ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೇಕೆದಾಟು ವಿವಾದ : ಅತ್ತಿಬೆಲೆ ಬಂದ್‌ಗೆ ಕರೆ ನೀಡಿದ ವಾಟಾಳ್ ನಾಗರಾಜ್

|
Google Oneindia Kannada News

ಬೆಂಗಳೂರು, ಜನವರಿ 10 : ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅತ್ತಿಬೆಲೆ ಬಂದ್‌ಗೆ ಕರೆ ನೀಡಿದ್ದಾರೆ. ತಮಿಳುನಾಡು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಬಂದ್ ಕರೆ ನೀಡಲಾಗಿದೆ.

ಗುರುವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ವಾಟಾಳ್ ನಾಗರಾಜ್ ಅವರು ಜನವರಿ 12ರ ಶನಿವಾರ ಬೆಳಗ್ಗೆ 11.30ಕ್ಕೆ ಅತ್ತಿಬೆಲೆ ಬಂದ್ ನಡೆಸಲಾಗುತ್ತದೆ ಎಂದು ಹೇಳಿದರು. ಬೆಂಗಳೂರು-ತಮಿಳುನಾಡು ಗಡಿಯಲ್ಲಿ ವಾಹನ ತಡೆದು ಪ್ರತಿಭಟನೆ ನಡೆಸಲಾಗುತ್ತದೆ.

ಚಿತ್ರಗಳು : ಮೇಕೆದಾಟುಗೆ ಸಚಿವ ಡಿ.ಕೆ.ಶಿವಕುಮಾರ್ ಭೇಟಿಚಿತ್ರಗಳು : ಮೇಕೆದಾಟುಗೆ ಸಚಿವ ಡಿ.ಕೆ.ಶಿವಕುಮಾರ್ ಭೇಟಿ

ಕರ್ನಾಟಕದ ಕಾವೇರಿ ನದಿ ಪಾತ್ರದ ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಾಣ ಮಾಡಲು ಮುಂದಾಗಿದೆ. ಇದನ್ನು ತಮಿಳುನಾಡು ಸರ್ಕಾರ ವಿರೋಧಿಸುತ್ತಿದೆ. ಆದ್ದರಿಂದ, ಗಡಿಭಾಗದಲ್ಲಿ ತಮಿಳುನಾಡು ವಾಹನಗಳನ್ನು ತಡೆದು ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಲಿದ್ದಾರೆ.

ಮೇಕೆದಾಟು ಯೋಜನೆ : ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹೇಳಿದ್ದೇನು?ಮೇಕೆದಾಟು ಯೋಜನೆ : ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹೇಳಿದ್ದೇನು?

ಕೇಂದ್ರ ಜಲ ಆಯೋಗ ಮೇಕೆದಾಟು ಯೋಜನೆಯ ವಿಸ್ತ್ರತ ಯೋಜನಾ ವರದಿ (ಡಿಪಿಎಆರ್) ಸಿದ್ಧಪಡಿಸಿ ನೀಡಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ. ಆದರೆ, ತಮಿಳುನಾಡು ಸರ್ಕಾರ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದು, ಈ ಬಗ್ಗೆ ಸುಪ್ರೀಂಕೋರ್ಟ್ ಮೊರೆ ಹೋಗಿದೆ.

ಮೇಕೆದಾಟು ಯೋಜನೆಗೆ ತಮಿಳುನಾಡಿನ ವಿರೋಧವೇಕೆ?ಮೇಕೆದಾಟು ಯೋಜನೆಗೆ ತಮಿಳುನಾಡಿನ ವಿರೋಧವೇಕೆ?

ಮೇಕೆದಾಟು ಯೋಜನೆ

ಮೇಕೆದಾಟು ಯೋಜನೆ

ಕರ್ನಾಟಕ ಸರ್ಕಾರ ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣ ಮಾಡಿ ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆ ಮಾಡುವ ತೀರ್ಮಾನವನ್ನು ಕೈಗೊಂಡಿದೆ. 'ಮೇಕೆದಾಟು ಯೋಜನೆ ಪೂರ್ಣಗೊಂಡರೆ 400 ಮೆಗಾವಾಟ್ ವಿದ್ಯುತ್, ಬೆಂಗಳೂರಿಗೆ 17 ಟಿಎಂಸಿ ನೀರು ಸಿಗಲಿದೆ' ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ತಮಿಳುನಾಡು ವಿರೋಧ

