Penna Obalayya: 2025ರ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪೆನ್ನ ಓಬಳಯ್ಯ ನಿಧನ: ಸಿಎಂ ಸಂತಾಪ
ಬೆಂಗಳೂರು, ನವೆಂಬರ್ 03: ಇದೇ ವರ್ಷ 2025ರ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿ ಮೊನ್ನೆಯಷ್ಟೇ ಪ್ರಶಸ್ತಿ ಸ್ವೀಕರಿಸಿದ ವೀಣೆ ತಯಾರಕ, ಸಾಧಕ ಪೆನ್ನ ಓಬಳಯ್ಯ ಅವರು ನಿಧನ ಭಾನುವಾರ ರಾತ್ರಿ ನಿಧನವಾಗಿದ್ದಾರೆ. ಅವರ ದುಃಖ ಅತೀವ ನೋವು ತರಿಸಿದೆ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ವೀಣೆ ತಯಾರಕ ಪೆನ್ನ ಓಬಳಯ್ಯ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಸಿಂಪಾಡಿಪುರ ಗ್ರಾಮದ ನಿವಾಸಿ. ಅವರು ತಮ್ಮ ಗ್ರಾಮದಲ್ಲಿ ಬಹುಕಾಲದಿಂದಲೂ ವೀಣೆ ತಯಾರಿಕೆಯಲ್ಲಿ ನಿರತರಾಗಿದ್ದರು. ಅದರಲ್ಲಿನ ಅವರ ಪ್ರತಿಭೆ ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಮಾಡಲಾಗಿತ್ತು. ಪ್ರಶಸ್ತಿ ಸ್ವೀಕರಿಸಿದ ಎರಡು ದಿನದ ಬಳಿಕ ಅವರು 105 ವರ್ಷದ ಪೆನ್ನ ಓಬಳ್ಳಯ್ಯ ಅವರು ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಪೆನ್ನ ಓಬಳ್ಳಯ್ಯ ಅವರ ನಿಧನ ಸುದ್ದಿ ವೀಣೆ ತಯಾರಕರಿಗೆ ದೊಡ್ಡ ಆಘಾತ ನೀಡಿದೆ. ಈ ವಲಯ ಬಡವಾಗಿದೆ. ಅವರಿದ್ದ ಗ್ರಾಮವು ರಾಜ್ಯದ ವೀಣೆ ತಯಾರಕ ಏಕೈಕ ಗ್ರಾಮವಾಗಿ ಗುರುತಿಸಿಕೊಂಡಿದೆ. ವೀಣೆ ತಯಾರಿಕೆಯನ್ನು ಮೂಲ ಕಸುಬಾಗಿಸಿಕೊಂಡಿದ್ದ ಓಬಳಯ್ಯ ಅವರು, ಜೀವನದುದ್ದಕ್ಕೆ ವೀಣೆ ತಯಾರಿಸಿಕೊಂಡೆ ಬದುಕಿದವರು. ಅವರಿಂದ ಅನೇಕರು ತಯಾರಿಕರಾಗಿ ಜೀವನ ಕಂಡುಕೊಂಡಿದ್ದಾರೆ.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪೆನ್ನ ಓಬಳ್ಳಯ್ಯ ಅವರ ನಿಧನ ಸುದ್ದಿ ತಿಳಿದ ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ ಪೋಸ್ಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. "ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ವೀಣೆ ತಯಾರಕ ಪೆನ್ನ ಓಬಳಯ್ಯ ಅವರ ನಿಧನ ಅತೀವ ದುಃಖ ತಂದಿದೆ. ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಸಮೀಪದ ಸಿಂಪಾಡಿಪುರದ ನಿವಾಸಿಯಾಗಿದ್ದ ಓಬಳಯ್ಯ ಅವರು ಇಡೀ ದೇಶಕ್ಕೆ ವೀಣೆ ತಯಾರಿಸಿ ಸರಬರಾಜು ಮಾಡುತ್ತಿದ್ದವರು. ಜೊತೆಗೆ ಆಸಕ್ತರಿಗೆ ವೀಣೆ ತಯಾರಿಕೆಯ ಕೌಶಲ್ಯವನ್ನು ಕಲಿಸಿ, ಸಾಂಪ್ರದಾಯಿಕ ಸಾಹಿತ್ಯದ ನಿರಂತರತೆಯನ್ನು ಕಾಪಾಡುವಲ್ಲಿ ಶ್ರಮಿಸಿದ್ದರು'.
"ಹಿರಿಯ ಜೀವ ಓಬಳಯ್ಯನವರ ಅಗಲಿಕೆಯಿಂದ ನಾಡು ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ದುಃಖ ಭರಿಸುವ ಶಕ್ತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ' ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಕನ್ನಡ & ಸಂಸ್ಕೃತಿ ಸಚಿವರ ಸಂತಾಪ
ಮೊನ್ನೆ ನಡೆದ 70ನೇ ರಾಜ್ಯೋತ್ಸವ ಸಂದರ್ಭದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ವೀಣೆ ಬ್ರಹ್ಮ ಎಂದೇ ಖ್ಯಾತರಾಗಿದ್ದ ಪೆನ್ನ ಓಬಳಯ್ಯ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಮಧುರೈ ಸಮೀಪದ ಸಿಂಪಾಡಿ ಪುರದ ನಿವಾಸಿಯಾಗಿದ್ದ ಅವರು ಇಡೀ ದೇಶಕ್ಕೆ ಸಾಂಪ್ರದಾಯಿಕ ವೀಣೆ ತಯಾರಿಸಿ ಸರಬರಾಜು ಮಾಡುತ್ತಿದ್ದರು.
ಅವರಿಂದ ನೂರಾರು ಜನ ವೀಣೆ ತಯಾರಿಸುವುದನ್ನ ಕಲಿತಿದ್ದಾರೆ.
103 ವರ್ಷದ ಪೆನ್ನ ಹೋಬಳಯ್ಯ ಅವರ ಈ ಸಾಧನೆಯನ್ನು ಗುರುತಿಸಿ ಮೊನ್ನೆ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿತ್ತು. ಪ್ರಶಸ್ತಿ ಸ್ವೀಕರಿಸಲು ಬಂದ ಪೆನ್ನಓಬಳಯ್ಯ ಅಸ್ವಸ್ಥರಾಗಿದ್ದರು. ಅವರ ಪರವಾಗಿ ಅವರ ಮಕ್ಕಳು ಪ್ರಶಸ್ತಿ ಸ್ವೀಕಾರ ಮಾಡಿದ್ದರು. ಪ್ರಶಸ್ತಿ ಪಡೆದ ಮರುದಿನವೇ ಅವರು ದೈವಾಧೀನರಾಗಿರುವುದು ದುರಾದೃಷ್ಟಕರ. ಸಿಂಪಾಡಿ ಪುರದ ಹೆಸರನ್ನು ತಮ್ಮ ವೀಣಿಗಳ ಮೂಲಕ ರಾಷ್ಟ್ರಕ್ಕೆ ಪರಿಚಯಿಸಿದ ಪೆನ್ನ ಓಬಳಯ್ಯ ಅವರ ಸಾಂಸ್ಕೃತಿಕ ಸೇವೆಯನ್ನು ನೆನೆಯುತ್ತಾ ಅವರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸುತ್ತೇನೆ ಎಂದು ಶಿವರಾಜ ತಂಗಡಗಿ ಅವರು ತಿಳಿಸಿದ್ದಾರೆ.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications