Get Updates
Get notified of breaking news, exclusive insights, and must-see stories!

ಬೆಂಗಳೂರು: ಸ್ವಾಮಿ ವಿವೇಕಾನಂದರ ಜೀವನಾಧಾರಿತ 'ವೀರ ಸಂನ್ಯಾಸಿಯ ಆತ್ಮ ಗೀತೆ' ಏ.25ಕ್ಕೆ

ಬೆಂಗಳೂರು, ಏಪ್ರಿಲ್ 20: ಉದ್ಯಾನ ನಗರಿ ಬೆಂಗಳೂರಿನಲ್ಲಿ ಸ್ವಾಮಿ ವಿವೇಕಾನಂದರ ಜೀವನಾಧಾರಿತ 'ವೀರ ಸಂನ್ಯಾಸಿಯ ಆತ್ಮ ಗೀತೆ' ಎಂಬ ಪ್ರದರ್ಶನವನ್ನು ಆಯೋಜನೆ ಮಾಡಲಾಗಿದೆ. ಖ್ಯಾತ ನಿರ್ದೇಶಕ ಕಾರ್ತಿಕ್ ಸರಗೂರು ನಿರ್ದೇಶನ, ಖ್ಯಾತ ಸಂಗೀತ ಸಂಯೋಜಕ ಪ್ರವೀಣ್ ಡಿ. ರಾವ್ ಸಂಗೀತ ಸಂಯೋಜನೆ, ಗಾಯಕಿ ವಾರಿಜಶ್ರೀ ವೇಣು ಗೋಪಾಲ್ ಗಾಯನವಿದೆ. ಏಪ್ರಿಲ್ 25ರಂದು ಬಿಡುವು ಮಾಡಿಕೊಂಡು ಬನ್ನಿ.

ಪರಮ್ ಕಲ್ಚರ್ ವತಿಯಿಂದ 'ವೀರ ಸಂನ್ಯಾಸಿಯ ಆತ್ಮಗೀತೆ' ಪ್ರದರ್ಶನವನ್ನು ಆಯೋಜನೆ ಮಾಡಲಾಗಿದೆ. ಚೌಡಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಈ ಗೀತೆ ಪ್ರದರ್ಶನ ನಡೆಯಲಿದ್ದು, ಸ್ವಾಮಿ ವಿವೇಕಾನಂದರ ಜೀವನ, ಕೃತಿ ಆಧಾರಿತ ಅತ್ಯದ್ಭುತ ಮಲ್ಟಿಮೀಡಿಯಾ ಪ್ರದರ್ಶನ ಇದಾಗಿದೆ.

Veera Sanyasiya Atma Geete Show In Bengaluru On April 25

ಒಟ್ಟು 2 ಗಂಟೆಗಳ ಕಾಲಾವಧಿಯ ಪ್ರದರ್ಶನ ಇದಾಗಿದೆ. ಸುಮಾರು 35ಕ್ಕೂ ಅಧಿಕ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದರು ಭಾಗಿಯಾಗಲಿದ್ದಾರೆ. ಖ್ಯಾತ ಸಂಗೀತ ಸಂಯೋಜಕರಾದ ಪ್ರವೀಣ್ ಡಿ. ರಾವ್ ಹಾಗೂ ಚಲನಚಿತ್ರ ನಿರ್ದೇಶಕರಾದ ಕಾರ್ತಿಕ್ ಸರಗೂರು ಸಾರಥ್ಯದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಸಂಗೀತ, ನೃತ್ಯ, ನಾಟಕಗಳ ಮೂಲಕ ಸ್ವಾಮಿ ವಿವೇಕಾನಂದರ ಜೀವನ, ಚಿಂತನೆಗಳನ್ನು ಕಟ್ಟಿಕೊಡಲಾಗುತ್ತದೆ.

ಸ್ವಾಮಿ ವಿವೇಕಾನಂದರಿಂದಲೇ ಇಂಗ್ಲಿಷ್, ಬೆಂಗಾಳಿ, ಸಂಸ್ಕೃತದಲ್ಲಿ ರಚಿಸಲ್ಪಟ್ಟ ಹಾಡುಗಳನ್ನು ಹಾಗೂ ಕನ್ನಡ ಸಾರಸ್ವತ ಲೋಕದ ರತ್ನಗಳಾದ ಜಿ. ಎಸ್. ಶಿವರುದ್ರಪ್ಪ, ಕುವೆಂಪು ಸೇರಿದಂತೆ ಹಲವು ಪ್ರಖ್ಯಾತ ಕವಿಗಳು ವಿವೇಕಾನಂದರ ಬಗ್ಗೆ ಬರೆದ ಹಾಡುಗಳನ್ನು ಆಲಿಸಬಹುದು.

