ವರ್ತೂರು ಸಂತೋಷ್‌ಗೆ 14 ದಿನಗಳ ನ್ಯಾಯಂಗ ಬಂಧನ: ಆರೋಪ ಸಾಬೀತಾದ್ರೆ ಶಿಕ್ಷೆ ಏನು?
ಕನ್ನಡ ಬಿಗ್ ಬಾಸ್ 10ನೇ ಆವೃತ್ತಿಯಲ್ಲಿ ಭಾಗವಹಿಸಿದ್ದ ವರ್ತೂರು ಸಂತೋಷ್ ಅವರನ್ನು ಹುಲಿ ಉಗುರು ಹೊಂದಿದ್ದ ಆರೋಪದಡಿ ಬೆಂಗಳೂರು ದಕ್ಷಿಣ ರಾಮೋಹಳ್ಳಿ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ, ಸದ್ಯ ಪೊಲೀಸರ ವಿಚಾರಣೆ ನಡೆಯುತ್ತಿದ್ದು, ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿತ್ತು.
ನವೆಂಬರ್ 6ರವರೆಗೆ ವರ್ತೂರು ಸಂತೋಷ್ ಅವರಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 14 ದಿನಗಳ ಕಾಲ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, 2ನೇ ಎಸಿಜೆಎಂ ನ್ಯಾಯಾಧೀಶರು ಆದೇಶಿಸಿದ್ದಾರೆ.

ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಕೊರಳಲ್ಲಿದ್ದ ಚಿನ್ನದ ಸರದಲ್ಲಿ ಹುಲಿಯುಗುರಿನ ಪೆಂಡೆಂಟ್ ನೋಡಿದ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು, ತಾವರೆಕೆರೆ ಬಳಿ ಇದ್ದ ಬಿಗ್ ಬಾಸ್ ಮನೆಯಿಂದ ಹೊರ ತಂದು ವಶಕ್ಕೆ ಪಡೆದುಕೊಂಡರು.
ಹಳ್ಳಿಕಾರ್ ತಳಿಯ ಹಸುಗಳ ಬಗ್ಗೆ ಮಾತನಾಡುವ ಮೂಲಕ ವರ್ತೂರು ಸಂತೋಷ್ ಸಾಮಾಜಿಕ ಮಾಧ್ಯಮಗಳಲ್ಲಿ ಗಮನ ಸೆಳೆದಿದ್ದರು. ಹಲವು ಯೂಟ್ಯೂಬ್ ವಾಹಿನಿಗಳು ವರ್ತೂರು ಸಂತೋಷ್ ಅವರ ಜೀವನ, ಮನೆ, ಕೃಷಿ ಬದುಕನ್ನು ತೋರಿಸುವ ಮೂಲಕ ಅವರು ತಕ್ಕ ಮಟ್ಟಿಗೆ ಹೆಸರು ಮಾಡಿದ್ದರು.
ಬೆಂಗಳೂರಿನ ಹೊರವಲಯದಲ್ಲಿ ಹಳ್ಳಿಕಾರ್ ಎತ್ತಿನಗಾಡಿ ಓಟ ಸ್ಪರ್ಧೆಯನ್ನು ಏರ್ಪಡಿಸುವ ಮೂಲಕ ಅವರು ಗಮನ ಸೆಳೆದಿದ್ದರು. ಹಳ್ಳಿಕಾರ್ ಒಡೆಯ ಎಂದೇ ಗುರುತಿಸಿಕೊಂಡಿದ್ದ ಅವರು, ಹಸು, ಎತ್ತುಗಳ ಮೇಲೆ ಕಾಳಜಿ ಮತ್ತು ಪ್ರೀತಿಯನ್ನು ಹೊಂದಿದ್ದರು.
ವರ್ತೂರು ಸಂತೋಷ್ ಹೇಳಿದ್ದೇನು?
ವಿಚಾರಣೆ ವೇಳೆ ವರ್ತೂರು ಸಂತೋಷ್ ಹಲವು ಪ್ರಮುಖ ಮಾಹಿತಿ ನೀಡಿದ್ದಾರೆ. ಮೂರು ವರ್ಷಗಳ ಹಿಂದೆ ಹುಲಿ ಉಗುರು ಖರೀದಿಸಿದ್ದಾಗಿ ಹೇಳಿದ್ದು, ಇದು ಅಸಲಿ ಹುಲಿ ಉಗುರು ಎಂದು ಅವರು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈಗ ಸಂತೋಷ್ ಅವರಿಗೆ ಹುಲಿ ಉಗುರು ಮಾರಿರುವರನ್ನು ಕೂಡು ಅರಣ್ಯಾಧಿಕಾರಿಗಳು ಹುಡುಕಲು ಮುಂದಾಗಿದ್ದಾರೆ.
ಆರೋಪ ಸಾಬೀತಾದ್ರೆ ಏನು ಶಿಕ್ಷೆ?
ಹುಲಿ ಉಗುರು ಹೊಂದಿದ್ದಾರೆ ಎನ್ನುವ ಆರೋಪದ ಮೇಲೆ ಸಂತೋಷ್‌ರನ್ನು ಬಂಧಿಸಲಾಗಿದೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಅವರ ಮೇಲಿನ ಆರೋಪ ಸಾಬೀತಾದರೆ ಕಠಿಣ ಶಿಕ್ಷೆ ಸಿಗುವ ಸಾಧ್ಯತೆ ಇದೆ.
ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ವರ್ತೂರು ಸಂತೋಷ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅವರ ಕೊರಳಿನಲ್ಲಿ ಇದ್ದ ಸರದಲ್ಲಿನ ಹುಲಿ ಉಗುರುಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದ್ದು, ಪ್ರಯೋಗಾಲಯದಲ್ಲಿ ಅದು ಅಸಲಿಯೋ ಅಥವಾ ನಕಲಿಯೋ ಎಂದು ತಿಳಿಯಲಿದೆ.
ಒಂದು ವೇಳೆ ಅವು ನಕಲಿಯಾದರೆ ವರ್ತೂರು ಸಂತೋಷ್ ಬಚಾವಾಗಲಿದ್ದಾರೆ ಆದರೆ, ಅವರ ಬಳಿ ಇದ್ದ ಹುಲಿ ಉಗುರು ಅಸಲಿಯಾದರೆ ಮಾತ್ರ ಸಂಕಷ್ಟ ಹೆಚ್ಚಾಗಲಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಅಡಿಯಲ್ಲಿ ಆರೋಪ ಸಾಬೀತಾದರೆ 3 ರಿಂದ 7 ವರ್ಷಗಳವರೆಗೆ ಶಿಕ್ಷೆ ಆಗುತ್ತದೆ. ₹10,000 ರಿಂದ ₹25,000ದವರೆಗೆ ದಂಡ ವಿಧಿಸುವ ಸಾಧ್ಯತೆ ಇದೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications