ ಪ್ರದೇಶದಲ್ಲಿ ಅರಣ್ಯೀಕರಣ

ನೂರು ಎಕರೆ ಪ್ರದೇಶದಲ್ಲಿ ಅರಣ್ಯೀಕರಣ

ಸ್ವಚ್ಛ ಭಾರತ ಕರೆಯನ್ನು ಪ್ರಧಾನಿ ಮೋದಿಯವರು ನೀಡಿದ್ದಾರೆ. ಸ್ವಚ್ಛ ಭಾರತದ ಜೊತೆಗೆ ಹಸಿರು ಭಾರತವನ್ನೂ ನಿರ್ಮಿಸುವ ಪ್ರಯತ್ನ ಎಲ್ಲರೂ ಸಂಕಲ್ಪ ಮಾಡಬೇಕೆಂದು ತಿಳಿಸಿದರು. ಮಾಚೋಹಳ್ಳಿಯ ಟ್ರೀ ಪಾರ್ಕ್ ನ್ನು ಅಚ್ಚುಕಟ್ಟಾಗಿ ನಿರ್ಮಿಸಿದ್ದು, ಹೆಚ್ಚಿನ ಸಾರ್ವಜನಿಕರು ಇಲ್ಲಿಗೆ ಬರುವಂತೆ ಪ್ರವಾಸಿ ತಾಣವನ್ನಾಗಿ ಮಾಡಬೇಕು. ಪ್ರತಿಯೊಂದು ಕ್ಷೇತ್ರದಲ್ಲಿ ಕನಿಷ್ಟ ನೂರು ಎಕರೆ ಪ್ರದೇಶದಲ್ಲಿ ಅರಣ್ಯೀಕರಣ ಮಾಡುವ ಕೆಲಸವನ್ನು ಮಾಡಬೇಕು. ರಾಜ್ಯದದಲ್ಲಿರುವ ಶೇ. 21 ರಷ್ಟಿರುವ ಅರಣ್ಯ ಪ್ರದೇಶವನ್ನು ಶೇ. 30 ಕ್ಕೆ ಏರಿಸಬೇಕು. ಈ ದಿಸೆಯಲ್ಲಿ ಅರಣ್ಯ ಇಲಾಖೆಗೆ ಎಲ್ಲ ಸಹಕಾರವನ್ನು ನೀಡಲಾಗುವುದು ಎಂದು ತಿಳಿಸಿದರು.

Recommended Video

ISRO ದಿಂದ 3 ಉಪಗ್ರಹ ಯಶಸ್ವಿ ಉಡಾವಣೆ? ಇದರ ಪ್ರಯೋಜನ ಏನು ಗೊತ್ತಾ? | *India | OneIndia Kannada

English summary
Karnataka, Chief Minister Basavaraja Bommai kicked off the Vanamahotsav by inaugurating the Macohalli Tree Park. Vanamahotsav to be held from July 1 to 7 in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X