ಬೇಡಿಕೆ ಮೇರೆಗೆ ಮತ್ತೊಮ್ಮೆ ಆಯೋಜನೆ: ಜನವರಿಯಲ್ಲಿ ಪ್ರದರ್ಶಿಸಲ್ಪಟ್ಟಿದ್ದ 'ವೀರ ಸಂನ್ಯಾಸಿಯ ಆತ್ಮ ಗೀತೆ' ಪ್ರದರ್ಶನ ಆಗ ಅಭೂತಪೂರ್ವವಾಗಿ ಯಶಸ್ವಿಯಾಗಿತ್ತು. ಪ್ರೇಕ್ಷಕರ ಬೇಡಿಕೆಯ ಮೇರೆಗೆ ಈಗ ಮರುಪ್ರದರ್ಶನವನ್ನು ಕಾಣುತ್ತಿದೆ.

ಸ್ವಾಮಿ ವಿವೇಕಾನಂದರ ತತ್ವ-ಆದರ್ಶಗಳನ್ನು ಮನೆ ಮನೆಗೂ ತಲುಪಿಸುವ ಸಲುವಾಗಿ 'ಪರಮ್' ಇಂತಹದ್ದೊಂದು ಅದ್ಭುತ ಕಾರ್ಯಕ್ರಮವನ್ನು ಮತ್ತೆ ಆಯೋಜಿಸಿದೆ. ಬೇಸಿಗೆಯ ರಜೆಯಲ್ಲಿ ಮಕ್ಕಳಿಗೂ ತೋರಿಸಬಹುದಾದಂತಹ, ಕುಟುಂಬ ಸಮೇತ ಆಸ್ವಾದಿಸುವಂತಹ ಕಾರ್ಯಕ್ರಮ ಇದಾಗಿದೆ. ಬಿಡುವು ಮಾಡಿಕೊಂಡು ಬನ್ನಿ.

ಇದರ ನಿರ್ದೇಶಕರು ಕಾರ್ತಿಕ್ ಸರಗೂರು. ಅತ್ಯುತ್ತಮ ಕಥೆಗಾರರು ಮತ್ತು ಗೀತರಚನೆಕಾರರಾದ ಅವರು ತಮ್ಮ ಚಲನಚಿತ್ರ ನಿರ್ದೇಶನದಿಂದ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿರುವ ಸೃಜನಾತ್ಮಕ ಕಲೆಗಳ ವೃತ್ತಿಪರರು. ಇವರು ಕ್ರೈಸ್ಟ್ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ, ಇಂಗ್ಲಿಷ್ ಸಾಹಿತ್ಯ ಮತ್ತು ಮನೋವಿಜ್ಞಾನದಲ್ಲಿ ಶಿಕ್ಷಣ ಪಡೆದಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು , ತೆಲುಗು ಮುಂತಾದ ಭಾಷೆಗಳಲ್ಲಿ ನಿರರ್ಗಳವಾಗಿ ಮಾತನಾಡಬಲ್ಲ ಇವರು, ಹಲವು ಬಗೆಯ ಕಲಾರಸಿಕರನ್ನು ಸೆಳೆಯುವಂತಹ ಭಾಷಾ ಪ್ರೌಢಿಮೆಯನ್ನು ಹೊಂದಿದ್ದಾರೆ.

ವಾರಿಜಶ್ರೀ ವೇಣುಗೋಪಾಲ್ ಅವರ ಅತ್ಯುತ್ತಮ ಗಾಯನವಿದೆ. ಇವರು 18 ತಿಂಗಳ ಹಸುಗೂಸಾಗಿರುವಾಗಲೇ ಕರ್ನಾಟಕ ಸಂಗೀತದ 100ಕ್ಕೂ ಅಧಿಕ ರಾಗಗಳನ್ನು ಗುರುತಿಸಬಲ್ಲ ಅದ್ಭುತ ಬಾಲ ಪ್ರತಿಭೆಯಾಗಿ ಗುರುತಿಸಿಕೊಂಡಿದ್ದಾರೆ. 4ನೇ ವಯಸ್ಸಿನಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಕಚೇರಿಗಳನ್ನು ನೀಡಲು ಪ್ರಾರಂಭಿಸಿ ಅಂದಿನಿಂದಲೂ ಮನೆ ಮಾತಾಗಿದ್ದಾರೆ. ಜಾಗತಿಕ ಸಂಗೀತ ಪ್ರದರ್ಶನಗಳ ವೇಳೆ ಭಾರತೀಯ ಗಾಯನದ ಪಟ್ಟುಗಳ ಸಹಿತ ಮೂಲ ಅಂಶಗಳೊಂದಿಗೆ ಅಂತರಾತ್ಮದಿಂದ ಹಾಡುವ ಕಲಾವಿದರಲ್ಲಿ ವಾರಿಜಶ್ರೀ ಒಬ್ಬರಾಗಿದ್ದಾರೆ.

