ರಾಜ್ಯದಲ್ಲಿ ಪೆಟ್ರೋಲ್ ಮೇಲಿನ ವ್ಯಾಟ್ ಕಡಿಮೆ ಮಾಡ್ತಾರಾ ಎಚ್ಡಿಕೆ?
ಬೆಂಗಳೂರು, ಸೆಪ್ಟೆಂಬರ್ 10: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ಪೆಟ್ರೋಲ್ 84 ರೂ.ಗೆ ಬಂದು ನಿಂತಿದೆ. ತೈಲ ಬೆಲೆ ಕಡಿಮೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಕಾಂಗ್ರೆಸ್ ಬಂದ್ ಗೆ ಕರೆ ನೀಡಿದೆ.
ಕೇಂದ್ರ ಸರ್ಕಾರವಂತೂ ತೈಲ ಬೆಲೆ ಕಡಿಮೆ ಮಾಡುವ ರೀತಿ ಕಾಣುತ್ತಿಲ್ಲ, ಕನಿಷ್ಠ ಪಕ್ಷ ರಾಜ್ಯ ಸರ್ಕಾರವಾದರೂ ತೈಲದ ಮೇಲಿನ ವ್ಯಾಟ್ ಕಡಿಮೆ ಮಾಡುತ್ತಾರಾ ಎನ್ನುವುದು ಪ್ರಶ್ನೆಯಾಗಿದೆ.
ಕರ್ನಾಟಕ ಹಾಗೂ ಪಂಜಾಬ್ ಮುಖ್ಯಮಂತ್ರಿಗಳಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ವ್ಯಾಟ್ ಇಳಿಕೆ ಮಾಡುವಂತೆ ಈಗಾಗಲೇ ಸೂಚನೆ ಕೊಡಲಾಗಿದೆ ಎಂದು ಹಿಮಾಚಲ ಪ್ರದೇಶದ ಕಾಂಗ್ರೆಸ್ ಉಸ್ತುವಾರಿ ರಜನಿ ಪಾಟೀಲ್ ತಿಳಿಸಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆ ಇಳಿಯುತ್ತಾ ಎಂದು ಕಾದು ನೋಡಬೇಕಿದೆ.

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸಿನ ವೀರಭದ್ರಸಿಂಗ್ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಶೇ.2ರಷ್ಟು ತೆರಿಗೆಯನ್ನು ಕಡಿತ ಗೊಳಿಸಲಾಗಿದೆ ಎಂದಿದ್ದಾರೆ. ಕಳೆದ ಜುಲೈ ನಲ್ಲಿ ಕರ್ನಾಟಕ ಬಜೆಟ್ ಮಂಡನೆ ಮಾಡಿದ್ದ ಎಚ್ಡಿ ಎಚ್ಡಿ ಕುಮಾರಸ್ವಾಮಿ ಲೀಟರ್ ಪೆಟ್ರೋಲ್ ಮೇಲಿನ ತೆರಿಗೆಯನ್ನು 1.14 ರೂ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು 1.12ರೂ.ನಷ್ಟು ಏರಿಕೆ ಮಾಡಿದ್ದರು.
ಕಳೆದ ವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ತೈಲ ಬೆಲೆ ಇಳಿಕೆ ಕುರಿತು ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದರು. ಹೀಗಾಗಿ ಪೆಟ್ರೋಲ್-ಡೀಸೆಲ್ ಬೆಲೆ ಇಳಿಯುತ್ತಾ ಎನ್ನುವ ಕುತೂಹಲ ಆರಂಭವಾಗಿದೆ.
-
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Gold Rate April 8: ಯುದ್ಧ ನಿಂತ ಬೆನ್ನಲ್ಲೇ ಚಿನ್ನ - ಬೆಳ್ಳಿ ಬೆಲೆ ಭಾರೀ ಹೆಚ್ಚಳ, ಎಷ್ಟಿದೆ ಇಂದಿನ ಚಿನ್ನದ ಬೆಲೆ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
Donald Trump: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಕಳಪೆ ಕೆಲಸ ಮಾಡಿದೆ: ಡೊನಾಲ್ಡ್ ಟ್ರಂಪ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್ -
Iran-US-Israel War: ಪಾಕಿಸ್ತಾನದ ಮಧ್ಯಪ್ರವೇಶದಿಂದಾಗಿ ಇರಾನ್ ಮೇಲೆ ವಿನಾಶಕಾರಿ ಬಾಂಬ್ ದಾಳಿ ಇಲ್ಲ: ಡೊನಾಲ್ಡ್ ಟ್ರಂಪ್ -
IIT Baba Love Story: ಬೆಂಗಳೂರು ಮೂಲದ ಪ್ರತೀಕಾ ಕೈಹಿಡಿದ ಐಐಟಿ ಬಾಬಾ ಅಲಿಯಾಸ್ ಅಭಯ್ ಸಿಂಗ್ -
ಇರಾನ್-ಅಮೆರಿಕ ಯುದ್ಧದಲ್ಲಿ ಶರಣಾಗಿದ್ದು ಪಾಕಿಸ್ತಾನ: ಕೃಷ್ಣಭಟ್ ಬರಹ -
US-Iran ceasefire: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಶೇ. 20ರಷ್ಟು ದಾಖಲೆಯ ಕುಸಿತ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು












Click it and Unblock the Notifications