Vande Bharat Express: ಬೆಂಗಳೂರು- ಧಾರವಾಡ ನಡುವೆ ಪ್ರಾಯೋಗಿಕ ಚಾಲನೆ ಶೀಘ್ರ- ಸಮಯ, ನಿಲುಗಡೆ, ವಿವರ ತಿಳಿಯಿರಿ
ಬೆಂಗಳೂರು, ಜೂನ್ 16: ಕರ್ನಾಟಕದಲ್ಲಿ ಎರಡನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಶೀಘ್ರದಲ್ಲೇ ಪ್ರಾರಂಭವಾಗುವ ನಿರೀಕ್ಷೆಯಿದೆ. ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡ ಹಾಗೂ ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಸೆಮಿ ಹೈಸ್ಪೀಡ್ ರೈಲು ಗುರುವಾರ ಸಂಜೆ ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿಯಿಂದ ಬೆಂಗಳೂರಿಗೆ ಆಗಮಿಸಿತು.
ನೈಋತ್ಯ ರೈಲ್ವೆ ಮೂಲಗಳ ಪ್ರಕಾರ, ಎಂಟು ಬೋಗಿಗಳ ಹೊಸ ರೈಲಿನ ಪ್ರಾಯೋಗಿಕ ಚಾಲನೆಯು 489-ಕಿಮೀ ಮಾರ್ಗದಲ್ಲಿ ಪ್ರಾರಂಭವಾಗುತ್ತದೆ, ಇದು ಬೆಂಗಳೂರನ್ನು ಉತ್ತರ ಕರ್ನಾಟಕದೊಂದಿಗೆ ಸಂಪರ್ಕಿಸುತ್ತದೆ.
ಕಳೆದ ವರ್ಷ ನವೆಂಬರ್‌ನಲ್ಲಿ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಚಾಲನೆ ನೀಡಲಾಯಿತು.
ಪ್ರಧಾನಿ ಮೋದಿ ಚಾಲನೆ ನೀಡಿದ ನಂತರ ಬೆಂಗಳೂರು- ಧಾರವಾಡ ರೈಲಿನ ವಾಣಿಜ್ಯ ಕಾರ್ಯಾಚರಣೆಗಳು ಜೂನ್ 26 ರಂದು ಪ್ರಾರಂಭವಾಗುವ ಸಾಧ್ಯತೆಯಿದೆ.
ಸಮಯ: ವಂದೇ ಭಾರತ್ ರೈಲು ಗಂಟೆಗೆ 70 ಕಿಮೀ ವೇಗದಲ್ಲಿ ಚಲಿಸುತ್ತದೆ. ಬೆಂಗಳೂರಿನಿಂದ ಬೆಳಗ್ಗೆ 5.45ಕ್ಕೆ ಹೊರಟು ಮಧ್ಯಾಹ್ನ 12.40ಕ್ಕೆ ಧಾರವಾಡ ತಲುಪಲಿದೆ. ಹಿಂದಿರುಗುವ ದಿಕ್ಕಿನಲ್ಲಿ ಮಧ್ಯಾಹ್ನ 1.15ಕ್ಕೆ ಧಾರವಾಡದಿಂದ ಹೊರಟು ರಾತ್ರಿ 8.10ಕ್ಕೆ ಬೆಂಗಳೂರು ತಲುಪಲಿದೆ.

ಪ್ರಯಾಣದ ಸಮಯ: ವಂದೇ ಭಾರತ್ ಮೂಲಕ ಕೆಎಸ್ಆರ್ ಬೆಂಗಳೂರು ನಗರ ಮತ್ತು ಧಾರವಾಡ ನಡುವಿನ ಒಟ್ಟು ನಿರೀಕ್ಷಿತ ಪ್ರಯಾಣದ ಸಮಯವು 6 ಗಂಟೆ 55 ನಿಮಿಷಗಳು. ಇದು ಜನ ಶತಾಬ್ದಿ ಎಕ್ಸ್‌ಪ್ರೆಸ್‌ಗೆ ಹೋಲಿಸಿದರೆ ವೇಗದ ಪ್ರಯಾಣ ಹೆಚ್ಚಿದೆ. ಇದು ಕೆಎಸ್‌ಆರ್ ಬೆಂಗಳೂರು ನಗರ ಮತ್ತು ಧಾರವಾಡ ನಡುವಿನ ದೂರವನ್ನು ಪೂರ್ಣಗೊಳಿಸಲು ಸುಮಾರು ಏಳು ಗಂಟೆಗಳನ್ನು ತೆಗೆದುಕೊಳ್ಳುತ್ತದೆ.
ನಿಲ್ದಾಣಗಳು: ರೈಲು ಮಂಗಳವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ಕಾರ್ಯನಿರ್ವಹಿಸುತ್ತದೆ. ಈ ರೈಲಿಗೆ ಯಶವಂತಪುರ, ದಾವಣಗೆರೆ ಮತ್ತು ಹುಬ್ಬಳ್ಳಿಯಲ್ಲಿ ನಿಲುಗಡೆ ಇರುತ್ತದೆ.

