Arjuna Elephant Death: ಉನ್ನತ ತನಿಖೆಗೆ ಆಗ್ರಹಿಸಿ ರಾಜಧಾನಿಯಲ್ಲಿ ಪ್ರತಿಭಟನೆ
ಬೆಂಗಳೂರು, ಡಿಸೆಂಬರ್ 05: ಸಾಂಸ್ಕೃತಿ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಅರ್ಜುನ (Arjun elephant) ಕಾರ್ಯಾಚರಣೆ ವೇಳೆ ಸಾವನ್ನಪ್ಪಿದೆ. ಅರ್ಜುನ ಸಾವಿನ ತನಿಖೆಗೆ ಆಗ್ರಹಿಸಿ ಇಂದು ಮಂಗಳವಾರ ಸಂಜೆ ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಹಾಸನ ಜಿಲ್ಲೆ ಸಕಲೇಶಪುರದ ಯಳಸೂರು ಸಮೀಪ ಅರಣ್ಯ ಇಲಾಖೆ ಕಾರ್ಯಚರಣೆ ನಡೆಸಲಾಗಿತ್ತು. ಈ ವೇಳೆ ಒಂಟಿಸಲಗದ ದಾಳಿಯಿಂದ ಅರ್ಜುನ ಮೃತಪಟ್ಟಿದ್ದು, ಮುಖ್ಯಮಂತ್ರಿ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

ಇದೀಗ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ಇಂದು ಸಂಜೆ 4ಗಂಟೆಗೆ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. 'ಅಂಬಾರಿ ಆನೆ ಅರ್ಜುನ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಬೇಕು. ತಪ್ಪಿತಸ್ಥರಿಗೆ ಶಿಕ್ಷ ಆಗಬೇಕು' ಎಂದು ಆಗ್ರಹಿಸಿ ಅವರು ಪ್ರತಿಭಟನೆ ಮಾಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಲ್ಲೇಶ್ವರಂ ಅರಣ್ಯ ಭವನ ಮುಂದೆ ಧರಣಿ
ಮಲ್ಲೇಶ್ವರಂ 18ನೇ ಕ್ರಾಸ್‌ನಲ್ಲಿ ಅರಣ್ಯ ಭವನದ ಮುಂದೆ ವಾಟಾಳ್ ನಾಗರಾಜ್ ಮತ್ತವರ ಪಕ್ಷದ ಸದಸ್ಯರು, ಕಾರ್ಯಕರ್ತರು ಜಮಾವಣೆ ಆಗಿ ಧರಣಿ ಮಾಡಲಿದ್ದಾರೆ.
ಕಾಡಾನೆ ದಾಳಿಗೆ ಅರ್ಜುನ ಸಾವಿಗೀಡಾಗುತ್ತಿದ್ದಂತೆ ಅದರ ಮಾವುತ ವಿನು ಮತ್ತು ಕಾವಾಡಿಗರು ಕಣ್ಣೀರಿಟ್ಟಿದ್ದಾರೆ. ಅರ್ಜುನನ್ನು ತಬ್ಬಿಕೊಂಡು ಗೋಳಾಡಿದ್ದಾರೆ. ಅಗಲಿದ ಅರ್ಜುನ ನೆನೆದು ಭಾವುಕರಾಗಿದರು. ಸದ್ಯ ಅರ್ಜುನನ್ನು ಸಕಲೇಶಪುರದ ದಬ್ಬಳ್ಳಿಕಟ್ಟೆ ಬಳಿಕ ಅಂತ್ಯಕ್ರಿಯೆ ಮಾಡಲಾಗುತ್ತಿದೆ.

ಅರ್ಜುನನ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ
ಈ ಅಂತ್ಯಕ್ರಿಯೆಗೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನೆ ಆರಂಭಿಸಿದ್ದರು. ಸರ್ಕಾರ ಮತ್ತು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ಅಲ್ಲದೇ ಮೃತ ಅರ್ಜುನ ಆನೆಯನ್ನು ಮೈಸೂರಲ್ಲಿ ಅಂತ್ಯಕ್ರಿಯೆ ಮಾಡಬೇಕು ಎಂಬ ಒತ್ತಾಯವು ಕೇಳಿ ಬಂದಿತ್ತು. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.
ಸದ್ಯ ಸ್ಥಳೀಯರ ವಿರೋಧದ ನಡುವೆ ಅರ್ಜುನ್ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜೆಸಿಬಿಯಿಂದ ಆಳವಾಗಿ ತೆಗ್ಗು ತೆಗೆಯುವ ಪ್ರಕ್ರಿಯೆ ಮುಂದುವರಿದಿದೆ. ಪರಿಸ್ಥಿತಿ ಕೈ ಮೀರದಂತೆ ಸರ್ಕಾರ ಅಂತ್ಯಕ್ರಿಯೆ ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಸಂಜೆ ವೇಳೆಗೆ ಅಂತ್ಯಕ್ರಿಯೆ ಪೂರ್ಣಗೊಳ್ಳಲಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್











Click it and Unblock the Notifications