ಪ್ರವೀಣ್ ಡಿ. ರಾವ್ ಸಂಗೀತ ಸಂಯೋಜನೆ ಇದೆ. ಪ್ರತಿಭಾವಂತ ಬಹು-ವಾದ್ಯ ಕಲಾವಿದರಾಗಿರುವ ಇವರು ಅಂತಾರಾಷ್ಟ್ರೀಯ ಖ್ಯಾತಿಯ ಶಾಸ್ತ್ರೀಯ ಸಂಗೀತದ ಕಲಾವಿದರು. ಸಂಗೀತ ನಿರ್ದೇಶಕರು, ಸಂಯೋಜಕರು, ತಾಳವಾದ್ಯ ಕಲಾವಿದರು, ರಂಗ ನಿರ್ದೇಶಕರೂ ಆಗಿರುವ ಇವರು ಮೂರು ದಶಕಗಳಿಂದ ಸಂಗೀತ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿಕೊಂಡು ಬರುತ್ತಿದ್ದಾರೆ.

ಏನಿದು ಪರಮ್‌ ವಿಜ್ಞಾನ ಮತ್ತು ಸಂಸ್ಕೃತಿ ಕೇಂದ್ರ?: ಬೆಂಗಳೂರಿನ ಮಾಗಡಿರಸ್ತೆಯ ಚನ್ನೇನಹಳ್ಳಿಯಲ್ಲಿ ಸುಮಾರು 15 ಎಕರೆ ಜಾಗದಲ್ಲಿ ಪರಮ್ ವಿಜ್ಞಾನ ಮತ್ತು ಸಂಸ್ಕೃತಿ ಕೇಂದ್ರ ನಿರ್ಮಾಣಗೊಳ್ಳುತ್ತಿದೆ. ಈ ಕೇಂದ್ರವು, ಭಾರತದಲ್ಲಿ ರೂಪುಗೊಳ್ಳುತ್ತಿರುವ ಅತಿದೊಡ್ಡ ಮಲ್ಟಿ ಎಕ್ಸ್‌ಪೀರಿಯನ್ಸ್‌ ತಾಣವಾಗಿದೆ. ಇದು, ವಿಜ್ಞಾನ, ಇತಿಹಾಸ, ಕಲೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ವೇದಿಕೆಯನ್ನು ಒದಗಿಸಿ ಕೊಡಲಿದೆ. ಇಲ್ಲಿ, ವೈಜ್ಞಾನಿಕ ಆವಿಷ್ಕಾರಗಳೂ, ಸಾಂಸ್ಕೃತಿಕ ಕಲಿಕಾ ಸೌಲಭ್ಯಗಳೂ ಇರಲಿವೆ.

ಪರಮ್‌ ವಿಜ್ಞಾನ ಮತ್ತು ಸಂಸ್ಕೃತಿ ಕೇಂದ್ರದಲ್ಲಿ, ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನ ಭವನ, ಪ್ರದರ್ಶನ ಭವನ, ವಿಜ್ಞಾನ ಕೇಂದ್ರ ಹಾಗೂ ಅತ್ಯುತ್ತಮ ಸೌಲಭ್ಯಗಳುಳ್ಳ ಅತಿಥಿ ಗೃಹಗಳು ನಿರ್ಮಾಣಗೊಳ್ಳುತ್ತಿವೆ. ಈ ಕೇಂದ್ರದ ಮೂಲಕ ಸೇವಾ ಸಂಸ್ಥೆಯು ಯುವ ಮನಸ್ಸುಗಳಿಗೆ ಆಧುನಿಕ ವಿಜ್ಞಾನ ಮತ್ತು ಭಾರತೀಯ ಪ್ರಾಚೀನ ವಿಜ್ಞಾನ, ಇತಿಹಾಸ, ಸಂಸ್ಕೃತಿ, ಕಲೆಯ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶ ಹೊಂದಿದೆ ಎನ್ನುತ್ತಾರೆ ಆಯೋಜಕರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+