ಕಾರ್ಯಾಚರಣೆಯಲ್ಲಿರುವ ವಂದೇ ಭಾರತ್ ರೈಲುಗಳು
1- ನವದೆಹಲಿ - ವಾರಣಾಸಿ ವಂದೇ ಭಾರತ್ ಎಕ್ಸ್‌ಪ್ರೆಸ್
2- ನವದೆಹಲಿ - ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ ವಂದೇ ಭಾರತ್ ಎಕ್ಸ್‌ಪ್ರೆಸ್
3- ಮುಂಬೈ ಸೆಂಟ್ರಲ್ - ಗಾಂಧಿನಗರ ರಾಜಧಾನಿ ವಂದೇ ಭಾರತ್ ಎಕ್ಸ್‌ಪ್ರೆಸ್
4- ನವದೆಹಲಿ - ಅಂಬ್ ಅಂದೌರಾ ವಂದೇ ಭಾರತ್ ಎಕ್ಸ್‌ಪ್ರೆಸ್
5- ಎಂಜಿಆರ್ ಚೆನ್ನೈ ಸೆಂಟ್ರಲ್ - ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್
6- ಬಿಲಾಸ್ಪುರ್ - ನಾಗ್ಪುರ ವಂದೇ ಭಾರತ್ ಎಕ್ಸ್ಪ್ರೆಸ್
7- ಹೌರಾ - ನ್ಯೂ ಜಲ್ಪೈಗುರಿ ವಂದೇ ಭಾರತ್ ಎಕ್ಸ್‌ಪ್ರೆಸ್
8- ವಿಶಾಖಪಟ್ಟಣಂ - ಸಿಕಂದರಾಬಾದ್ ವಂದೇ ಭಾರತ್ ಎಕ್ಸ್‌ಪ್ರೆಸ್
9- ಮುಂಬೈ- ಸೊಲ್ಲಾಪುರ ವಂದೇ ಭಾರತ್ ಎಕ್ಸ್‌ಪ್ರೆಸ್
10- ಮುಂಬೈ- ಸಾಯಿನಗರ ಶಿರಡಿ ವಂದೇ ಭಾರತ್ ಎಕ್ಸ್‌ಪ್ರೆಸ್

11- ರಾಣಿ ಕಮಲಾಪತಿ (ಹಬೀಬ್‌ಗಂಜ್) - ಹಜರತ್ ನಿಜಾಮುದ್ದೀನ್ ವಂದೇ ಭಾರತ್ ಎಕ್ಸ್‌ಪ್ರೆಸ್
12- ಸಿಕಂದರಾಬಾದ್ - ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್
13- ಎಂಜಿಆರ್ ಚೆನ್ನೈ ಸೆಂಟ್ರಲ್ - ಕೊಯಮತ್ತೂರು ವಂದೇ ಭಾರತ್ ಎಕ್ಸ್‌ಪ್ರೆಸ್
14- ದೆಹಲಿ ಕಂಟೋನ್ಮೆಂಟ್ - ಅಜ್ಮೀರ್ ವಂದೇ ಭಾರತ್ ಎಕ್ಸ್‌ಪ್ರೆಸ್
15- ಕಾಸರಗೋಡು - ತಿರುವನಂತಪುರಂ ವಂದೇ ಭಾರತ್ ಎಕ್ಸ್ಪ್ರೆಸ್
16- ಹೌರಾ - ಪುರಿ ವಂದೇ ಭಾರತ್ ಎಕ್ಸ್‌ಪ್ರೆಸ್
17- ಆನಂದ್ ವಿಹಾರ್ ಟರ್ಮಿನಲ್ - ಡೆಹ್ರಾಡೂನ್ ವಂದೇ ಭಾರತ್ ಎಕ್ಸ್‌ಪ್ರೆಸ್
18- ಜಲ್ಪೈಗುರಿ - ಗುವಾಹಟಿ ವಂದೇ ಭಾರತ್ ಎಕ್ಸ್‌ಪ್ರೆಸ್
19- ಮುಂಬೈ- ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್
20- ಪಾಟ್ನಾ - ರಾಂಚಿ ವಂದೇ ಭಾರತ್ ಎಕ್ಸ್‌ಪ್ರೆಸ್












Click it and Unblock the Notifications