ತಮಿಳುನಾಡು ವಿರೋಧ

ಕಾವೇರಿ ನದಿ ಪಾತ್ರದಲ್ಲಿ ಯಾವುದೇ ಅಣೆಕಟ್ಟು ನಿರ್ಮಾಣ ಮಾಡಬಾರದು. ಇದು ಕಾವೇರಿ ಜಲವಿವಾದದ ಅಂತಿಮ ತೀರ್ಪಿನ ಉಲ್ಲಂಘನೆ ಎಂದು ತಮಿಳುನಾಡು ಸರ್ಕಾರ ಹೇಳಿದೆ. ಮೇಕೆದಾಟು ಯೋಜನೆ ಜಾರಿಗೆ ಒಪ್ಪಿಗೆ ನೀಡಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ. ಸುಪ್ರೀಂಕೋರ್ಟ್‌ಗೂ ಈ ಕುರಿತು ಅರ್ಜಿ ಸಲ್ಲಿಸಿದೆ.

ರಾಜಕೀಯ ಒತ್ತಡ

ರಾಜಕೀಯ ಒತ್ತಡ

'ರಾಜಕೀಯ ಒತ್ತಡದ ಕಾರಣ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆ ವಿರೋಧ ಮಾಡುತ್ತಿದೆ. ಯೋಜನೆ ಕುರಿತು ಸಂಪೂರ್ಣ ಮಾಹಿತಿಯನ್ನು ತಮಿಳುನಾಡು ಜೊತೆ ಹಂಚಿಕೊಳ್ಳಲು ಸಿದ್ಧನಿದ್ದೇನೆ. ಈ ಯೋಜನೆಗೆ ಅವರು ತಕರಾರು ಮಾಡುವುದಿಲ್ಲ ಎಂಬ ವಿಶ್ವಾಸವಿದೆ' ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹೇಳುವುದೇನು?

ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹೇಳುವುದೇನು?

ತಮಿಳುನಾಡು ಸರ್ಕಾರ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿಯೂ ಯೋಜನೆಗೆ ವಿರೋಧ ವ್ಯಕ್ತಪಡಿಸಿತ್ತು. 'ಕೇಂದ್ರ ಜಲ ಆಯೋಗ ಕೇವಲ ಕಾರ್ಯಸಾಧು ಯೋಜನೆಗೆ ಮಾತ್ರ ಒಪ್ಪಿಗೆ ನೀಡಿದೆ. ಹೊರತು ಯೋಜನೆಗೆ ಅಲ್ಲ. ವರದಿ ಕೇಳುವುದು ವಿವಾದದ ವಿಚಾರವಲ್ಲ. ವರದಿ ಬಂದ ಬಳಿಕ ಎಲ್ಲಾ ರಾಜ್ಯಗಳ ಅಭಿಪ್ರಾಯ ಸಂಗ್ರಹಣೆ ಮಾಡಿ, ಕೇಂದ್ರ ಜಲಸಂಪನ್ಮೂಲ ಇಲಾಖೆಗೆ ಅಂತಿಮ ಒಪ್ಪಿಗೆಗಾಗಿ ಕಳುಹಿಸಲಾಗುತ್ತದೆ' ಎಂದು ಪ್ರಾಧಿಕಾರದ ಅಧ್ಯಕ್ಷ ಮಸೂದ್ ಹುಸೇನ್ ಹೇಳಿದ್ದಾರೆ.

5900 ಕೋಟಿ ವೆಚ್ಚ

5900 ಕೋಟಿ ವೆಚ್ಚ

'ಮೇಕೆದಾಟು ಯೋಜನೆಗೆ 5900 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಇದರಲ್ಲಿ 2 ಸಾವಿರ ಕೋಟಿ ಕೆಪಿಸಿಎಲ್ ಭರಿಸಲಿದೆ. ಉಳಿದ ಮೊತ್ತವನ್ನು ಜಲಸಂಪನ್ಮೂಲ ಇಲಾಖೆ ಭರಿಸಲಿದೆ. ಯೋಜನೆಗೆ ಹಣಕಾಸಿನ ತೊಂದರೆ ಇಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

English summary
Kannada Chaluvali Vatal Paksha president Vatal Nagaraj called for Attibele bandh on January 12, 2019. Bandh called to protest against Tamil Nadu which opposed Mekedatu drinking water project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X